ಮಣಿಪುರಕ್ಕೆ ತೆರಳಲಿರುವ ರಾಹುಲ್ ಗಾಂಧಿ; ನಿರಾಶ್ರಿತರ ಕೇಂದ್ರಗಳಿಗೆ ಭೇಟಿ

Date:

ಮಣಿಪುರದಲ್ಲಿ ಜನಾಂಗೀಯ ಸಂಘರ್ಷಗಳ ಬಗ್ಗೆ ಸಂಸತ್ತಿನಲ್ಲಿ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಒಂದು ವಾರದ ನಂತರ, ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಣಿಪುರಕ್ಕೆ ಸೋಮವಾರ (ಜುಲೈ 8) ಭೇಟಿ ನೀಡಲಿದ್ದಾರೆ.

ಲೋಕಸಭೆಯಲ್ಲಿ ವಿಪಕ್ಷ ನಾಯಕರಾದ ಬಳಿಕ ಮಣಿಪುರಕ್ಕೆ ರಾಹುಲ್ ಗಾಂಧಿ ಮೊದಲ ಭೇಟಿ ಇದಾಗಿದೆ. ಮಣಿಪುರದ ಭೇಟಿ ವೇಳೆ ರಾಹುಲ್ ಗಾಂಧಿ ನಿರಾಶ್ರಿತರ ಕೇಂದ್ರದಲ್ಲಿರುವ ಜನರನ್ನು ಭೇಟಿಯಾಗಿ ಮಾತನಾಡಿಸಲಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಉಸ್ತುವಾರಿ ಗಿರೀಶ್ ಚೋಡಂಕರ್, “ಶನಿವಾರ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡುವ ನಿಟ್ಟಿನಲ್ಲಿ ಗುಜರಾತ್‌ಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಮಣಿಪುರ ಪ್ರವಾಸವು ಸಾಮಾನ್ಯ ಜನರನ್ನು ಭೇಟಿ ಮಾಡುವ ನಿಟ್ಟಿನಲ್ಲಿ ಮಾಡಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಹಾಥರಸ್ ದುರಂತ | ರಾಜಕೀಯ ಮಾಡಲು ಬಯಸುವುದಿಲ್ಲ, ಆದರೆ ಆಡಳಿತ ಲೋಪ ಎಸಗಿದೆ: ರಾಹುಲ್ ಗಾಂಧಿ

“ಮಣಿಪುರದ ಜನರನ್ನು ಭೇಟಿ ಮಾಡಲು ರಾಹುಲ್ ಬರುತ್ತಿದ್ದಾರೆ. ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಅವರು ಮೊದಲ ಬಾರಿಗೆ ಮಣಿಪುರಕ್ಕೆ ಪ್ರಯಾಣಿಸಬೇಕೆಂದು ನಿರ್ಧರಿಸಿದರು. ಇದನ್ನು ನಾವು ರಾಜಕೀಯ ಪ್ರವಾಸವಾಗಿ ನೋಡಬಾರದು” ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರು ಮೈತಿ ಪ್ರದೇಶಗಳಲ್ಲಿನ ಜಿರಿಬಾಮ್ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ಅದಾದ ಬಳಿಕ ಕುಕಿ ಪ್ರದೇಶದಲ್ಲಿರುವ ಚುರಾಚಂದ್‌ಪುರ ಮತ್ತು ಮೊಯಿರಾಂಗ್ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ರಾಹುಲ್ ಜೊತೆ ಕಾಂಗ್ರೆಸ್‌ ನಾಯಕ ಕೆಸಿ ವೇಣುಗೋಪಾಲ್‌ ಕೂಡ ಪ್ರಯಾಣಿಸುವ ನಿರೀಕ್ಷೆಯಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...