ಶೀಘ್ರವೇ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ‘ಪಿಂಡದಾನ’ ಮಾಡುತ್ತಾರೆ: ಆಚಾರ್ಯ ಪ್ರಮೋದ್ ಕೃಷ್ಣಂ

Date:

ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರು ‘ಕಾಂಗ್ರೆಸ್‌ನ ಅಂತ್ಯ ಸಂಸ್ಕಾರ’ ಮಾಡಿದಂತೆಯೇ ಇಂಡಿಯಾ ಒಕ್ಕೂಟದ ‘ಪಿಂಡದಾನ’ ಮಾಡುತ್ತಾರೆ ಎಂದು ಕಲ್ಕಿಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡುರುವ ಅವರು, “ದೇಶದ ಸ್ವಾತಂತ್ರ್ಯದಲ್ಲಿ ಪಾತ್ರ ವಹಿಸಿದ 150 ವರ್ಷಗಳಷ್ಟು ಹಳೆಯ ಪಕ್ಷವಾದ ಕಾಂಗ್ರೆಸ್‌ಗೆ ಯಾವುದೇ ಬೆಂಬಲ ಸಿಗುತ್ತಿಲ್ಲ. ಅದಕ್ಕೆ ಯಾರು ಹೊಣೆ? ರಾಹುಲ್ ಗಾಂಧಿಯವರೇ ಜವಾಬ್ದಾರರು” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಸಂಭಲ್‌ಗೆ ತೆರಳುವುದಕ್ಕೆ ತಡೆ | ‘ಸಾಂವಿಧಾನಿಕ ಹಕ್ಕು ನಿರಾಕರಣೆ’ ಎಂದ ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಕಾಂಗ್ರೆಸ್ ಅಂತ್ಯ ಕಂಡಿದೆ. ಈಗ ಪ್ರತಿಪಕ್ಷಗಳು ರಾಹುಲ್ ಗಾಂಧಿಯನ್ನು ತಮ್ಮ ನಾಯಕನನ್ನಾಗಿ ಆರಿಸಿಕೊಂಡಿವೆ. ನನ್ನ ಹೇಳಿಕೆ ಮತ್ತು ಇಂದಿನ ಸಮಯವನ್ನು ನೀವು ಬರೆದಿಟ್ಟುಕೊಳ್ಳಿ. ಶೀಘ್ರದಲ್ಲೇ, ರಾಹುಲ್ ಗಾಂಧಿ ಅವರು ‘ಕಾಂಗ್ರೆಸ್‌ನ ಅಂತ್ಯ ಸಂಸ್ಕಾರ’ ಮಾಡಿದಂತೆ ಇಂಡಿಯಾ ಒಕ್ಕೂಟದ ‘ಪಿಂಡ ದಾನ’ ಮಾಡುತ್ತಾರೆ” ಎಂದು ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಲಕ್ನೋದಿಂದ ಸ್ಪರ್ಧಿಸಿ ಸೋತಿದ್ದ ಕೃಷ್ಣಂ, ಈ ಹಿಂದೆ ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದರು. ಹಾಗೆಯೇ ರಾಜಕೀಯ ಪ್ರೇರಿತವಾದ ಈ ಕಾರ್ಯಕ್ರಮಕ್ಕೆ ಗೈರಾಗುವ ಕಾಂಗ್ರೆಸ್ ಅನ್ನು ಟೀಕಿಸಿದ್ದರು. ಇದಾದ ಬಳಿಕ ಕಾಂಗ್ರೆಸ್ ಕೃಷ್ಣಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.

ಮೋದಿ ಭಕ್ತ, ಕಾಂಗ್ರೆಸ್‌ನ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ನಿರಂತರವಾಗಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯ ಬಗ್ಗೆ ಅವಹೇಳನಕಾರಿ, ವಿವಾದಾದ್ಮತಕ ಹೇಳಿಕೆಗಳನ್ನು ನೀಡುವ ಮೂಲಕವೇ ಸುದ್ದಿಯಾಗಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ರಾಹುಲ್ ಗಾಂಧಿಯನ್ನು ‘ಅಜಾಗರೂಕ ಆನೆ’ ಎಂದು ಕರೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...