ದೆಹಲಿ ಚುನಾವಣೆ | ಎಎಪಿಯ ‘ಅಪ್ರಾಮಾಣಿಕ’ 11 ನಾಯಕರ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಚಿತ್ರ

Date:

ದೆಹಲಿ ಚುನಾವಣೆಗೆ ಬಿಜೆಪಿ, ಎಎಪಿ, ಕಾಂಗ್ರೆಸ್ ಭರ್ಜರಿ ಪ್ರಚಾರವನ್ನು ನಡೆಸುತ್ತಿದೆ. ಈ ನಡುವೆ ಆಡಾಳಿತರೂಢ ಎಎಪಿ 11 ‘ಅಪ್ರಾಮಾಣಿಕ’ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್‌ನಲ್ಲಿ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಚಿತ್ರವೂ ಕೂಡಾ ಕಾಣಿಸಿಕೊಂಡಿದೆ.

ರಾಹುಲ್ ಗಾಂಧಿ ತನ್ನ ವಿರುದ್ಧವಾಗಿ ನೀಡಿರುವ ತಾನು ಯಾವುದೇ ಪ್ರತ್ಯುತ್ತರ ನೀಡುವುದಿಲ್ಲ ಎಂದು ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ ಒಂದು ದಿನದ ಬಳಿಕ ರಾಹುಲ್ ಗಾಂಧಿ ಒಳಗೊಂಡ 11 ಅಪ್ರಾಮಾಣಿಕ ನಾಯಕರ ಈ ಪೋಸ್ಟರ್ ಅನ್ನು ಎಎಪಿ ಬಿಡುಗಡೆ ಮಾಡಿದೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಚೀನೀ ಸಿಸಿಟಿವಿ ಕ್ಯಾಮೆರಾ ಬಳಕೆ, ಪಂಜಾಬ್ ಆಡಳಿತ ದುರುಪಯೋಗ: ಎಎಪಿ, ಬಿಜೆಪಿ ವಾಕ್ಸಮರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿ ಮಾತ್ರವಲ್ಲದೆ ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ನಾಯಕ ವಿರೇಂದ್ರ ಸಚ್‌ದೇವ, ಅನುರಾಗ್ ಠಾಕೂರ್, ಪರ್ವೇಶ್ ವರ್ಮಾ, ವಿಜೇಂದರ್ ಗುಪ್ತಾ, ರಮೇಶ್ ಬಿಧುರಿ, ಕಾಂಗ್ರೆಸ್ ನಾಯಕ ಅಜಯ್ ಮಖೇನ್, ಸಂದೀಪ್ ದೀಕ್ಷಿತ್ ಚಿತ್ರಗಳು ಕೂಡಾ ಇದೆ.

ಕೇಜ್ರಿವಾಲ್ ಮತ್ತು ಪತ್ನಿ ಸುನೀತಾ ಕೇಜ್ರಿವಾಲ್ ಇರುವ ಚಿತ್ರದೊಂದಿಗೆ “ಕೇಜ್ರಿವಾಲ್ ಅವರ ಪ್ರಾಮಾಣಿಕತೆಯು ಈ ಅಪ್ರಾಮಾಣಿಕರಿಗೆ ತೊಂದರೆ ನೀಡಲಿದೆ” ಎಂದು ಬರೆಯಲಾಗಿದೆ.

ಈ ಬೆನ್ನಲ್ಲೇ ಎಎಪಿ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇಜ್ರಿವಾಲ್‌ಗೆ ಧೈರ್ಯವಿದ್ದರೆ, ಇಂಡಿಯಾ ಒಕ್ಕೂಟವನ್ನು ತೊರೆಯವುದಾಗಿ ಘೋಷಿಸಲಿ. ಕಾಂಗ್ರೆಸ್ 100 ಸಂಸದರೊಂದಿಗೆ ದೃಢವಾಗಿದೆ, ಎಲ್ಲಾ 7 ಸೀಟುಗಳನ್ನು ಬಿಜೆಪಿಗೆ ಕೊಟ್ಟವರು ಅರವಿಂದ್ ಕೇಜ್ರಿವಾಲ್” ಎಂದು ಕಾಂಗ್ರೆಸ್ ಅಭ್ಯರ್ಥಿ ಕಲ್ಕಾಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ ಪ್ರಚಾರದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ; ಬಿಜೆಪಿ ಗೂಂಡಾಗಳೆಂದ ಎಎಪಿ

“ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿಗಾಗಿ ನಮ್ಮೆಲ್ಲರ ಮುಂದೆ ಬೇಡುತ್ತಿದ್ದಿರಿ. ದೆಹಲಿಯಲ್ಲಿ 7 ಕ್ಷೇತ್ರಕ್ಕಾಗಿ ನಿಮ್ಮೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ದೊಡ್ಡ ತಪ್ಪು ಮಾಡಿದೆ. ಕಾಂಗ್ರೆಸ್ ಇದರಿಂದಾಗಿ ದೊಡ್ಡ ನಷ್ಟವನ್ನು ಅನುಭವಿಸಬೇಕಾಯಿತು” ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎಎಪಿ, ಕಾಂಗ್ರೆಸ್ ಇಂಡಿಯಾ ಒಕ್ಕೂಟದ ಭಾಗವಾಗಿ ಜೊತೆಯಾಗಿ ಸ್ಪರ್ಧಿಸಿತ್ತು. ಆದರೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿಲ್ಲ. ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ. ಇಂಡಿಯಾ ಒಕ್ಕೂಟದ ಕೆಲವು ಪಕ್ಷಗಳು ಎಎಪಿಗೆ ತನ್ನ ಬೆಂಬಲವನ್ನು ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...