ಕಣ್ಣಿನ ಶಸ್ತ್ರಚಿಕಿತ್ಸೆ ಬಳಿಕ ಯುಕೆಯಿಂದ ಹಿಂದಿರುಗಿದ ರಾಘವ್ ಚಡ್ಡಾ; ಕೇಜ್ರಿವಾಲ್‌ ನಿವಾಸಕ್ಕೆ ಭೇಟಿ

Date:

ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಯುಕೆಯಿಂದ ಹಿಂದಿರುಗಿದ್ದು ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಸುಮಾರು ಒಂದು ತಿಂಗಳ ನಂತರ ರಾಘವ್ ಚಡ್ಡಾ ಈಗ ಬಹಿರಂಗವಾಗಿ ಕಾಣಿಸಿಕೊಂಡಿದ್ದಾರೆ. ರಾಘವ್ ಚಡ್ಡಾ ಅವರು ತನ್ನ ಕಣ್ಣಿನ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಗಂಭೀರ ಸ್ಥಿತಿ ಎದುರಾಗಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಈ ತಿಂಗಳ ಆರಂಭದಲ್ಲಿ ಚಡ್ಡಾ ಅವರು ತುರ್ತು ಕಣ್ಣಿನ ಶಸ್ತ್ರಚಿಕಿತ್ಸೆ-ವಿಟ್ರೆಕ್ಟಮಿ-ಗೆ ಒಳಗಾಗಿದ್ದರು. ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಸಂದರ್ಭದಲ್ಲಿ ಚಡ್ಡಾ ಅವರ ಗೈರುಹಾಜರಿಯ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡಿದ್ದವು.

ಇದನ್ನು ಓದಿದ್ದೀರಾ?  ಶಸ್ತ್ರಚಿಕಿತ್ಸೆಗಾಗಿ ಯುಕೆಯಲ್ಲಿರುವ ರಾಘವ್ ಚಡ್ಡಾ, ದೃಷ್ಟಿ ಕಳೆದುಕೊಳ್ಳುವ ಗಂಭೀರ ಸ್ಥಿತಿಯಿತ್ತು: ದೆಹಲಿ ಸಚಿವ

ಅಬಕಾರಿ ನೀತಿ ಪ್ರಕರಣದ ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರೂ ಇದೆ ಎಂದು ಹೇಳಲಾಗಿತ್ತು. ಇದಾದ ಬಳಿಕ ಚಡ್ಡಾ ನಾಪತ್ತೆಯಾದರೆ ಎಂದು ಪ್ರಶ್ನಿಸಲಾಗುತ್ತಿತ್ತು. ಆದರೆ ಎಎಪಿ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ ಸ್ಪಷ್ಟನೆಯನ್ನು ನೀಡಿದ್ದರು.

ರಾಘವ್ ಚಡ್ಡಾ ಅವರು ಚುನಾವಣಾ ಪ್ರಚಾರಕ್ಕೆ ಗೈರುಹಾಜರಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸೌರಭ್ ಭಾರದ್ವಾಜ್, “ರಾಘವ್ ಚಡ್ಡಾ ಕಣ್ಣುಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಅದಾದ ಬಳಿಕ ಚಿಕಿತ್ಸೆ ಪಡೆಯಲು ಯುಕೆಗೆ ಅವರು ತೆರಳಿದರು. ಸ್ಥಿತಿ ಗಂಭೀರವಾಗಿದ್ದು, ಸಕಾಲಿಕ ಚಿಕಿತ್ಸೆ ನೀಡದಿದ್ದರೆ ಕುರುಡುತನದ ಸಾಧ್ಯತೆಯಿದೆ ಎಂದು ನನಗೆ ತಿಳಿಸಲಾಗಿತ್ತು” ಎಂದು ಏಪ್ರಿಲ್ ಕೊನೆಯಲ್ಲಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಅಬಕಾರಿ ನೀತಿ ಪ್ರಕರಣ | ಇ.ಡಿ ಆರೋಪ ಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು ಉಲ್ಲೇಖ

“ರಾಘವ್ ಚಡ್ಡಾ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ಅವರು ಗುಣಮುಖರಾದ ತಕ್ಷಣ ಭಾರತಕ್ಕೆ ಹಿಂದಿರುಗಲಿದ್ದಾರೆ. ಬಳಿಕ ಪಕ್ಷದ ಪ್ರಚಾರದಲ್ಲಿ ಸೇರಲಿದ್ದಾರೆ” ಎಂದು ಸೌರಭ್ ಭಾರದ್ವಾಜ್ ತಿಳಿಸಿದ್ದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...