ಖೇಮ್ಕಾ ಹತ್ಯೆ | ಬಿಹಾರ ದೇಶದ ಅಪರಾಧ ರಾಜಧಾನಿ: ಬಿಜೆಪಿ, ಸಿಎಂ ನಿತೀಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Date:

ಬಿಹಾರದ ಪ್ರಸಿದ್ಧ ಉದ್ಯಮಿ ಮತ್ತು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ಗೋಪಾಲ್ ಖೇಮ್ಕಾ ಹತ್ಯೆ ವಿಚಾರದಲ್ಲಿ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಘಟನೆಯನ್ನು ಖಂಡಿಸಿರುವ ಸಂಸದ ರಾಹುಲ್, “ಬಿಜೆಪಿ ಮತ್ತು ಸಿಎಂ ನಿತೀಶ್ ಒಟ್ಟಾಗಿ ಬಿಹಾರವನ್ನು ‘ದೇಶದ ಅಪರಾಧ ರಾಜಧಾನಿ’ಯನ್ನಾಗಿ ಹೇಗೆ ಪರಿವರ್ತಿಸಿದ್ದಾರೆ ಎಂಬುದನ್ನು ಈ ಘಟನೆ ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ | ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾಗೆ ಗುಂಡಿಕ್ಕಿ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಟನಾದಲ್ಲಿ ಉದ್ಯಮಿ ಗೋಪಾಲ್ ಖೇಮ್ಕಾ ಅವರ ಬಹಿರಂಗ ಹತ್ಯೆಯು ಬಿಜೆಪಿ ಮತ್ತು ನಿತೀಶ್ ಕುಮಾರ್ ಒಟ್ಟಾಗಿ ಬಿಹಾರವನ್ನು ‘ಭಾರತದ ಅಪರಾಧ ರಾಜಧಾನಿ’ಯನ್ನಾಗಿ ಮಾಡಿದ್ದಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ” ಎಂದು ರಾಹುಲ್ ಟೀಕಿಸಿದ್ದಾರೆ.

“ಇಂದು ಬಿಹಾರ ದರೋಡೆ, ಗುಂಡಿನ ದಾಳಿ ಮತ್ತು ಕೊಲೆಗಳ ನೆರಳಿನಲ್ಲಿ ಬದುಕುತ್ತಿದೆ. ಅಪರಾಧ ಇಲ್ಲಿ ಸಾಮಾನ್ಯ ವಿಷಯವಾಗಿದೆ. ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಬಿಹಾರದ ಸಹೋದರ ಸಹೋದರಿಯರೇ, ಈ ಅನ್ಯಾಯವನ್ನು ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ. ನಿಮ್ಮ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗದ ಸರ್ಕಾರವು ನಿಮ್ಮ ಭವಿಷ್ಯದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ರಾಹುಲ್ ಹೇಳಿದ್ದಾರೆ.

“ಪ್ರತಿಯೊಂದು ಕೊಲೆ, ಪ್ರತಿಯೊಂದು ದರೋಡೆ, ಪ್ರತಿಯೊಂದು ಗುಂಡು – ಬದಲಾವಣೆಯ ಕೂಗು. ಈಗ ಭಯವಿಲ್ಲದ ಆದರೆ ಪ್ರಗತಿ ಇರುವ ಹೊಸ ಬಿಹಾರದ ಸಮಯ. ಈ ಬಾರಿ ಮತ ಚಲಾವಣೆ ಸರ್ಕಾರವನ್ನು ಬದಲಾಯಿಸಲು ಮಾತ್ರವಲ್ಲ, ಬಿಹಾರವನ್ನು ಉಳಿಸುವ ನಿಟ್ಟಿನಲ್ಲಿ ಆಗಿರಲಿ” ಎಂದು ಈ ಟ್ವೀಟ್‌ನಲ್ಲೇ ಮನವಿ ಮಾಡಿದ್ದಾರೆ.

ಶುಕ್ರವಾರ ರಾತ್ರಿ ಪಟನಾದ ತಮ್ಮ ಮನೆಯ ಹೊರಗೆ ಉದ್ಯಮಿ, ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ ಕೊಲೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಗಳ ಪತ್ತೆಯೂ ನಡೆದಿಲ್ಲ. ಖೇಮ್ಕಾ ಅವರ ಮಗ ಗುಂಜನ್ ಖೇಮ್ಕಾ ಅವರನ್ನೂ ಮೂರು ವರ್ಷಗಳ ಹಿಂದೆ ಕೊಲೆ ಮಾಡಲಾಗಿತ್ತು.

ಉದ್ಯಮಿ ಹತ್ಯೆಯ ಕುರಿತು ನಡೆಯುತ್ತಿರುವ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಕಾರ್ಯಪಡೆಯ ಅಧಿಕಾರಿಗಳು ಮತ್ತು ಕೇಂದ್ರ ಜಿಲ್ಲಾ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿಯನ್ನು ರಚಿಸಲಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.

ಅಕ್ಟೋಬರ್-ನವೆಂಬರ್‌ನಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಕೆಲವೇ ತಿಂಗಳುಗಳ ಮುನ್ನ ನಡೆದ ಈ ಘಟನೆ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...