ಹಾಥರಸ್ ಕಾಲ್ತುಳಿತ | ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಯೋಗಿ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

Date:

ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹಾಥರಸ್ ಕಾಲ್ತುಳಿತದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಸಂತ್ರಸ್ತ ಕುಟುಂಬಗಳ ಸಮಸ್ಯೆಗಳನ್ನು ತನ್ನ ಪತ್ರದಲ್ಲಿ ಬರೆದಿರುವ ರಾಹುಲ್ ಗಾಂಧಿ ಪರಿಹಾರದ ಮೊತ್ತವನ್ನು ಹೆಚ್ಚಿಸಿ ಸಂತ್ರಸ್ತರ ಕುಟುಂಬಗಳಿಗೆ ಆದಷ್ಟು ಬೇಗ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ಪತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಹಾಥರಸ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಅವಘಡದಲ್ಲಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿ, ಅವರ ದುಃಖವನ್ನು ಕೇಳಿ ಮತ್ತು ಅವರ ಸಮಸ್ಯೆಗಳನ್ನು ತಿಳಿದ ನಂತರ ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರದ ಮೂಲಕ ಈ ಬಗ್ಗೆ ತಿಳಿಸಲಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಹಾಥರಸ್ ಕಾಲ್ತುಳಿತ | ದೆಹಲಿಗೆ ಪರಾರಿಯಾಗಿದ್ದ ಪ್ರಮುಖ ಆರೋಪಿ ಬಂಧನ

“ಪರಿಹಾರ ಮೊತ್ತವನ್ನು ಹೆಚ್ಚಿಸಿ ಆದಷ್ಟು ಬೇಗ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗಿದೆ. ಈ ದುಃಖದ ಸಮಯದಲ್ಲಿ ಅವರಿಗೆ ನಮ್ಮ ಸಾಮೂಹಿಕ ಸಂತಾಪ ಮತ್ತು ಬೆಂಬಲದ ಅಗತ್ಯವಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“121 ಜನರ ಸಾವಿಗೆ ಕಾರಣವಾದ ದುರಂತ ಘಟನೆಯಲ್ಲಿ ಜಿಲ್ಲಾಡಳಿತದ ಲೋಪವನ್ನು ಗುರುತಿಸಲು ನಿಷ್ಪಕ್ಷಪಾತ ತನಿಖೆ ಸಹಾಯ ಮಾಡುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಇದು ಸಹಾಯ ಮಾಡುತ್ತದೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯ ಅಗತ್ಯವಿದೆ” ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶುಕ್ರವಾರ ರಾಹುಲ್ ಗಾಂಧಿ ಹತ್ರಾಸ್‌ನಲ್ಲಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ್ದು, ಅವರಿಗೆ ಸಾಂತ್ವಾನ ನೀಡಿದ್ದಾರೆ. ತನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಸಹಾಯ ಮಾಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಅದಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, “ಆಡಳಿತದಲ್ಲಿ ಕೆಲವು ಲೋಪ ಉಂಟಾದ ಕಾರಣದಿಂದಾಗಿ ಈ ಭಾರೀ ದುರಂತ ಸಂಭವಿಸಿದೆ. 80,000 ಜನರಿಗೆ ಅನುಮತಿ ಇದ್ದಾಗ, ಇಷ್ಟೊಂದು ಜನರು ಅಲ್ಲಿಗೆ ಬಂದಿದ್ದು ಹೇಗೆ? ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...