ಯುಪಿಯ ಸರ್ಕಾರ ಒಬಿಸಿ ಕೋಟಾ ಸೇರಿಸದಿರುವುದಕ್ಕೆ ವಿಷಾದವಿದೆ: ರಾಹುಲ್‌ ಗಾಂಧಿ

Date:

ಯುಪಿಎ ಸರ್ಕಾರ 2010ರಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ಸೇರಿಸದಿರುವುದಕ್ಕೆ ಕಾಂಗ್ರೆಸ್ ವಿಷಾದಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಎಐಸಿಸಿ ಮುಖ್ಯ ಕಚೇರಿಯಲ್ಲಿ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಾತಿ ಆಧಾರಿತ ಜನಗಣತಿ ನಡೆಸಲಾಗುತ್ತದೆ. ನರೇಂದ್ರ ಮೋದಿ ಸರ್ಕಾರವು ಕ್ಷೇತ್ರ ಮರು ವಿಂಗಡಣೆಗೆ ಕಾಯದೆ ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

“ವಿಧೇಯಕವು ಗಮನ ಬೇರೆಡೆ ಸೆಳೆಯುವ ತಂತ್ರವಾಗಿದ್ದು, ಇದು ಜಾರಿಗೆ ಬರಲು 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಆದರೂ ಜಾರಿಯಾಗುತ್ತದೆ ಎಂಬುದಕ್ಕೆ ನಮಗೆ ನಂಬಿಕೆಯಿಲ್ಲ. ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆ ನಂತರ ಮಸೂದೆಯನ್ನು ಜಾರಿಗೊಳಿಸಲಾಗುವುದು ಎಂಬ ಅಡಿಬರಹಗಳಿವೆ. ವಿಧೇಯಕವು ಜಾತಿ ಗಣತಿ ಬೇಡಿಕೆಯಿಂದ ಅಡ್ಡಿಯಾಗಿದೆ. ಸಂಸದರು ಸದನದಲ್ಲಿ ಕೇವಲ ಪ್ರತಿಮೆಗಳಾಗಿದ್ದಾರೆ. ಅವರಿಗೆ ಕಾನೂನು ರಚನೆ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕಾರವಿಲ್ಲ. ಕೆಲವರು ಮಾತ್ರ ಎಲ್ಲವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸನಾತನ ಧರ್ಮ ವಿವಾದ: ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್

“ಒಬಿಸಿ, ಆದಿವಾಸಿಗಳು ಮತ್ತು ದಲಿತರ ಅಧಿಕಾರಿಗಳು ಬಜೆಟ್‌ನ ಶೇ. 5 ರಷ್ಟನ್ನು ಮಾತ್ರ ನಿಯಂತ್ರಿಸುತ್ತಾರೆ. ಪ್ರಧಾನ ಮಂತ್ರಿ ಅವರು ಒಬಿಸಿ ನಾಯಕ ಎಂದು ಹೇಳುತ್ತಲೇ ಇರುತ್ತಾರೆ. ಆದ್ದರಿಂದ ಉನ್ನತ ಸ್ಥಾನದಲ್ಲಿ ಕೇವಲ ಮೂವರು ಅಧಿಕಾರಿಗಳು ಏಕೆ ಇದ್ದಾರೆ ಎಂಬುದನ್ನು ಅವರು ವಿವರಿಸಲು ನಾನು ಕೇಳ ಬಯಸುತ್ತೇನೆ. ಮೊದಲ ಹಂತವನ್ನು ಜಾತಿ ಜನಗಣತಿಯ ಮೂಲಕ ಒಬಿಸಿಗಳ ಸಂಖ್ಯೆ ಎಷ್ಟಿದೆ ಎಂಬುದನ್ನು ಕಂಡುಹಿಡಿಯಬಹುದು” ಎಂದು ರಾಹುಲ್‌ ಹೇಳಿದರು.

“ಭಾರತದ ಜನರಿಗೆ ಅಧಿಕಾರದ ಹಂಚಿಕೆ ಮತ್ತು ವರ್ಗಾವಣೆ ಮೊದಲ ಹೆಜ್ಜೆಯಾಗಿತ್ತು. ಜಾತಿ ಜನಗಣತಿಯ ಮಾಹಿತಿಯು ಜನರನ್ನು ಹೆಚ್ಚು ಸಬಲಗೊಳಿಸುತ್ತದೆ. ನಾವು ಅಧಿಕಾರಕ್ಕೆ ಬಂದಾಗ, ಜಾತಿ ಗಣತಿ ನಡೆಯುತ್ತದೆ ಮತ್ತು ಒಬಿಸಿ ಸಮುದಾಯವನ್ನು ಸಬಲೀಕರಣಗೊಳಿಸಲಾಗುತ್ತದೆ ಮತ್ತು ಅವರು ಆಡಳಿತದಲ್ಲಿ ಭಾಗವಹಿಸುತ್ತಾರೆ” ಎಂದು ಅವರು ಹೇಳಿದರು.

ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡುವ ಪ್ರಯತ್ನಗಳು 1996 ರಿಂದ ಹಲವಾರು ಸರ್ಕಾರಗಳಿಂದ ನಡೆಯುತ್ತಿವೆ. ಯುಪಿಎ ಸರ್ಕಾರವು 2010 ರಲ್ಲಿ ಮಸೂದೆಯನ್ನು ಮಡಿಸಿ ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟಿತು. ಆದರೆ, ಲೋಕಸಭೆಯಲ್ಲಿ ಮಂಡಿಸದ ಕಾರಣ ನನೆಗುದಿಗೆ ಬಿದ್ದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...