ಸರ್ಕಾರದ ನೋಟಿಸ್‌ಗೆ ಬೆಲೆ ನೀಡಲ್ಲ, ಭೂ ಕಬಳಿಕೆ ವಿರುದ್ಧ ಹೋರಾಟ ನಿಲ್ಲದು: ಆರ್ ಅಶೋಕ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್‌ಗೆ ನಾವು ಯಾವುದೇ ಬೆಲೆ ನೀಡಲ್ಲ. ವಕ್ಫ್‌ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಾವು ನಿರಂತರ ಹೋರಾಟ ಮಾಡುತ್ತೇವೆ, ನಮ್ಮ ಹೋರಾಟ ನಿಲ್ಲದು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಮಂಡ್ಯ ಜಿಲ್ಲೆಯ ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿದ ಆರ್‌ ಅಶೋಕ್, “ವಿಪಕ್ಷ ನಾಯಕನಾಗಿ ಎಲ್ಲಿ ಬೇಕಾದರೂ ಓಡಾಡುವ ಅಧಿಕಾರ ನನಗಿದೆ. ಅದಕ್ಕಾಗಿ ವಕ್ಫ್‌ ಭೂಮಿ ಕಬಳಿಸಿದ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ” ಎಂದು ತಿಳಿಸಿದರು.

“ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗವನ್ನು ಒತ್ತುವರಿ ಮಾಡಲಾಗಿದೆ. ಶಾಲೆ ಕಣ್ಣ ಮುಂದೆ ಇದ್ದರೂ ಪಹಣಿಯಲ್ಲಿ ಖಬರಸ್ಥಾನ ಎಂದಿದೆ. ಇದು ಹೆಣ ಹೂಳುವ ಜಾಗವೇ ಎಂಬುದನ್ನು ಗ್ರಾಮಸ್ಥರೇ ಹೇಳಬೇಕು. ನಮ್ಮ ಶಾಲೆ ನಮ್ಮ ಹಕ್ಕು ಎಂಬ ಘೋಷಣೆಯಡಿ ಹೋರಾಟ ನಡೆಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಪಕ್ಷ ನಾಯಕ ಆರ್ ಅಶೋಕ್ ಅವರ ಭೂ ವಂಚನೆ ಹಗರಣ ಬಿಚ್ಚಿಟ್ಟ ಕಾಂಗ್ರೆಸ್‌ ಸಚಿವರು

“ಯಾವುದೇ ಜಮೀನಿನ ತಕರಾರು ಇದ್ದರೂ ಜಿಲ್ಲಾಧಿಕಾರಿಗೆ ಅರ್ಜಿ ನೀಡಬೇಕು. ಆದರೆ ವಕ್ಫ್‌ಗೆ ಸಂಬಂಧಿಸಿದ ಜಮೀನು ವಿವಾದ ಬಂದರೆ ಅದನ್ನು ವಕ್ಫ್‌ನಲ್ಲೇ ಬಗೆಹರಿಸಬೇಕೆಂದು ಈ ಹಿಂದೆ ಕೇಂದ್ರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಕಾನೂನು ತಿದ್ದುಪಡಿ ಮಾಡಿದೆ. ಇದರಿಂದಾಗಿ ಜನರ ಜಮೀನು ಕಬಳಿಕೆಯಾಗುತ್ತಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಆಸ್ತಿ ಮುಜರಾಯಿ ಇಲಾಖೆಯಡಿ ಬಂದು ಸರ್ಕಾರಿ ಆಸ್ತಿಯಾಗುತ್ತದೆ. ಆದರೆ ಮುಸ್ಲಿಂ ಸಂಸ್ಥೆಗಳ ಆಸ್ತಿ ಮಾತ್ರ ವಕ್ಫ್‌ ಅಡಿ ಬರುತ್ತದೆ” ಎಂದು ದೂರಿದರು.

“ರಾಜ್ಯದ ಪ್ರತಿಯೊಬ್ಬರೂ ಪಹಣಿಯಲ್ಲಿ ಪರಿಶೀಲಿಸಬೇಕು. ಅದರಲ್ಲಿ ವಕ್ಫ್‌ ಎಂದು ಇದ್ದರೆ, ನನಗೆ ತಿಳಿಸಿದರೆ ಬಂದು ಹೋರಾಟ ಮಾಡುತ್ತೇನೆ” ಎಂದು ತಿಳಿಸಿದರು.

ಇದೇ ವೇಳೆ ಮಹದೇವಪುರದ ಚಿಕ್ಕಮ್ಮ ದೇವಸ್ಥಾನಕ್ಕೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು. “ನಮ್ಮ ಶಾಲೆ ನಮ್ಮ ಹಕ್ಕು, ನಮ್ಮ ದೇವಸ್ಥಾನ ನಮ್ಮ ಹಕ್ಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಭೂ ಕಬಳಿಕೆಯ ಕ್ಯಾನ್ಸರ್‌ ತಡೆಗಟ್ಟದಿದ್ದರೆ ರೈತರು, ದಲಿತರ ಜಮೀನು ಉಳಿಯುವುದಿಲ್ಲ. ಸ್ವಾತಂತ್ರ್ಯ ಚಳವಳಿ ಮಾಡಿದಂತೆಯೇ ಈಗ ನಾವು ಹೋರಾಟ ಮಾಡಿ ವಕ್ಫ್‌ ಬೋರ್ಡ್‌ ರದ್ದು ಮಾಡಬೇಕಿದೆ” ಎಂದು ಸುದ್ದಿಗಾರರಿಗೆ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...