ಊಟಿ: ಮಹಿಳೆಯರು ನಿರ್ವಹಿಸುವ ಚಾಕೋಲೆಟ್ ಕಾರ್ಖಾನೆಗೆ ರಾಹುಲ್‌ ಗಾಂಧಿ ಭೇಟಿ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಿಳುನಾಡಿನ ಊಟಿಯಲ್ಲಿ ಮಹಿಳೆಯರೇ ನಿರ್ವಹಿಸುತ್ತಿರುವ ಚಾಕೋಲೆಟ್‌ ಕಾರ್ಖಾನೆಗೆ ಇತ್ತೀಚಿಗೆ ಭೇಟಿ ನೀಡಿ ತಾವು ಚಾಕೋಲೆಟ್‌ ಮಾಡುವ ವಿಧಾನವನ್ನು ಕಲಿತುಕೊಂಡಿರುವುದಾಗಿ ಹೇಳಿಕೊಂಡಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ತಮಿಳುನಾಡಿನ ಜನಪ್ರಿಯ ಚಾಕೋಲೆಟ್ ಬ್ರಾಂಡ್ ‘ಮಾಡೀಸ್’ ಕಾರ್ಖಾನೆಯ ಕೆಲಸಗಾರರೊಂದಿಗೆ ರಾಹುಲ್ ಗಾಂಧಿ ಚಾಕೋಲೆಟ್ ತಯಾರಿಸಿದ್ದು, ಇದೇ ವೇಳೆ ಸಿಹಿ ಮಿಠಾಯಿ ವಸ್ತುಗಳ ಮೇಲಿನ ಜಿಎಸ್‌ಟಿ ಕುರಿತು ಚರ್ಚಿಸಿದ್ದಾರೆ.

ಚಾಕೋಲೆಟ್ ಕಾರ್ಖಾನೆಯ ವಿವಿಧ ಕೆಲಸಗಳನ್ನು ಮಾಡಲು 70 ಮಹಿಳೆಯರನ್ನು ಮಾಡೀಸ್ ಸಂಸ್ಥೆ ನೇಮಿಸಿಕೊಂಡಿದ್ದು, ಚಾಕೋಲೆಟ್‌ಗಳನ್ನು ಹೇಗೆ ತಯಾರಿಸಲಾಗುತ್ತದೆ ಎಂಬ ವಿವರವಾದ ಮಾಹಿತಿಯನ್ನು ರಾಹುಲ್‌ ಗಾಂಧಿ ಮಹಿಳೆಯರಿಂದ ಕೇಳಿ ತಿಳಿದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“70 ಮಹಿಳೆಯರ ಅದ್ಭುತ ತಂಡವು, ಊಟಿಯ ಜನಪ್ರಿಯ ಚಾಕೊಲೇಟ್‌ ಕಾರ್ಖಾನೆಯೊಂದನ್ನು ನಿರ್ವಹಿಸುತ್ತಿದೆ. ಮಾಡೀಸ್‌ ಚಾಕೋಲೆಟ್ ಸಂಸ್ಥೆಯು ಭಾರತದ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಮಹಾನ್ ಸಾಮರ್ಥ್ಯಕ್ಕೆ ಗಮನಾರ್ಹವಾದ ಸಾಕ್ಷಿಯಾಗಿದೆ. ನನ್ನ ಇತ್ತೀಚಿನ ನೀಲಗಿರಿ ಭೇಟಿಯ ಸಂದರ್ಭದಲ್ಲಿ ತೆರೆದುಕೊಂಡದ್ದು ಇಲ್ಲಿದೆ. ಈ ಸಾಧನೆಯ ಹಿಂದಿನ ಶಕ್ತಿಗಳಾದ ಮುರಳೀಧರ್ ರಾವ್ ಮತ್ತು ಸ್ವಾತಿ ಅವರ ಉದ್ಯಮಶೀಲತಾ ಮನೋಭಾವವು ಸ್ಪೂರ್ತಿದಾಯಕವಾಗಿದೆ. 70 ಮಹಿಳೆಯರು ಕೂಡ ಅಷ್ಟೇ ಸ್ಪೂರ್ತಿದಾಯಕರಾಗಿದ್ದಾರೆ. ನಾನು ರುಚಿ ಕಂಡ ಹಲವು ಚಾಕೋಲೆಟ್‌ಗಳಲ್ಲಿ ಈ ಚಾಕೋಲೆಟ್ ಅತ್ಯದ್ಭುತವಾಗಿದೆ” ಎಂದು ಚಾಕೋಲೆಟ್‌ ಕಾರ್ಖಾನೆಗೆ ಭೇಟಿ ನೀಡಿರುವ ವಿಡಿಯೋದಲ್ಲಿ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಜಿಎಸ್‌ಟಿಯನ್ನು ‘ಗಬ್ಬರ್ ಸಿಂಗ್ ಟ್ಯಾಕ್ಸ್’ ಎಂದು ಕರೆದ ರಾಹುಲ್ ಗಾಂಧಿ, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದ ಅಸಂಖ್ಯಾತ ಇತರ ಸಣ್ಣ ಮತ್ತು ಮಧ್ಯಮ ಉದ್ಯಮಗಳಂತೆಯೇ ಮಾಡೀಸ್ ಚಾಕೋಲೆಟ್‌ಗೂ ಜಿಎಸ್‌ಟಿಯ ಬಿಸಿ ಮುಟ್ಟಿದೆ. ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗಿಂತ ಕೇಂದ್ರಕ್ಕೆ ದೊಡ್ಡ ಉದ್ಯಮಗಳೇ ಹೆಚ್ಚು ಆಸಕ್ತಿದಾಯಕವಾಗಿವೆ’ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಮುಜಾಫರ್‌ನಗರ ಶಾಲೆ ಮುಚ್ಚಲು ಆದೇಶ

ಹಲವು ವಿಷಯಗಳನ್ನು ಚರ್ಚಿಸಿದ ನಂತರ ರಾಹುಲ್‌ ಅವರಿಗೆ ಮಹಿಳೆಯರು ಮಾಡೀಸ್ ಚಾಕೋಲೆಟ್ ತಯಾರಿಸುವ ವಿಧಾನವನ್ನು ಹೇಳಿಕೊಟ್ಟರು.

ರಾಹುಲ್‌ ಗಾಂಧಿಯವರು ಕೇರಳದ ವಯನಾಡ್‌ನಲ್ಲಿರುವ ತಮ್ಮ ಲೋಕಸಭಾ ಕ್ಷೇತ್ರಕ್ಕೆ ಹೋಗುತ್ತಿರುವಾಗ ಊಟಿಗೂ ಭೇಟಿ ನೀಡಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...