ಕಾಂಗ್ರೆಸ್‌ ಭ್ರಷ್ಟಾಚಾರ ದಾಹಕ್ಕೆ ಕೆಂಪೇಗೌಡರು ಕಟ್ಟಿದ ಬೆಂಗಳೂರು ಬಲಿ: ಆರ್‌ ಅಶೋಕ್‌ ಟೀಕೆ

Date:

– ಒಂದೇ ಮಳೆಗೆ ಬೆಂಗಳೂರಿನ ತುಂಬಾ ಬಾಯ್ತೆರೆದಿರುವ ರಸ್ತೆ ಗುಂಡಿಗಳು

– ‘ಬೆಂಗಳೂರು ನಗರಕ್ಕೆ 25,000 ಕೋಟಿ ರೂ. ವಿಶೇಷ ಅನುದಾನ ನೀಡಿ’

40% ಕಮಿಷನ್ ಸರ್ಕಾರ ಅಂತ ಸುಳ್ಳು, ಅಪಪ್ರಚಾರದ ಮೂಲಕ ಕನ್ನಡಿಗರಿಗೆ ಟೋಪಿ ಹಾಕಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ತನ್ನ ಭ್ರಷ್ಟಾಚಾರದ ಹಸಿವು, ದಾಹ ನೀಗಿಸಿಕೊಳ್ಳಲು ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರವನ್ನು ಬಲಿ ಕೊಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಒಂದೇ ಮಳೆಗೆ ಬೆಂಗಳೂರಿನ ತುಂಬಾ ಬಾಯ್ತೆರೆದಿರುವ ಯಮಸ್ವರೂಪಿ ರಸ್ತೆ ಗುಂಡಿಗಳು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಸಲಿಯತ್ತು ಏನು ಎಂಬುದನ್ನು ಬಟಾ ಬಯಲು ಮಾಡಿದೆ” ಎಂದಿದ್ದಾರೆ.

“ಒಂದೇ ಒಂದು ರಸ್ತೆಗುಂಡಿ ಮುಚ್ಚಲು ಕೈಲಾಗದಷ್ಟು ಅಸಮರ್ಥ ಅಯೋಗ್ಯ ಕಾಂಗ್ರೆಸ್ ಸರ್ಕಾರದಿಂದ ಬ್ರ್ಯಾಂಡ್‌ ಬೆಂಗಳೂರು ಹೋಗಿ “ಗುಂಡಿ ಬೆಂಗಳೂರು” ಆಗಿ ಪರಿವರ್ತನೆಗೊಂಡಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲಿಡದೆ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಗುಂಡಿ ಮಚ್ಚಲು ಹೆಣಗಾಡುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ, ರಾಜಧಾನಿಯ ರಸ್ತೆಗಳು ಕೆರೆಗಳಾಗಿವೆ, ಬಡಾವಣೆಗಳು ಜಲಾವೃತವಾಗಿವೆ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ಹೊಡೆದು, ಸಿಲಿಕಾನ್ ಸಿಟಿ ಜನರನ್ನು ಮಳೆ ನೀರಲ್ಲಿ ಮುಳುಗಿಸಿ, ಬೆಂಗಳೂರಿನ ಮರ್ಯಾದೆ ಹರಾಜು ಹಾಕಿದ್ದೀರಲ್ಲ, ಇದೇನಾ ತಾವುಗಳು ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡುವ ಪರಿ” ಎಂದು ಪ್ರಶ್ನಿಸಿದ್ದಾರೆ.

“ಸ್ಕೈ ಡೆಕ್ ನಿರ್ಮಿಸುತ್ತೇನೆ, ಟನಲ್ ರಸ್ತೆ ನಿರ್ಮಿಸುತ್ತೇನೆ ಎಂದು ಅಂಗೈಯಲ್ಲೇ ಅರಮನೆ ತೋರಿಸುತ್ತಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಅಲ್ಲೊಂದು ಇಲ್ಲೊಂದು ಗುಂಡಿ ಮುಚ್ಚಿ ಬಿಟ್ಟಿ ಪ್ರಚಾರಕ್ಕೆ ಪೋಸ್ ಕೊಡುವುದು ಬಿಟ್ಟರೆ ಕಳೆದ 15 ತಿಂಗಳಿಂದ ಸಾಧಿಸಿದ್ದು ದೊಡ್ಡ ಶೂನ್ಯ. ರಾಜಧಾನಿಯ ಯಾವುದೇ ರಸ್ತೆಗಳಿಗೂ ಹೋದರೂ ನೂರಾರು ಗುಂಡಿಗಳು ಕಾಣುತ್ತಿವೆ. ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡಬೇಕಾದ ದುಸ್ಥಿತಿಯನ್ನು ಕಾಂಗ್ರೆಸ್‌ ಸರ್ಕಾರ ತಂದಿಟ್ಟಿದೆ. ಜನಸಾಮಾನ್ಯರು, ವಾಹನ ಸವಾರರು ದಿನನಿತ್ಯ ಛೀ ಥೂ ಎಂದು ಸರ್ಕಾರಕ್ಕೆ ಉಗಿಯುತ್ತಿದ್ದರೂ ದಪ್ಪ ಚರ್ಮದ ಸರ್ಕಾರ ಮಾತ್ರ ತನ್ನ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿರುವುದು ರಾಜ್ಯದ ದುರಂತ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

“ಗಾರ್ಡನ್‌ ಸಿಟಿ, ಗ್ರೀನ್‌, ಸಿಟಿ, ಐಟಿ ಸಿಟಿ, ಸ್ಟಾರ್ಟಪ್‌ ಸಿಟಿ, ಸಿಲಿಕಾನ್‌ ಸಿಟಿ ಎಂದು ಖ್ಯಾತಿ ಹೊಂದಿದ್ದ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು, ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿಯಿಂದ ರಸ್ತೆ ಗುಂಡಿಗಳ ನಗರ, ವಾಟರ್ ಫಾಲ್ಸ್ ನಗರ ಎಂದು ನಗೆಪಾಟಲಿಗೆ ಈಡಾಗಿದೆ. ಬೆಂಗಳೂರಿಗೆ ಈ ಕುಖ್ಯಾತಿ ತಂದುಕೊಡಲು ಡಿ ಕೆ ಶಿವಕುಮಾರ್‌ ಅವರು ಕಳೆದೊಂದು ವರ್ಷದಿಂದ ಅವಿರತವಾಗಿ ಶ್ರಮಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಇಷ್ಟಕ್ಕೂ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ಏನು ಮಾಡಿದೆ ? ಕಾಂಗ್ರೆಸ್ ಸರ್ಕಾರ ಕಳೆದ 15 ತಿಂಗಳ ಆಡಳಿತದಲ್ಲಿ ಬೆಂಗಳೂರಿಗೆ ಬಿಡಿಗಾಸು ಅನುದಾನ ಸಹ ನೀಡಿಲ್ಲ. ಬೆಂಗಳೂರಿನ ಜನತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಏಳುವ ಮುನ್ನ, ರಸ್ತೆ ಗುಂಡಿಗಳಿಂದ ಇನ್ನಷ್ಟು ಅಪಘಾತಗಳು, ಸಾವು ನೋವುಗಳು ಸಂಭವಿಸುವ ಮುನ್ನ ಸಮರೋಪಾದಿಯಲ್ಲಿ ರಸ್ತೆಗಳ ದುರಸ್ತಿ ಮಾಡಬೇಕು. ಬೆಂಗಳೂರು ನಗರಕ್ಕೆ 25,000 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿ, ರಸ್ತೆಗಳು, ರಾಜಕಾಲುವೆಗಳನ್ನ ಸರಿಪಡಿಸುವ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...