ಬಳ್ಳಾರಿ ಜೀನ್ಸ್‌ ಘಟಕಗಳಿಗೆ ಸೌಲಭ್ಯ ಕಲ್ಪಿಸಿ: ರಾಜ್ಯ ಸರ್ಕಾರಕ್ಕೆ ರಾಹುಲ್‌ ಪತ್ರ

Date:

ಬಳ್ಳಾರಿಯ ಜೀನ್ಸ್ ತಯಾರಿಕಾ ಘಟಕಗಳ ಸೌಲಭ್ಯಗಳನ್ನು ಸುಧಾರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರಾಹುಲ್ ಗಾಂಧಿ ಅವರು ಪತ್ರ ಬರೆದ ಬಳಿಕ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮತ್ತು ಅವರ ತಂಡವು ಜೀನ್ಸ್‌ ಬಟ್ಟೆ ತಯಾರಕರಿಗೆ ಸೌಲಭ್ಯ ಕಲ್ಪಿಸುವ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. 

ಬಳ್ಳಾರಿ ಜಿಲ್ಲೆಯಲ್ಲಿ ಸುಮಾರು 300 ಸಣ್ಣ ಮತ್ತು ಮಧ್ಯಮ ಜೀನ್ಸ್ ಉತ್ಪಾದನಾ ಘಟಕಗಳ ನೆಲೆಯಾಗಿದ್ದು, ಸಾವಿರಾರು ಕುಟುಂಬಗಳು ಈ ಉದ್ಯಮವನ್ನು ನಂಬಿಕೊಂಡು ಜೀವನ ನಡೆಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ನಿಮಿತ್ತ ಬಳ್ಳಾರಿಗೆ ಆಗಮಿಸಿದ್ದ ರಾಹುಲ್‌ ಗಾಂಧಿ ಜಿಲ್ಲೆಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸಿ ಬಳ್ಳಾರಿಯನ್ನು ‘ಜೀನ್ಸ್ ಕ್ಯಾಪಿಟಲ್’ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ಅದೇ ನಿಟ್ಟಿನಲ್ಲಿ ಬಳ್ಳಾರಿ ಜೀನ್ಸ್‌ ಘಟಕಗಳಿಗೆ ಸೌಲಭ್ಯ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲೂ ಕೂಡ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮಾಜಿ ಗವರ್ನರ್‌ ರಘುರಾಂ ರಾಜನ್‌ ಅವರೊಂದಿಗೆ ಸಂವಾದವೊಂದರಲ್ಲಿ ಪಾಲ್ಗೊಂಡು ಸಾವಿರಾರು ಜನರ ಜೀವನಕ್ಕೆ ಆಧಾರವಾಗಿದ್ದ ಬಳ್ಳಾರಿ ಜೀನ್ಸ್‌ ಘಟಕಗಳು ಅವನತಿ ಹೊಂದುತ್ತಿರುವ ಬಗ್ಗೆ ಮಾತನಾಡಿ ಘಟಕಗಳನ್ನು ಪುನಶ್ಚೇತನಗೊಳಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇತ್ತೀಚೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿರುವ ಜೀನ್ಸ್ ತಯಾರಕ ಭರತ್ ಮುತ್ತಾ ಅವರು ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ, ನಾವು ಕಳೆದ 40 ವರ್ಷಗಳಿಂದ ಜೀನ್ಸ್‌ ತಯಾರಿಸುತ್ತಿರುವ ಅತ್ಯಂತ ಹಳೆಯ ತಯಾರಕರಾಗಿದ್ದೇವೆ. ನಮಗೆ ಉತ್ತಮ ಸಂಪರ್ಕ ವ್ಯವಸ್ಥೆ ಅಗತ್ಯವಿದೆ. ನಮ್ಮ ಉತ್ಪನ್ನಗಳು ಚೆನ್ನೈ, ಮುಂಬೈ ಮತ್ತು ಇತರ ನಗರಗಳಲ್ಲಿನ ಮಾರುಕಟ್ಟೆಗಳನ್ನು ತಲುಪಬೇಕಾಗಿದೆ. ಆಂಧ್ರ ಪ್ರದೇಶದ ಗುಂತಕಲ್‌ನಂತಹ ನಗರಗಳಲ್ಲಿನ ರೈಲು ನಿಲ್ದಾಣಗಳ ಮೇಲೆ ನಾವು ಅವಲಂಬಿತವಾಗದಿರಲು ಉತ್ತಮ ರೈಲ್ವೆ ಸಂಪರ್ಕ ಮತ್ತು ಮೂಲಸೌಕರ್ಯ ಅತ್ಯಗತ್ಯ” ಎಂದು ಹೇಳಿದರು.

ಈ ಸುದ್ದಿ ಓದಿದ್ದಾರಾ? ಕರ್ನಾಟಕದ ಒಂದು ಸೇರಿ ದೇಶದ 20 ವಿವಿ ನಕಲಿ : ಯುಜಿಸಿ ಘೋಷಣೆ

“ಅಲ್ಲದೆ, ಜೀನ್ಸ್ ತಯಾರಕರು ಉತ್ಪನ್ನವನ್ನು ಸ್ವಚ್ಛಗೊಳಿಸಲು ರಾಸಾಯನಿಕಗಳನ್ನು ಬಳಸುತ್ತಾರೆ. ಇದರಿಂದ ಮಾಲಿನ್ಯವನ್ನು ಉಂಟುಮಾಡುತ್ತಾರೆ ಎಂದು ಆರೋಪಿಸಿ ನಮಗೆಲ್ಲರಿಗೂ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್‌ಗಳನ್ನು ನೀಡಲಾಯಿತು. ಆದ ಕಾರಣ ಸರಕಾರದಿಂದ ಕಡ್ಡಾಯವಾಗಿ ಬಳ್ಳಾರಿಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಬೇಕಿದೆ. ಜೊತೆಗೆ ಬಳ್ಳಾರಿಗೂ ಉತ್ತಮ ವಿಮಾನ ಸಂಪರ್ಕದ ಅಗತ್ಯವಿದೆ. ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆ ಅವ್ಯವಸ್ಥಿತವಾಗಿದ್ದು, ಈ ಬಗ್ಗೆ ಗಮನಹರಿಸಬೇಕಿದೆ. ಈಗಾಗಲೇ 10-15 ಜೀನ್ಸ್ ಘಟಕಗಳು ಅಹಮದಾಬಾದ್‌ಗೆ ಮತ್ತು 4-5 ಬೆಂಗಳೂರಿಗೆ ಸ್ಥಳಾಂತರಗೊಂಡಿವೆ. ಅಲ್ಲದೆ, 10-15 ಮಂದಿ ತಮ್ಮ ಅಂಗಡಿಗಳನ್ನು ಮುಚ್ಚಿದ್ದಾರೆ. ಮೂಲಸೌಕರ್ಯದ ಗಂಭೀರ ಸಮಸ್ಯೆಗಳಿಲ್ಲದಿದ್ದರೆ ಯಾರು ತಾನೆ ಬಳ್ಳಾರಿಯಿಂದ ಬೇರೆ ಕಡೆ ಸ್ಥಳಾಂತರಗೊಳ್ಳುತ್ತಾರೆ? ಎಂದು ಜೀನ್ಸ್ ತಯಾರಕ ಭರತ್ ಮುತ್ತಾ ಪ್ರಶ್ನಿಸಿದರು.

ಈ ಹಿಂದೆ ಕೈಗಾರಿಕಾ ಸಚಿವರಾಗಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿ, ಜೀನ್ಸ್ ತಯಾರಕರಿಗೆ ಉತ್ತಮ ಸೌಲಭ್ಯ ಮತ್ತು ರಿಯಾಯಿತಿ ನೀಡಿದರೆ ಅವರಿಗೆ ಉತ್ತೇಜನ ನೀಡಿದಂತಾಗುತ್ತದೆ. ಜಿಲ್ಲೆಯಲ್ಲಿ ಹೂಡಿಕೆ ಮಾಡಲು ನಾವು ಕೆಲವು ಅಂತಾರಾಷ್ಟ್ರೀಯ ಬ್ರಾಂಡ್‌ಗಳನ್ನು ಆಕರ್ಷಿಸಬಹುದು. ಇದು ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದರು.

ಈ ಬಗ್ಗೆ ಸಚಿವ ಎಂ ಬಿ ಪಾಟೀಲ ಮಾತನಾಡಿ, ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು. ತಯಾರಕರ ಕುಂದುಕೊರತೆಗಳನ್ನು ಪರಿಹರಿಸಲು ಎಲ್ಲ ರೀತಿಯಲ್ಲೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...