ಮತಗಳ್ಳತನ | ಕಿರುಚಿತ್ರ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

Date:

ಮತಗಳ್ಳತನ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡುತ್ತಿವೆ. ಈ ಮಧ್ಯೆ ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮತಗಳ್ಳತನದ ಬಗ್ಗೆ ಮಾಡಿರುವ ಕಿರುಚಿತ್ರವೊಂದನ್ನು ಸೋಷಿಯಲ್ ಮೀಡಿಯಾಗಳಲ್ಲಿ ಬಿಡುಗಡೆ ಮಾಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಕೇಸರಿ ಶಾಲು ಹಾಕಿಕೊಂಡಿರುವ ಇಬ್ಬರು ಮತ ಹಾಕಿ ಹೊರ ಬರುವಾಗ, ಮತದಾನಕ್ಕೆಂದು ಸರದಿಯಲ್ಲಿ ಕಾಯುತ್ತಿರುವ ದಂಪತಿಗಳನ್ನು ತಡೆದು ನಿಲ್ಲಿಸಿ, ‘ಎಲ್ಲಿಗೆ ಹೋಗುತ್ತಿದ್ದೀರಾ ಎಂದು ಪ್ರಶ್ನಿಸುತ್ತಾರೆ. ಈ ವೇಳೆ ಉತ್ತರಿಸುವ ಹಿರಿಯ ವ್ಯಕ್ತಿ, ಮತ ಹಾಕಲು ಬಂದಿದ್ದೇನೆ, ನನ್ನ ಹೆಸರು ಗರೀಬ್ ದಾಸ್, 50 ವರ್ಷ. ನನ್ನ ಬಳಿ ಚುನಾವಣಾ ಗುರುತಿನ ಚೀಟಿ ಇದೆ’ ಎನ್ನುತ್ತಾರೆ.

ಈ ವೇಳೆ ಪಕ್ಕದಲ್ಲಿ ಕೇಸರಿ ಶಾಲು ಹಾಕಿಕೊಂಡಿರುವ ವ್ಯಕ್ತಿಯನ್ನು ತೋರಿಸುವ ಇನ್ನೋರ್ವ, ಈತ ಗರೀಬ್ ದಾಸ್. ಈಗಾಗಲೇ ವೋಟ್ ಹಾಕಿ ಬಂದಿದ್ದಾನೆ ಎನ್ನುವ ಮೂಲಕ ಮತಗಳ್ಳತನ ಸಂಭಾಷಣೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಡಿಯೋ ಮೂಲಕ ಪರೋಕ್ಷವಾಗಿ ಬಿಜೆಪಿ ಹಾಗೂ ಚುನಾವಣಾ ಆಯೋಗವನ್ನು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದು, ಮತಗಳ್ಳತನದಲ್ಲಿ ಪೋಲಿಂಗ್ ಬೂತ್‌ನ ಅಧಿಕಾರಿಯ ಪಾತ್ರವೂ ಇದೆ ಎಂಬುದಾಗಿ ತೋರಿಸಲಾಗಿದೆ. ಸದ್ಯ ಒಂದು ನಿಮಿಷದ ಈ ಕಿರುಚಿತ್ರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

ಒಟ್ಟಿನಲ್ಲಿ ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತಗಳ್ಳತನವನ್ನು ವಿರೋಧಿಸಿ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆಯು ದಿನನಿತ್ಯ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚುನಾವಣಾ ಆಯೋಗ ಹಾಗೂ ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ಧ ನಿರಂತರವಾಗಿ ಆಕ್ರೋಶ ಹೊರಹಾಕುತ್ತಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಪುಟದಿಂದ ರಾಜಣ್ಣ ವಜಾ- ಕಾಂಗ್ರೆಸ್ಸಿಗರಿಗೆ ಪಾಠವಾಗುವುದೇ?

ದೆಹಲಿಯಲ್ಲಿ ಕಳೆದ ಆಗಸ್ಟ್ 7ರಂದು ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1,00,250 ಮತಗಳಲ್ಲಿ ಅಕ್ರಮ ನಡೆದಿರುವುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಈ ಚುನಾವಣೆಯಲ್ಲಿ ಐದು ವಿಧದ ಅಕ್ರಮಗಳನ್ನು ಗುರುತಿಸಿರುವುದಾಗಿ ಅವರು ತಿಳಿಸಿದ್ದರು. ಆ ಬಳಿಕ ಆ.8ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೆಪಿಸಿಸಿ ನೇತೃತ್ವದಲ್ಲಿ ರಾಹುಲ್ ಗಾಂಧಿ ಬೃಹತ್ ಪ್ರತಿಭಟನೆಯನ್ನೂ ಆಯೋಜಿಸಿದ್ದರು. ಆ ಬಳಿಕ ದೇಶದ ರಾಜಕೀಯದಲ್ಲಿ ನಾನಾ ಬೆಳವಣಿಗೆಗೆಳು ನಡೆಯುತ್ತಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...