ಮತ ಕಳವು | ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ರ್‍ಯಾಲಿ: ಹಲವೆಡೆ ಸಂಚಾರ ಬಂದ್, ಬದಲಿ ಮಾರ್ಗ ಪರಿಶೀಲಿಸಿ

Date:

ಮತ ಕಳವು ವಿರುದ್ಧವಾಗಿ ಶುಕ್ರವಾರ(ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರ್‍ಯಾಲಿ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಕೊಂಚ ವ್ಯತ್ಯಯವಾಗುವ ಬಗ್ಗೆ ಬೆಂಗಳೂರು ನಗರ ಸಂಚಾರ ಇಲಾಖೆಯು ಮಾಹಿತಿ ನೀಡಿದೆ.

ಬೆಳಗ್ಗೆ 10:30ಯಿಂದ 11:30ವರೆಗೆ ಮತ್ತು ಸಂಜೆ 3:30ಯಿಂದ 4:30ವರೆಗೆ ಎಂಜಿ ರೋಡ್, ಕಬ್ಬನ್ ರೋಡ್ ಮತ್ತು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಬದಲಿ ಮಾರ್ಗದ ಸಲಹೆ ನೀಡಲಾಗಿದೆ. ಚಾಲುಕ್ಯ ರಸ್ತೆ, ಶಾಂತಲಾ ಜಂಕ್ಷನ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧಗಳನ್ನು ವಿಧಿಸಲಾಗಿದೆ. ನಗರದ ಹಲವು ಪ್ರದೇಶಗಳಲ್ಲಿ ಪಾರ್ಕಿಂಗ್ ನಿರ್ಬಂಧಗಳನ್ನು ಸಹ ವಿಧಿಸಲಾಗಿದೆ.

ಇದನ್ನು ಓದಿದ್ದೀರಾ? ಕರ್ನಾಟಕದಲ್ಲಿ ಭಾರಿ ಮತ ಕಳವು: ರಾಹುಲ್‌ ಗಾಂಧಿ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್‌ನಿಂದ ಆನಂದ ರಾವ್ ಫ್ಲೈ ಓವರ್, ಓಲ್ಡ್‌ ಜೆಡಿಎಸ್‌ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಲುಲು ಮಾಲ್, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್‌ ಫ್ಲೈ ಓವರ್, ರೇಸ್ ಕೋರ್ಟ್ ರಸ್ತೆ ಮೂಲಕ ಸಂಚಾರ ಮಾಡುವಂತೆ ತಿಳಿಸಲಾಗಿದೆ.

ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ಸಂಚಾರ ಬಂದ್ ಮಾಡಲಾಗಿದ್ದು, ಕೆಜಿ ರಸ್ತೆ, ಮೈಸೂರು ಬ್ಯಾಂಕ್, ಜಂಕ್ಷನ್, ಸಾಗರ್ ಜಂಕ್ಷನ್, ಕೆಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಫ್ಲೈ ಓವರ್ ರಸ್ತೆ ಮೂಲಕ ಸಂಚರಿಸಬಹುದು.

ಚಾಲುಕ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಕಡೆಗೆ ಸಂಚಾರ ನಿರ್ಬಂಧಿಸಲಾಗಿದೆ. ಚಾಲುಕ್ಯ ಸರ್ಕಲ್, ಎಲ್‌ಆರ್‌ಡಿ, ರಾಜಭವನ ರಸ್ತೆ, ಇನ್‌ ಪೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ನಿಂದ ಸಂಚರಿಸಬಹುದಾಗಿದೆ.

ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚಾರ ನಿರ್ಬಂಧಿಸಲಾಗಿದೆ. ಕನಕದಾಸ ಜಂಕ್ಷನ್ ಬಲ ತಿರುವು ಪಡೆದು ಸಾಗರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ. ಮೌರ್ಯ/ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವುದನ್ನು ನಿರ್ಬಂಧಿಸಲಾಗಿದೆ. ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.

ಈ ಹಿಂದೆ ಆಗಸ್ಟ್ 5ರಂದು ಈ ಪ್ರತಿಭಟನೆಯ ಯೋಜನೆ ಮಾಡಲಾಗಿತ್ತು. ಆದರೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದ ಕಾರಣ ಪ್ರತಿಭಟನೆ ಮುಂದೂಡಲಾಯಿತು. ಶುಕ್ರವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಮತ ಕಳವು ವಿರುದ್ಧದ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಮಾತ್ರವಲ್ಲದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಭಾಗಿಯಾಗಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...