ಸ್ಪ್ಯಾನರ್‌ ಹಿಡಿದು ಮೆಕ್ಯಾನಿಕ್‌ಗಳೊಂದಿಗೆ ಬೈಕ್‌ ರಿಪೇರಿ ಮಾಡಿದ ರಾಹುಲ್ ಗಾಂಧಿ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನವದೆಹಲಿಯ ಕರೋಲ್‌ಬಾಗ್‌ ಮಾರುಕಟ್ಟೆಗೆ ಮಂಗಳವಾರ ಭೇಟಿ ನೀಡಿ ಮೆಕ್ಯಾನಿಕ್‌ಗಳೊಂದಿಗೆ ಬೈಕ್‌ ರಿಪೇರಿ ಕೆಲಸದಲ್ಲಿ ಪಾಲ್ಗೊಂಡರು.

ನಂತರ ಮೆಕ್ಯಾನಿಕ್‌ಗಳ ಜೊತೆಗೆ, ವ್ಯಾಪಾರಿಗಳು ಹಾಗೂ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಮಾಲೋಚನೆ ನಡೆಸಿದರು. ಅವರೊಂದಿಗೆ ಮಾತನಾಡಿ ಮೆಕ್ಯಾನಿಕ್‌ಗಳು ಎದರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು.

“ಈ ಕೈಗಳು ಭಾರತವನ್ನು ನಿರ್ಮಿಸುತ್ತದೆ. ಈ ಬಟ್ಟೆಗಳ ಮೇಲಿನ ಗ್ರೀಸ್ ನಮ್ಮ ಹೆಮ್ಮೆ ಮತ್ತು ಆತ್ಮಗೌರವವಾಗಿದೆ. ಒಬ್ಬ ಜನರ ನಾಯಕ ಮಾತ್ರ ಅವರನ್ನು ಪ್ರೋತ್ಸಾಹಿಸಲು ಕೆಲಸ ಮಾಡುತ್ತಾನೆ. ನೋವುಗಳನ್ನು ಬದಲಿಸುವ ನಿಟ್ಟಿನಲ್ಲಿ ರಥದ ಗಾಲಿಗಳನ್ನು ತಿರುಗಿಸುವ ಮೂಲಕ ಭಾರತವನ್ನು ಮುನ್ನೆಡೆಸುತ್ತಿರುವ ಕೈಗಳಿಂದ ಕಲಿಯುವ ಪ್ರಯತ್ನ. ಭಾರತ್‌ ಜೋಡೊ ಯಾತ್ರೆ ಮುಂದುವರಿಯುತ್ತದೆ” ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ರಾಹುಲ್ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರೋಲ್‌ಬಾಗ್‌ ಮಾರುಕಟ್ಟೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಸುತ್ತ ಸಾಕಷ್ಟು ಸ್ಥಳೀಯರು ಹಾಗೂ ಅಭಿಮಾನಿಗಳು ಸೇರಿದ್ದರು. ಹಸ್ತಲಾಘವ ಮಾಡಲು ಹಾಗೂ ಭಾವಚಿತ್ರ ತೆಗೆಸಿಕೊಳ್ಳಲು ಮುಗಿಬಿದ್ದರು.

ಈ ಸುದ್ದಿ ಓದಿದ್ದೀರಾ? ಚುನಾವಣೆಗೂ ಮುನ್ನ ಕೆಸಿಆರ್‌ಗೆ ಆಘಾತ: ಮಾಜಿ ಸಚಿವರು, ಶಾಸಕರು ಸೇರಿ 35 ಮಂದಿ ‘ಕೈ’ ಸೇರ್ಪಡೆಗೆ ಸಜ್ಜು

ಕೆಲವು ದಿನಗಳ ಹಿಂದೆ ರಾಹುಲ್ ಅವರು ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ ನಲ್ಲಿ ಪ್ರಯಾಣಿಸಿದ್ದರು. ಅದೇ ರೀತಿ ಅಮೆರಿಕಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಾಷಿಂಗ್ಟನ್‌ನಿಂದ ನ್ಯೂಯಾರ್ಕ್‌ಗೆ 190 ಕಿಮೀ ಟ್ರಕ್‌ನಲ್ಲಿ ಸಂಚರಿಸಿ ಸುದ್ದಿಯಾಗಿದ್ದರು. ತಮ್ಮ ಪ್ರಯಾಣದಲ್ಲಿ ಭಾರತೀಯ ಮೂಲದ ಚಾಲಕನೊಂದಿಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದರು.

ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ರಾಹುಲ್ ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ ಬ್ಲಿಂಕಿಟ್ ಡೆಲಿವರಿ ಎಕ್ಸಿಕ್ಯೂಟಿವ್ ಜೊತೆ ಪಿಲಿಯನ್ ಸವಾರಿ ಮಾಡಿದ್ದರು ಈ ವೇಳೆ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...