ಯಾವಾಗ ಮದುವೆಯಾಗುತ್ತೀರಿ ಎಂದು ಕೇಳಿದ ಮೆಕ್ಯಾನಿಕ್‌ಗೆ ರಾಹುಲ್‌ ಗಾಂಧಿ ನೀಡಿದ ಉತ್ತರವೇನು ಗೊತ್ತಾ?

Date:

ನವದೆಹಲಿಯ ಕರೋಲ್ ಬಾಗ್‌ನಲ್ಲಿ ಮೋಟರ್‌ಸೈಕಲ್‌ ಮೆಕ್ಯಾನಿಕ್‌ಗಳೊಂದಿಗೆ ಇತ್ತೀಚಿನ ನಡೆಸಿದ ಸಂವಾದದ ವಿಡಿಯೋವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ 12 ನಿಮಿಷಗಳ ವಿಡಿಯೋದಲ್ಲಿ, ರಾಹುಲ್ ಗಾಂಧಿ ಅವರು ಮೆಕ್ಯಾನಿಕ್‌ಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ. ಅವರಲ್ಲಿ ಒಬ್ಬಾತ ನೀವು ಯಾವಾಗ ಮದುವೆಯಾಗುತ್ತೀರಿ ಎಂದು ಕೇಳಿದಾಗ, ಅದಕ್ಕೆ ರಾಹುಲ್ “ನೋಡೋಣ” ಎಂದಷ್ಟೆ ಉತ್ತರಿಸಿದರು.

ಬಳಿಕ ರಾಹುಲ್ ಮೆಕ್ಯಾನಿಕ್ ಕಡೆ ತಿರುಗಿ ನಿಮಗೆ ಮದುವೆ ಆಯ್ತೇ ಎಂದು ಮರು ಪ್ರಶ್ನಿಸಿದ್ದು, ಅದಕ್ಕೆ ಮೆಕ್ಯಾನಿಕ್‌, ಅಪ್ಪ ಹುಡುಗಿ ನೋಡು ಅಂದಿದ್ದಾರೆ, ಈಗ ಸಂಬಳ ಕಡಿಮೆ. ನಾವು ತಿಂಗಳಿಗೆ 14 ರಿಂದ 15 ಸಾವಿರ ಸಂಪಾದಿಸುತ್ತೇವೆ, ಈ ಮೊತ್ತದಲ್ಲಿ ನಾವು ನಮ್ಮ ಕುಟುಂಬವನ್ನು ಹೇಗೆ ನೆಡಸಲು ಸಾಧ್ಯ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಾದದಲ್ಲಿ ರಾಹುಲ್ ಗಾಂಧಿ ತಮ್ಮ ಬಳಿ ಕೆಟಿಎಂ 390 ಮೋಟಾರ್‌ ಸೈಕಲ್‌ ಇದೆ ಎಂದು ಹೇಳಿದ್ದು, ಅದನ್ನು ತಮ್ಮ ಭದ್ರತಾ ಸಿಬ್ಬಂದಿ ಭದ್ರತೆಯ ಕಾರಣದಿಂದ ಸವಾರಿ ಮಾಡಲು ಬಿಡದ ಕಾರಣ ಬಳಸದೆ ಮನೆಯಲ್ಲೇ ನಿಲ್ಲಿಸಲಾಗಿದೆ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚೆಕ್​ ಬೌನ್ಸ್​ ಪ್ರಕರಣ | ನಟ ನೀನಾಸಂ ಅಶ್ವಥ್ ಬಂಧನ; ಜಾಮೀನಿನ ಮೇಲೆ ಬಿಡುಗಡೆ

ರಾಹುಲ್ ಅವರು ಬೈಕರ್‌ಗಳ ಮಾರುಕಟ್ಟೆಯಲ್ಲಿ, ಉಮೇದ್ ಶಾ, ವಿಕ್ಕಿ ಸೇನ್ ಮತ್ತು ಮನೋಜ್ ಪಾಸ್ವಾನ್ ಅವರೊಂದಿಗೆ ಸಂವಾದ ನಡೆಸುವುದರ ಜೊತೆ ಬೈಕ್‌ಗಳನ್ನು ಕೂಡ ರಿಪೇರಿ ಮಾಡಿದರು.

“ಭಾರತದ ಆಟೋಮೊಬೈಲ್ ಉದ್ಯಮವನ್ನು ಬಲಪಡಿಸಲು, ಭಾರತದ ಮೆಕ್ಯಾನಿಕ್‌ಗಳನ್ನು ಸಬಲೀಕರಣಗೊಳಿಸುವ ಅಗತ್ಯವಿದೆ” ಎಂದು ತಾವು ವಿಡಿಯೋ ಹಂಚಿಕೊಂಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

“ನಾನು ಭಾರತದಲ್ಲಿ ಮೆಕ್ಯಾನಿಕ್‌ಗಳ ಕಷ್ಟಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವರ ಕನಸುಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಿದೆ. ಹಿರಿಯ ಮೆಕ್ಯಾನಿಕ್ ಉಮೇದ್ ಷಾ ಅವರೊಂದಿಗೆ ಬೈಕ್‌ ಸರ್ವೀಸ್‌ ಮಾಡುವ ಸಂದರ್ಭದಲ್ಲಿ ಹಲವು ವರ್ಷಗಳ ಹಿಂದೆ ಬಡತನದಿಂದಾಗಿ ತಾವು ಶಿಕ್ಷಣವನ್ನು ಅರ್ಧಕ್ಕೆ ಕೈಬಿಟ್ಟು ತಮ್ಮ ಹಿರಿಯ ಸಹೋದರನಂತೆ ಮೆಕ್ಯಾನಿಕ್‌ ಆಗಬೇಕಾಯಿತು’ ಎಂದು ತಿಳಿಸಿರುವ ಮಾಹಿತಿಯನ್ನು ರಾಹುಲ್ ಉಲ್ಲೇಖಿಸಿದ್ದಾರೆ.

“ನಮ್ಮ ಮೆಕ್ಯಾನಿಕ್‌ಗಳು ಆಟೋಮೊಬೈಲ್ ಉದ್ಯಮವನ್ನು ಉಳಿಸಿಕೊಳ್ಳಲು ಶ್ರಮಿಸುತ್ತಿದ್ದಾರೆ. ಅವರು ಉತ್ತಮ ಸೌಲಭ್ಯಗಳು ಮತ್ತು ಉತ್ತಮ ಅವಕಾಶಗಳನ್ನು ಪಡೆಯಲು ಅರ್ಹರು. ಪ್ರತಿಯೊಬ್ಬ ವ್ಯಕ್ತಿಯ ಮತ್ತು ಪ್ರತಿ ವೃತ್ತಿಯ ಕಾರ್ಮಿಕರ ಸಮೃದ್ಧಿ ಮತ್ತು ಯೋಗಕ್ಷೇಮದಲ್ಲಿ ಭಾರತದ ನಿಜವಾದ ಪ್ರಗತಿ ಅಡಗಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಗದ್ದೆ ನಾಟಿ ಮಾಡಿದ್ದ ರಾಹುಲ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಿನ್ನೆ (ಜುಲೈ 9) ಬೆಳಗ್ಗೆ ಹರಿಯಾಣದ ಸೋನಿಪತ್‌ನ ಮದೀನಾ ಗ್ರಾಮದಲ್ಲಿ ಭತ್ತ ನಾಟಿ ಮಾಡಲು ರೈತರಿಗೆ ಸಹಾಯ ಮಾಡಿದರು. ಅವರು ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಭತ್ತದ ಗದ್ದೆಯೊಂದರ ಬಳಿ ಕಾರು ನಿಲ್ಲಿಸಿ, ರೈತರಿಗೆ ಸಹಾಯ ಮಾಡಿದರು.

ಗದ್ದೆಯೊಂದರಲ್ಲಿ ಭತ್ತದ ನಾಟಿಯಾಗುತ್ತಿರುವುದನ್ನು ಕಂಡ ರಾಹುಲ್ ಕಾರನ್ನು ನಿಲ್ಲಿಸಿದರು. ಹೊಲಕ್ಕೆ ತೆರಳಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ ರೈತರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...