ಆಳ ಸಮುದ್ರದ ಗಣಿಗಾರಿಕೆಗೆ ಅನುಮೋದನೆ ಖಂಡಿಸಿ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ

Date:

ಕೇರಳ, ಗುಜರಾತ್, ಅಂಡಮಾನ್ ಮತ್ತು ನಿಕೋಬಾರ್ ಕರಾವಳಿಯಲ್ಲಿ ಆಳ ಸಮುದ್ರದ ಗಣಿಗಾರಿಕೆಗೆ ಅನುಮತಿ ನೀಡುವ ಟೆಂಡರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಇದರಿಂದಾಗಿ ಸಮುದ್ರ ಜೀವಿಗಳಿಗೆ ಆಗುವ ಸಮಸ್ಯೆಯನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ, ಪರಿಣಾಮದ ಬಗ್ಗೆ ಯಾವುದೇ ಕಠಿಣ ಪರಿಶೀಲನೆ ನಡೆಸದೆ ಖಾಸಗಿ ಸಂಸ್ಥೆಗಳಿಗೆ ಆಳ ಸಮುದ್ರದ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದು ಕಳವಳಕಾರಿ ಎಂದು ರಾಹುಲ್ ಗಾಂಧಿ ತನ್ನ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೇರಳ, ಗುಜರಾತ್ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ಕರಾವಳಿಯಲ್ಲಿ ಆಳ ಸಮುದ್ರದ ಗಣಿಗಾರಿಕೆಗೆ ಅನುಮತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಲವಾಗಿ ಖಂಡಿಸಲು ಪತ್ರ ಬರೆಯುತ್ತಿರುವುದಾಗಿ ರಾಹುಲ್ ಗಾಂಧಿ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಹುಲ್‌ ಲೋಕಸಭೆ ಸದಸ್ಯತ್ವ ಅನರ್ಹತೆ | ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಪ್ರತಿಪಕ್ಷಗಳು

“ಲಕ್ಷಾಂತರ ಮೀನುಗಾರರು ತಮ್ಮ ಜೀವನೋಪಾಯ ಮತ್ತು ಜೀವನ ವಿಧಾನದ ಮೇಲೆ ಅದರ ಪರಿಣಾಮದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸ್ಥಳೀಯರೊಂದಿಗೆ ಸಮಾಲೋಚಿಸದೆ ಅಥವಾ ಪರಿಸರ ಅಧ್ಯಯನಗಳನ್ನು ನಡೆಸದೆ ಆಳ ಸಮುದ್ರದ ಗಣಿಗಾರಿಕೆಗೆ ಅನುಮತಿ ನೀಡಿರುವುದು ಖಂಡನೀಯ” ಎಂದಿದ್ದಾರೆ.

ರಾಹುಲ್
ರಾಹುಲ್1

“ಕಡಲಾಚೆಯ ಗಣಿಗಾರಿಕೆ ಲಕ್ಷಾಂತರ ಮೀನುಗಾರರ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತದೆ ಮತ್ತು ನಮ್ಮ ಸಮುದ್ರ ಜೀವಿಗಳಿಗೆ ಹಾನಿಯಾಗಿತ್ತದೆ. ಸರ್ಕಾರ ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಇನ್ನು ಗಣಿ ಸಚಿವಾಲಯವು 13 ಆಳ ಸಮುದ್ರದ ಗಣಿಗಾರಿಕೆಗೆ ಪರವಾನಗಿ ನೀಡಲು ಟೆಂಡರ್‌ಗಳನ್ನು ಆಹ್ವಾನಿಸಿದಾಗ, ತೀವ್ರ ಪ್ರತಿಭಟನೆ ನಡೆದಿದೆ. 13 ಕಡೆಗಳ ಪೈಕಿ ಹಲವು ಮೀನು ಸಂತಾನೋತ್ಪತ್ತಿ ಆವಾಸಸ್ಥಾನವಾಗಿದೆ. ಇದರಿಂದಾಗಿ ಮೀನಿನ ಸಂತಾನ ನಾಶವಾಗುತ್ತದೆ ಎಂದು ಸ್ಥಳೀಯರು ಮತ್ತು ವಿಪಕ್ಷಗಳು ಆರೋಪಿಸಿದೆ.

ಕೇರಳದಲ್ಲಿ 11 ಲಕ್ಷಕ್ಕೂ ಹೆಚ್ಚು ಜನರು ಮೀನುಗಾರಿಕೆಯನ್ನು ಅವಲಂಬಿಸಿದ್ದಾರೆ. ಇದು ಅವರ ಸಾಂಪ್ರದಾಯಿಕ ಉದ್ಯೋಗ. ಅವರ ಜೀವನ ವಿಧಾನದೊಂದಿಗೆ ನಿಕಟ ಸಂಬಂಧ ಹೊಂದಿದೆ. ನಿಕೋಬಾರ್ ವೈವಿಧ್ಯಮಯ ಪರಿಸರ ವ್ಯವಸ್ಥೆಗಳಿಗೆ ಆಶ್ರಯ ನೀಡುವಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟಿದೆ. ಹಲವಾರು ಸ್ಥಳೀಯ ಜಾತಿಯ ವನ್ಯಜೀವಿಗಳಿಗೆ ನೆಲೆಯಾಗಿದೆ. ಆದರೆ ಕೇಂದ್ರ ಸರ್ಕಾರದ ಒಂದು ಕ್ರಮದಿಂದ ಎಲ್ಲವೂ ನಾಶವಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಆಳ ಸಮುದ್ರದ ಗಣಿಗಾರಿಕೆಯಿಂದ ಉಂಟಾಗುವ ಯಾವುದೇ ಹಾನಿಯನ್ನೂ ಸರಿಪಡಿಸಲಾಗದು. ನಮ್ಮ ಕರಾವಳಿ ಪರಿಸರ ಸವೆತದಿಂದಾಗಿ ಚಂಡಮಾರುತದಂತಹ ನೈಸರ್ಗಿಕ ವಿಕೋಪಗಳು ಉಂಟಾಗಬಹುದು. ಸರ್ಕಾರವು ವೈಜ್ಞಾನಿಕ ಮೌಲ್ಯಮಾಪನ ನಡೆಸದೆ ಇಂತಹ ಚಟುವಟಿಕೆಗಳಿಗೆ ಉದ್ದೇಶಪೂರ್ವಕವಾಗಿ ಹಸಿರು ನಿಶಾನೆ ನೀಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...