ಮತ್ತೊಂದು ಯಾತ್ರೆಗೆ ಮುಂದಾದ ರಾಹುಲ್‌ ಗಾಂಧಿ; ಮಣಿಪುರದಿಂದ ಮುಂಬೈಗೆ ‘ಭಾರತ ನ್ಯಾಯ ಯಾತ್ರೆ’

Date:

ಭಾರತ್ ಜೋಡೋ ಯಾತ್ರೆಯ ಯಶಸ್ಸಿನ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಂದು ಯಾತ್ರೆ ನಡೆಸಲು ಮುಂದಾಗಿದ್ದಾರೆ. ಅವರು ಜನವರಿ 14ರಿಂದ ಮಾರ್ಚ್ 20ರವರೆಗೆ ಮಣಿಪುರದಿಂದ ಮುಂಬೈಗೆ ‘ಭಾರತ ನ್ಯಾಯ ಯಾತ್ರೆ’ಯನ್ನು (ಭಾರತಕ್ಕೆ ನ್ಯಾಯ ಬೇಕು) ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ ತಿಳಿಸಿದೆ.

ಯಾತ್ರೆಯು –  ಮಣಿಪುರ, ನಾಗಾಲ್ಯಾಂಡ್, ಮೇಘಾಲಯ, ಅಸ್ಸಾಂ, ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರ -14 ರಾಜ್ಯಗಳ 85 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಒಟ್ಟು 6,200 ಕಿ.ಮೀ ಕ್ರಮಿಸಲಿದೆ.

ಕಳೆದ ವರ್ಷ ರಾಹುಲ್‌ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ಯಾತ್ರೆಗೆ ಭಾರೀ ಬೆಂಬಲ ವ್ಯಕ್ತವಾಗಿತ್ತು. ಯಾತ್ರೆಯು ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯ ಮೇಲೆ ಪ್ರಭಾವಿಸಿತು. ಆದರೆ, ಉಳಿದ ನಾಲ್ಕು ರಾಜ್ಯಗಳಲ್ಲಿ ಪ್ರತಿಧ್ವನಿಸಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, 2024ರ ಲೋಕಸಭಾ ಚುನಾವಣೆಗೂ ಮುನ್ನ ರಾಹುಲ್‌ ಗಾಂಧಿ ಮತ್ತೊಂದು ಯಾತ್ರೆ ಆರಂಭಿಸುತ್ತಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಮಣಿಪುರದಲ್ಲಿ ಜನಾಂಗೀಯ ದ್ವೇಷದಿಂದ ಹಿಂಸಾಚಾರ ನಡೆದಿದೆ. ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕುಕಿ ಬುಡಕಟ್ಟು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆದಿವೆ. ಹಲವರನ್ನು ಅಮಾನುಷವಾಗಿ ಕೊಲ್ಲಲಾಗಿದೆ. ಆ ರಾಜ್ಯದಿಂದ ರಾಹುಲ್‌ ಅವರು ನ್ಯಾಯ ಯಾತ್ರೆಯನ್ನು ಆರಂಭಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...