ಆ.31ರಂದು ರಾಜಭವನ ಚಲೋ : ಡಿಸಿಎಂ ಡಿ ಕೆ ಶಿವಕುಮಾರ್

Date:

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ​ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು (ಮಂಗಳವಾರ) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಆ.31ರಂದು ರಾಜಭವನ ಚಲೋ ನಡೆಸುತ್ತೇವೆ. ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್‌ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ. ಈ ಹಿನ್ನೆಲೆಯಲ್ಲಿ ಎಲ್ಲ ಶಾಸಕರು, ಸಚಿವರು, ಪರಿಷತ್ ಸದಸ್ಯರು ಭಾಗಿಯಾಗಬೇಕು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಸೂಚಿಸಿದರು.

ಹೆಚ್​ಡಿಕೆ ವಿರುದ್ದ ಡಿಕೆಶಿ ಕಿಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ, “ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಸಾಚಾ ಕೆಲಸ ಮಾಡುವವರು. ಇವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸು ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ನಾವೇನೂ ತಿರುಚಿ ಪರಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ ಎಸ್‌ಐಟಿ ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ನಾನು ಸಹಿಯೇ ಮಾಡಲಿಲ್ಲ ಎಂದು ಹೇಳಿದರು. ಅವರ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯ್ತು ಎಂದು ತಿಳಿಸಿದರು.

‘ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ?. ಸಹಿ ಫೋರ್ಜರಿ ಆಗಿದ್ದಿದ್ದರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

“ಯಾರೇ ಆಗಿರಲಿ, ಫೋರ್ಜರಿ ಮಾಡಿದವರ ಬಗ್ಗೆ ದೂರು ಕೊಡಬೇಕು. ನಾನು ಜಾಮೀನು ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ನಾನು ಕುಮಾರಸ್ವಾಮಿ ಬ್ರದರ್ ಆಸ್ತಿ ವಿವರವನ್ನೆಲ್ಲ ಕೇಳಿದ್ದೆ” ಎಂದು ಡಿಸಿಎಂ ವಾಗ್ದಾಳಿ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...