ಮೋದಿ ‘ಚಂದಾ ದಂಧೆ’; ನಿಜ ಮುಖ ಮುಚ್ಚಿಡಲು ಕೊನೆಯ ಪ್ರಯತ್ನ ಎಂದ ರಾಹುಲ್ ಗಾಂಧಿ

Date:

ಚುನಾವಣಾ ಬಾಂಡ್ ವಿಚಾರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನಿಲುವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಸ್‌ಬಿಐ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

“ಮಾಹಿತಿಯನ್ನು ಹಂಚಿಕೊಳ್ಳಲು ಹಿಂಜರಿಯುತ್ತಿರುವ ಎಸ್‌ಬಿಐ, ಪ್ರಧಾನಿ ನರೇಂದ್ರ ಮೋದಿಯವರ ನಿಜವಾದ ಮುಖವನ್ನು ಮುಚ್ಚಿಡಲು ಮಾಡಲಾಗುತ್ತಿರುವ ಕೊನೆಯ ಪ್ರಯತ್ನ ಇದಾಗಿರುವಂತಿದೆ” ಎಂದು ಆರೋಪಿಸಿದ್ದಾರೆ. ಮಾಹಿತಿ ತಿಳಿಯವುದು ಜನರ ಹಕ್ಕು ಎಂದು ವಾದಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ನರೇಂದ್ರ ಮೋದಿಯವರು ತಮ್ಮ ‘ಚಂದಾ ದಂಧೆ’ಯನ್ನು ಮರೆಮಾಚಲು ಶತಪ್ರಯತ್ನ ನಡೆಸಿದ್ದಾರೆ, ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಿರುವಾಗ ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಲಾಗದು ಎಂದು ಹೇಳುವುದೇಕೆ,” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಮಾಹಿತಿಯನ್ನು ಪಡೆಯಬಹುದು, ಆದರೆ ಮಾಹಿತಿ ನೀಡಲು ಜೂನ್ 30 ರವರೆಗೆ ಎಸ್‌ಬಿಐ ಸಮಯ ಕೇಳಿದೆ. ಇದನ್ನು ನೋಡಿದಾಗ ಇಲ್ಲಿ ಏನೋ ಒಂದು ಸಮಸ್ಯೆ ಇದೆ ಅನಿಸಲ್ಲ, ಇಲ್ಲೆರುವುದೆಲ್ಲವೂ ಸಮಸ್ಯೆ ಎಂದು ಅರ್ಥವಾಗುತ್ತದೆ,” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

“ದೇಶದ ಪ್ರತಿಯೊಂದು ಸ್ವತಂತ್ರ ಸಂಘಟನೆಗಳು ಮೋದಿ ಕುಟುಂಬಕ್ಕೆ ಸೇರುವ ಮೂಲಕ ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಪ್ರಯತ್ನ ಮಾಡುತ್ತಿದೆ. ಚುನಾವಣೆಗೂ ಮುನ್ನವೇ ಮೋದಿಯ ‘ನಿಜ ಮುಖ’ ಮರೆಮಾಚುವ ‘ಕೊನೆಯ ಪ್ರಯತ್ನ’ ಇದಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಐದು ವರ್ಷದಲ್ಲಿ 22217 ಚುನಾವಣಾ ಬಾಂಡ್

ಚುನಾವಣಾ ಬಾಂಡ್‌ಗಳ ವಿವರವನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಬೇಕು ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತಿಳಿಸಿತ್ತು. ಪ್ರತಿ ಬಾಂಡ್‌ ಖರೀದಿಯ ದಿನ, ತಿಂಗಳು, ಖರೀದಿ ಮಾಡಿದವರ ವಿವರ, ಮೊತ್ತ ಎಲ್ಲ ಮಾಹಿತಿ ನೀಡಬೇಕು ಎಂದು ಎಸ್‌ಬಿಐಗೆ ಸುಪ್ರೀಂ ಸೂಚನೆ ನೀಡಿತ್ತು. ಮಾರ್ಚ್ 13ರ ಒಳಗಾಗಿ ಎಲ್ಲ ವಿವರವನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ತಿಳಿಸಲಾಗಿತ್ತು.

ಈ ನಿಟ್ಟಿನಲ್ಲಿ ಎಸ್‌ಬಿಐ ಕಳೆದ ಐದು ವರ್ಷಗಳ ಅವಧಿಯುಲ್ಲಿ ದೇಶದಲ್ಲಿ 22217 ಚುನಾವಣಾ ಬಾಂಡ್‌ಗಳನ್ನು ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಳಸಲಾಗಿದೆ ಎಂದು ಬಹಿರಂಗಪಡಿಸಿದೆ. ಆದರೆ ಎಲ್ಲ ಮಾಹಿತಿ ನೀಡಲು ಅವಕಾಶವನ್ನು ಜೂನ್ 30ರವರೆಗೆ ವಿಸ್ತರಿಸಲು ಮನವಿ ಮಾಡಿದೆ.

ಎಸ್‌ಬಿಐನ ಈ ಮನವಿಯನ್ನು ವಿಪಕ್ಷಗಳು ಪ್ರಶ್ನಿಸಿದೆ. ಎಸ್‌ಬಿಐನ ಈ ನಡೆ ಅನುಮಾನ ಹುಟ್ಟಿಸಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಟ್ವೀಟ್ ಮಾಡಿದ್ದಾರೆ. ಮೋದಿ ಮತ್ತು ಬಿಜೆಪಿಯನ್ನು ರಕ್ಷಿಸಲೆಂದೆ ಸಾರ್ವತ್ರಿಕ ಚುನಾವಣೆ ಆಗುವವರೆಗೂ ಅವಧಿ ವಿಸ್ತರಣೆಗೆ ಎಸ್‌ಬಿಐ ಮನವಿ ಮಾಡಿದೆ ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...