ಜನಾಕ್ರೋಶ ಯಾತ್ರೆ | ಹೆಣದ ಮೇಲೂ ಹಣ ಮಾಡುವ ಕಾಂಗ್ರೆಸ್‌ ಸರ್ಕಾರ: ಆರ್‌ ಅಶೋಕ್

Date:

ಹೆಣದ ಮೇಲೆ ಹಾಕಿದ ಹಣವನ್ನು ಎಂದೂ ತೆಗೆಯಬಾರದು. ಆದರೆ ಕಾಂಗ್ರೆಸ್‌ ಸರ್ಕಾರ ಹೆಣದ ಮೇಲೂ ಹಣ ಸಂಪಾದಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಬಿಜೆಪಿಯಿಂದ ಆರಂಭವಾದ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, “ಬಿಯರ್‌ ಕುಡಿಯುವವರು ಹೆಚ್ಚುವರಿ 50 ರೂ. ಇಟ್ಟುಕೊಳ್ಳಬೇಕು. ಬೆಂಗಳೂರಿನ ಮನೆಗಳ ಕಸಕ್ಕೂ ತೆರಿಗೆ ಹಾಕಿದ್ದಾರೆ. ಇನ್ನು ಮುಂದೆ ಶೌಚಾಲಯಕ್ಕೂ ಶುಲ್ಕ ವಿಧಿಸಲಿದ್ದಾರೆ. ಸ್ವಲ್ಪ ದಿನಗಳಲ್ಲಿ ಕುಡಿಯುವ ನೀರಿನ ದರ ಏರಿಕೆಯಾಗಲಿದೆ” ಎಂದರು.

ಇದನ್ನು ಓದಿದ್ದೀರಾ? ಬೆಲೆ ಏರಿಕೆ | ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಆರ್ ಅಶೋಕ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂಧನ ಇಲಾಖೆಯಿಂದ ಮನೆಗಳಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಸಿ, ಅದರಲ್ಲಿ 15 ಸಾವಿರ ಕೋಟಿ ರೂ. ಹಗರಣ ಮಾಡಲಾಗುತ್ತಿದೆ. ಲೂಟಿ ಮಾಡುತ್ತಿರುವ ಈ ಸರ್ಕಾರಕ್ಕೆ ಯಾಕಾದರೂ ಓಟು ಹಾಕಿ ಪಾಪ ಮಾಡಿದ್ದೇವೆ ಎಂದು ಜನರು ಯೋಚಿಸುತ್ತಿದ್ದಾರೆ” ಎಂದು ವಿಪಕ್ಷ ನಾಯಕ ಆರೋಪಿಸಿದರು.

“ಡೀಸೆಲ್‌ ದರ ಏರಿಸಿದ್ದು ಕೇಂದ್ರ ಸರ್ಕಾರ ಎಂದು ಒಬ್ಬ ಸಚಿವರು ಹೇಳುತ್ತಾರೆ. ಮತ್ತೊಬ್ಬ ಸಚಿವರಿಗೆ ಕನ್ನಡ ಬರೆಯಲು ಕೂಡ ಬರುವುದಿಲ್ಲ. ಸಚಿವರೆಲ್ಲರೂ ಅಜ್ಞಾನಿಗಳಾಗಿದ್ದಾರೆ. ಇವರೆಲ್ಲರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ಞಾನಿಯಾಗಿದ್ದಾರೆ” ಎಂದು ಕುಟುಕಿದರು.

“ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಿಸುವಾಗ ತೆರಿಗೆ ವಿಧಿಸಲಿಲ್ಲ. ಈಗ ಪ್ರತಿಯೊಂದಕ್ಕೂ ತೆರಿಗೆ ವಿಧಿಸಲಾಗುತ್ತಿದೆ. ಇವರು ಎಂತಹ ವಂಚಕರು ಎಂಬುದು ಇದರಿಂದಲೇ ಗೊತ್ತಾಗುತ್ತದೆ” ಎಂದು ಆರ್‌ ಅಶೋಕ್ ಟೀಕಿಸಿದರು.

“ವಕ್ಫ್‌ ಮಂಡಳಿ ರೈತರ ಜಮೀನು ಲೂಟಿ ಮಾಡುವುದನ್ನು ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿ ಹೊಸ ಮಸೂದೆ ತಂದಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಬೇಕು. ಹಾಗೆಯೇ ಈ ಜನಾಕ್ರೋಶ ಯಾತ್ರೆಯ ಪ್ರತಿಭಟನೆಯನ್ನು ಇನ್ನಷ್ಟು ಮುಂದುವರಿಸಿ ತಾರ್ಕಿಕ ಅಂತ್ಯಕ್ಕೆ ಒಯ್ಯಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...