ಸಂಭಲ್‌ಗೆ ತೆರಳುವುದಕ್ಕೆ ತಡೆ | ‘ಸಾಂವಿಧಾನಿಕ ಹಕ್ಕು ನಿರಾಕರಣೆ’ ಎಂದ ರಾಹುಲ್ ಗಾಂಧಿ

Date:

ಸಂಭಲ್‌ಗೆ ತೆರಳುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, “ಲೋಕಸಭೆ ವಿಪಕ್ಷ ನಾಯಕನಾದ ನನ್ನ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿದೆ” ಎಂದು ದೂರಿದ್ದಾರೆ.

ಸಂಭಲ್‌ನಲ್ಲಿ ಸದ್ಯ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಹಿನ್ನೆಲೆ ರಾಹುಲ್, ಪ್ರಿಯಾಂಕಾ ಗಾಂಧಿ ಅವರನ್ನು ಗಾಜಿಪುರ ಗಡಿಯಲ್ಲಿ ಜಿಲ್ಲೆಗೆ ತೆರಳುತ್ತಿದ್ದಾಗ ತಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಹುಲ್, ಪ್ರಿಯಾಂಕಾ ಮಾತ್ರವಲ್ಲದೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಕೂಡಾ ಇಂದು ಬೆಳಿಗ್ಗೆ ಗಾಜಿಪುರ ಗಡಿಯನ್ನು ತಲುಪಿದ್ದರು. ಆದರೆ ಗಡಿಯಲ್ಲಿ ಸಂಭಲ್‌ಗೆ ಹೋಗುವವರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಹಾಗೆಯೇ ಭಾರೀ ಪೊಲೀಸ್ ಪಡೆಯನ್ನು ಗಡಿಯಲ್ಲಿ ನಿಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಂಭಲ್‌ ವಿವಾದ ಮತ್ತು ರಾಜಕೀಯ ನಾಯಕರ ದ್ವೇಷ ರಾಜಕಾರಣ

“ನಾವು ರಾಹುಲ್ ಗಾಂಧಿ ಅವರಿಗೆ ಸಂಭಲ್‌ಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಅಲ್ಲಿ ನಿಷೇದಾಜ್ಞೆಯನ್ನು ಹೊರಡಿಸಲಾಗಿದೆ. ಪೊಲೀಸರು ರಾಹುಲ್ ಗಾಂಧಿ ಅವರನ್ನು ಗಡಿಯಲ್ಲಿಯೇ ತಡೆಯುತ್ತಾರೆ” ಎಂದು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಒಬ್ಬನೇ ಹೋಗಲು ಸಿದ್ಧ: ರಾಹುಲ್ ಗಾಂಧಿ

ಇನ್ನು ತಮ್ಮನ್ನು ಪೊಲೀಸರು ತಡೆ ಹಿಡಿದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, “ನಾವು ಸಂಭಲ್‌ಗೆ ಹೋಗುವ ಪ್ರಯತ್ನ ಮಾಡಿದೆವು. ಆದರೆ ನಮ್ಮನ್ನು ತಡೆಯಲಾಗಿದೆ. ಲೋಕಸಭೆಯ ವಿಪಕ್ಷ ನಾಯಕನಾಗಿ ಸಂಭಲ್‌ಗೆ ಭೇಟಿ ನೀಡುವುದು ನನ್ನ ಹಕ್ಕು. ಪೊಲೀಸರ ಜೊತೆ ನಾನು ಒಬ್ಬನೇ ಸಂಭಲ್‌ಗೆ ಹೋಗಲು ಸಿದ್ಧನಿದ್ದೇನೆ. ಆದರೆ ಅದಕ್ಕೂ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

“ಇದು ‘ಹೊಸ ಹಿಂದೂಸ್ತಾನ’ ಆಗಿದೆ. ಡಾ. ಬಿ ಆರ್ ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದ ಅಂತ್ಯಕ್ಕೆ ಯತ್ನ ನಡೆಯುತ್ತಿದೆ. ನನ್ನ ಸಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಆದರೆ ನಾವು ಈ ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ತಿಳಿಸಿದರು.

ಉತ್ತರ ಪ್ರದೇಶದ ಸಂಭಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು ಭದ್ರತಾ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿದೆ.

ಈ ಹಿಂದೆ ನವೆಂಬರ್ 30ರವರೆಗೆ ನಿರ್ಬಂಧವನ್ನು ಹೇರಲಾಗಿತ್ತು. ಆದರೆ ಬಳಿಕ ನಿರ್ಬಂಧವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...