ಬಂಗಲೆ ತೊರೆಯುವ ಆದೇಶ ಪಾಲಿಸುತ್ತೇನೆ: ರಾಹುಲ್ ಗಾಂಧಿ ಪತ್ರ

Date:

ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೀಡಿದ ನೋಟಿಸ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರಿಸಿದ್ದು, “ನಿಮ್ಮ ಪತ್ರಕ್ಕೆ ಧನ್ಯವಾದ, ನಿಮ್ಮ ಆದೇಶ ಪಾಲಿಸುತ್ತೇನೆ” ಎಂದು ಪತ್ರದಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಕಳೆದ ನಾಲ್ಕು ಅವಧಿಗೆ ಸಂಸತ್ತಿನ ಚುನಾಯಿತ ಪ್ರೆತಿನಿಧಿಯಾಗಿ ಇಲ್ಲಿ ನಾನು ಕಳೆದ ಸಂತಸದ ಕ್ಷಣಗಳಿಗೆ ನನ್ನ ಲೋಕಸಭಾ ಕ್ಷೇತ್ರದ ಜನರಿಗೆ ನಾನು ಆಬಾರಿಯಾಗಿದ್ದೇನೆ. ನನ್ನ ಹಕ್ಕುಗಳ ಬಗ್ಗೆ ಪೂರ್ವಗ್ರಹವಿಲ್ಲದೆಯೇ, ನಾನು ನಿಮ್ಮ ಪತ್ರದಲ್ಲಿ ಬರೆದಿರುವ ಆದೇಶವನ್ನು ಖಂಡಿತಾ ಪಾಲಿಸುತ್ತೇನೆ” ಎಂದು ಅವರು ವಸತಿ ಸಮಿತಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಸಂಸದನ ಸ್ಥಾನದಿಂದ ಅನರ್ಹಗೊಂಡ ಮೂರು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಒಂದು ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿ ಸರ್‌ನೇಮ್ ವಿಚಾರದಲ್ಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದ ಮಾನಹಾನಿ ಪ್ರಕರಣದಲ್ಲಿ ಸೂರತ್‌ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಲೋಕಸಭೆ ಸಚಿವಾಲಯ ರಾಹುಲ್ ಗಾಂಧಿ ಅವರನ್ನು ಸಂಸದನ ಸ್ಥಾನದಿಂದ ವಜಾಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಅನರ್ಹತೆ | ದೇಶದ 35 ನಗರಗಳಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ

2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲುಧಿಯಾನ ಏರಿಯಾದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಸರಕಾರದ ವತಿಯಿಂದ ನೀಡಲಾಗಿತ್ತು.

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್‌ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...