ರಾಹುಲ್ ಜನಪ್ರಿಯ ನಾಯಕ, ಪ್ರಧಾನಿ ಯಾರಾಗಬೇಕೆಂಬ ಭಿನ್ನಾಭಿಪ್ರಾಯವಿಲ್ಲ: ಸಂಜಯ್ ರಾವತ್

Date:

“ರಾಹುಲ್ ಗಾಂಧಿ ಜನಪ್ರಿಯ ನಾಯಕರಾಗಿದ್ದು ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಯಾರಾಗಬೇಕೆಂದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ” ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವುದಾದರೆ ರಾಹುಲ್ ಗಾಂಧಿ ಪ್ರಧಾನಿಯಾಗಬಹುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಜಯ್ ರಾವತ್, “ರಾಹುಲ್ ಗಾಂಧಿ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ಧರಿದ್ದರೆ, ನಾವು ಏಕೆ ವಿರೋಧಿಸುತ್ತೇವೆ” ಎಂದು ಪ್ರಶ್ನಿಸಿದರು.

ಹಾಗೆಯೇ, “ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕ ಮತ್ತು ತಮ್ಮನ್ನು ತಾವು ಸಾಬೀತುಪಡಿಸಿದ್ದಾರೆ. ಜನಪ್ರಿಯ ನಾಯಕರಾಗಿದ್ದಾರೆ, ನಾವೆಲ್ಲರೂ ಅವರನ್ನು ಪ್ರೀತಿಸುತ್ತೇವೆ. ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ‘ಇಂಡಿಯಾ’ ಮೈತ್ರಿಕೂಟ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿ ನಿರ್ಧರಿಸುತ್ತದೆ: ಉದ್ಧವ್ ಠಾಕ್ರೆ

“ಬಿಜೆಪಿಗೆ ಬಹುಮತ ಲಭ್ಯವಾಗಿಲ್ಲ. 235-240 ಸೀಟುಗಳಲ್ಲಷ್ಟೆ ಬಿಜೆಪಿ ಗೆಲುವು ಕಂಡಿದೆ. ಅವರು ಮೋದಿ ಸರ್ಕಾರವನ್ನು ಆರಂಭಿಸುವ ಬಗ್ಗೆ ಮಾತನಾಡುತ್ತಿದ್ದರು. ಆದರೆ ಮೋದಿ ಸರ್ಕಾರ ಎಲ್ಲಿ” ಎಂದು ಲೇವಡಿ ಮಾಡಿದರು.

“ಎನ್‌ಡಿಎ ಸರ್ಕಾರ ರಚನೆಯಾದರೂ ಕೂಡಾ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಎಂಬ ಎರಡು ಸ್ತಂಭಗಳ ಬಲದಿಂದ ರಚಿಸಬೇಕಾಗುತ್ತದೆ. ಆ ಸ್ತಂಭ ಯಾವಾಗ ಬೇಕಾದರೂ ಕುಸಿಯಬಹುದು. ಬಿಜೆಪಿ ತನ್ನ ಗೌರವವನ್ನೇ ಕಳೆದುಕೊಂಡಿದೆ. ಗೌರವವನ್ನು ಕಳೆದುಕೊಂಡ ಪ್ರಧಾನಿ ನಮಗೆ ಬೇಕಾಗಿಲ್ಲ. ಮೋದಿ ಬ್ರ್ಯಾಂಡ್‌ ಅಂತ್ಯವಾಗಿದೆ” ಎಂದು ಹೇಳಿದರು.

“ಇಡಿ, ಸಿಬಿಐ, ಐಟಿ ಕಾರಣದಿಂದಾಗಿ ಬಿಜೆಪಿ ಗೆಲುವು ಕಂಡಿದೆ. ಅವರು ಸರ್ಕಾರ ರಚಿಸುವುದಾದರೆ ರಚಿಸಲಿ. ಇದು ಪ್ರಜಾಪ್ರಭುತ್ವ, ನಾವು ಆ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಸರ್ಕಾರ ರಚಿಸುವ ಅಧಿಕಾರ ಅವರಿಗಿದೆ” ಎಂದರು.

ಇದನ್ನು ಓದಿದ್ದೀರಾ?  ಕಾರ್ಯತಂತ್ರ ರೂಪಿಸಲು ಎನ್‌ಡಿಎ, ಇಂಡಿಯಾ ಒಕ್ಕೂಟ ಸಜ್ಜು

ಹಾಗೆಯೇ “ನಮಗೆ ಬೇಕಾದಷ್ಟು ಸ್ಥಾನವಿದೆ. ನಮ್ಮನ್ನು ಜನರು 250 ಕ್ಷೇತ್ರದಲ್ಲಿ ಗೆಲ್ಲಿಸಿದ್ದಾರೆ. ಸರ್ಕಾರ ರಚಿಸುವ ಅಧಿಕಾರ ನಮಗಿದೆ. ಪ್ರಜಾಪ್ರಭುತ್ವದ ಜೊತೆ ನಿಲ್ಲಬೇಕೇ ಅಥವಾ ಸರ್ವಾಧಿಕಾರದ ಪರವಾಗಿ ನಿಲ್ಲಬೇಕೆ ಎಂಬುವುದನ್ನು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ನಿರ್ಧರಿಸಬೇಕು” ಎಂದು ತಿಳಿಸಿದರು.

ಇನ್ನು ಚಂದ್ರ ಬಾಬು ನಾಯ್ಡು ಈಗಾಗಲೇ ಎನ್‌ಡಿಎ ಪರವಾಗಿದ್ದೇವೆ ಎಂದು ಘೋಷಣೆ ಮಾಡಿದ್ದು, ಸ್ಪೀಕರ್ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ. ಆದರೆ ಎನ್‌ಡಿಎ ಸೇರುವುದೋ ಇಂಡಿಯಾ ಕೂಟ ಸೇರುವುದೋ ಎಂಬ ಬಗ್ಗೆ ನಿತೀಶ್ ಕುಮಾರ್ ಈವರೆಗೂ ನಿರ್ಧಾರ ಮಾಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...