ಮಳೆ ಅವಾಂತರ | ಬೆಂಗಳೂರಿನ ಜನತೆ ಕಟ್ಟುವ ತೆರಿಗೆಗಾದ್ರೂ ಸರ್ಕಾರ ಋಣ ತೀರಿಸಲಿ: ಆರ್‌ ಅಶೋಕ್

Date:

ಇನ್ನಾದರೂ ರಸ್ತೆ ಗುಂಡಿ ಮುಚ್ಚುವ ಈ ತೇಪೆ ಹಾಕುವ ಕೆಲಸ ಸಾಕು ಮಾಡಿ, ಹೊಸದಾಗಿ ಗುಣಮಟ್ಟದ ರಸ್ತೆ ನಿರ್ಮಿಸುವ ಮೂಲಕ ಬೆಂಗಳೂರಿನ ಜನತೆ ಕಟ್ಟುವ ತೆರಿಗೆಗಾದ್ರೂ ಸರ್ಕಾರ ಋಣ ತೀರಿಸಲಿ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಸಲಹೆ ನೀಡಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಪಾರ್ಟ್ ಟೈಂ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿ ಕೆ ಶಿವಕುಮಾರ್‌ ಅವರ ರಸ್ತೆಗುಂಡಿ ಮುಚ್ಚಿಸುವ ಮಹತ್ಕಾರ್ಯದ ಕಾರ್ಯವೈಖರಿ ಒಂದೇ ಮಳೆಗೆ ಬಟಾ ಬಯಲಾಗಿದೆ” ಎಂದು ಲೇವಡಿ ಮಾಡಿದ್ದಾರೆ.

“ಮಹಾದೇವಪುರದಲ್ಲಿ ಮಳೆ ನೀರಿನಲ್ಲಿ ಮುಳುಗಿರುವ ಬೈಕ್ ಎತ್ತುತ್ತಿರುವ ಈ ದೃಶ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬೆಂಗಳೂರಿನ ಪರಿಸ್ಥಿತಿ ಯಾವ ಅಧೋಗತಿಗೆ ತಲುಪಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಂತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ ರಸ್ತೆಗುಂಡಿ ಮುಚ್ಚುಲು ಅಧಿಕಾರಿಗಳಿಗೆ ಆದೇಶ ನೀಡಿ, ಸಾಮಾಜಿಕ ಜಾಲತಾಣದಲ್ಲಿ ಒಂದೆರಡು ಫೋಟೋ, ವಿಡಿಯೋ ಹಾಕಿಬಿಟ್ಟರೆ ರಸ್ತೆ ಗುಂಡಿ ಸಮಸ್ಯೆ ಬಗೆಹರಿದು ಬಿಡುತ್ತಾ? ಒಬ್ಬ ಜವಾಬ್ದಾರಿಯುತ ಸಚಿವರು ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಸರಿಯಾಗಿ ನಡೆಯುತ್ತಿದೆಯೋ ಇಲ್ಲವೋ ಎಂದು ಸ್ಥಳಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ಮಾಡಬೇಕು. ಅದು ಬಿಟ್ಟು ನಾಮಕಾವಸ್ತೆ ಸುಮ್ಮನೆ ಆದೇಶ ನೀಡಿ ವಾರಗಟ್ಟಲೆ ವಿದೇಶ ಪ್ರವಾಸಕ್ಕೆ ಹೊರಟುಬಿಟ್ಟರೆ, ಇಲ್ಲಿ ರಸ್ತೆಗುಂಡಿ ಸಮಸ್ಯೆ ಹೇಗೆ ಬಗೆಹರಿಯುತ್ತಾ” ಎಂದು ಪ್ರಶ್ನಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

” ‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂದು ಬೀದಿನಾಟಕ ಮಾಡುತ್ತೀರಲ್ಲ, ರಾಜ್ಯದ ಜಿಎಸ್ ಡಿಪಿಗೆ 35-40% ಕೊಡುಗೆ ನೀಡುವ ಬೆಂಗಳೂರಿನ ಜನತೆಗೆ ಕನಿಷ್ಠ ಪಕ್ಷ ಗುಂಡಿ ಮುಕ್ತ ರಸ್ತೆಯನ್ನಾದರೂ ಕೊಡಬೇಕಲ್ಲವೇ? ಇನ್ನು ಪ್ರತಿಪಕ್ಷಗಳು ಟೀಕೆ ಮಾಡಿದರೆ, ಜನರ ಸಮಸ್ಯೆಗಳ ಬಗ್ಗೆ ದನಿ ಎತ್ತಿದರೆ, ಬೆಂಗಳೂರಿನ ಮರ್ಯಾದೆ ಕಳೆಯಬೇಡಿ ಎಂದು ಜವಾಬ್ದಾರಿಯಿಂದ ಜಾರಿಕೊಳ್ಳುವ ಪ್ರಯತ್ನ ಮಾಡುತ್ತೀರಿ. ಬೆಂಗಳೂರಿನ ಜನರಿಗೆ ಇಷ್ಟೆಲ್ಲ ಸಮಸ್ಯೆ ಆಗುತ್ತಿದ್ದರೂ, ಜನಜೀವನ ಅಸ್ತವ್ಯಸ್ತಗೊಂಡಿದ್ದರು ವಿಪಕ್ಷಗಳು ಸುಮ್ಮನೆ ಕೂರಬೇಕಾ? ಅಥವಾ ನಿಮಗೆ ಬಹುಪರಾಕ್ ಹೇಳಬೇಕಾ” ಎಂದು ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...