13 ವರ್ಷಗಳ ನಂತರ ಉದ್ಧವ್ ಠಾಕ್ರೆ ನಿವಾಸ ‘ಮಾತೋಶ್ರೀ’ಗೆ ರಾಜ್ ಭೇಟಿ

Date:

ಹಿಂದಿ ಹೇರಿಕೆ ವಿರುದ್ಧ, ಮರಾಠಿ ಭಾಷೆ ಉಳಿವು ಅಭಿಯಾನದ ಮೂಲಕ ಇತ್ತೀಚೆಗೆ ಠಾಕ್ರೆ ಸೋದರಸಂಬಂಧಿಗಳು ಒಂದಾಗಿದ್ದಾರೆ. ಇದೀಗ ಸುಮಾರು 13 ವರ್ಷಗಳ ಬಳಿಕ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಮುಂಬೈನಲ್ಲಿರುವ ಠಾಕ್ರೆಗಳ ಅಂತಸ್ತಿನ ನಿವಾಸವಾದ ಮಾತೋಶ್ರೀಗೆ ಆಗಮಿಸಿದ್ದಾರೆ. ತಮ್ಮ ಸೋದರಸಂಬಂಧಿ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಜನ್ಮದಿನ ಆಚರಣೆಗೆ ರಾಜ್ ಜೊತೆಯಾಗಿದ್ದಾರೆ.

ರಾಜ್ ಕೊನೆಯ ಬಾರಿಗೆ 2012ರಲ್ಲಿ ಬಾಳಾಸಾಹೇಬ್ ಠಾಕ್ರೆ ಅವರ ಮರಣದ ಸಮಯದಲ್ಲಿ ಉದ್ಧವ್ ನಿವಾಸವನ್ನು ಪ್ರವೇಶಿಸಿದ್ದರು. ಅದಾದ 13 ವರ್ಷಗಳ ನಂತರ ಈಗ ಮತ್ತೆ ಭೇಟಿ ನೀಡಿದ್ದಾರೆ. ರಾಜ್ ಜೊತೆಗೆ ಎಂಎನ್‌ಎಸ್ ನಾಯಕರಾದ ಬಾಲಾ ನಂದಗಾಂವ್ಕರ್ ಮತ್ತು ನಿತಿನ್ ಸರ್ದೇಸಾಯಿ ಇದ್ದರು.

ಇದನ್ನು ಓದಿದ್ದೀರಾ? ರಾಜಕೀಯ ಮೈತ್ರಿ ಬಗ್ಗೆ ರಾಜ್‌ ಠಾಕ್ರೆ ಜೊತೆ ಉದ್ಧವ್ ಮಾತುಕತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಬ್ಬರು ಸೋದರಸಂಬಂಧಿಗಳಾದ ರಾಜ್ ಮತ್ತು ಉದ್ಧವ್, ಮಾತೋಶ್ರೀ ಒಳಗೆ ಬಾಳಾಸಾಹೇಬ್ ಅವರ ಭಾವಚಿತ್ರದ ಬಳಿಕ ನಿಂತು ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗೆಯೇ ಇನ್ನೊಂದು ಚಿತ್ರದಲ್ಲಿ ಉದ್ಧವ್‌ಗೆ ರಾಜ್ ಹೂಗುಚ್ಛ ನೀಡುವುದು ಕಂಡುಬಂದಿದೆ. ಸದ್ಯ ಎರಡೂ ಚಿತ್ರಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಉದ್ಧವ್ ತಮ್ಮ ಕುಟುಂಬಸ್ಥರೊಂದಿಗೆ ಕೇಕ್ ಕತ್ತರಿಸುತ್ತಿರುವುದನ್ನು ಮತ್ತು ಶಿವಸೇನೆ ನಾಯಕರು ಹುಟ್ಟುಹಬ್ಬದ ಶುಭಾಶಯ ಕೋರುವ ವಿಡಿಯೋ ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಆದರೆ ಈ ವಿಡಿಯೋದಲ್ಲಿ ರಾಜ್ ಕಾಣಿಸಿಕೊಂಡಿಲ್ಲ.

ಈ ಹಿಂದೆ ಮರಾಠಿ ವಿಜಯ ಕಾರ್ಯಕ್ರಮದಲ್ಲಿ ಠಾಕ್ರೆ ಸೋದರಸಂಬಂಧಿಗಳು ಒಂದೇ ವೇದಿಕೆಯನ್ನು ಸುಮಾರು ಎರಡು ದಶಕಗಳ ನಂತರ ಹಂಚಿಕೊಂಡಿದ್ದರು. ಈ ವೇಳೆ ಮಾತನಾಡಿದ್ದ ಉದ್ಧವ್ ಮುಂಬರುವ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುಳಿವು ನೀಡಿದ್ದರು.

ರಾಜ್ ಉದ್ಧವ್1

“ನಾವು ಜೊತೆಯಾಗಿರಲು ಜೊತೆಗೆ ಬಂದಿದ್ದೇವೆ. ಮುಂಬೈ ನಾಗರಿಕ ಸಂಸ್ಥೆ ಮತ್ತು ಮಹಾರಾಷ್ಟ್ರದಲ್ಲಿ ನಾವು ಒಟ್ಟಾಗಿ ಅಧಿಕಾರವನ್ನು ಪಡೆಯುತ್ತೇವೆ” ಎಂದು ಮಾಜಿ ಸಿಎಂ ಉದ್ದವ್ ಹೇಳಿದ್ದರು. ಇನ್ನೊಂದೆಡೆ ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆಗೆ ಆಗದ ಕೆಲಸವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಡಿದ್ದಾರೆ ಎಂದು ರಾಜ್ ಠಾಕ್ರೆ ವ್ಯಂಗ್ಯವಾಡಿದ್ದರು.

2005ರಲ್ಲಿ ಮಾಲ್ವನ್ ವಿಧಾನಸಭಾ ಉಪಚುನಾವಣೆ ಪ್ರಚಾರದ ಸಮಯದಲ್ಲಿ ರಾಜ್ ಮತ್ತು ಉದ್ಧವ್ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಳಿಕ ಆಂತರಿಕ ಭಿನ್ನಾಭಿಪ್ರಾಯಗಳ ಕಾರಣ ರಾಜ್ ಠಾಕ್ರೆ ಶಿವಸೇನೆಯನ್ನು ತೊರೆದರು. 2005ರ ನವೆಂಬರ್‌ನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ ತಮ್ಮ ಚಿಕ್ಕಪ್ಪ ಸ್ಥಾಪಿಸಿದ ಶಿವಸೇನೆಗೆ ರಾಜೀನಾಮೆ ನೀಡುವುದಾಗಿ ಭಾವನಾತ್ಮಕವಾಗಿ ಹೇಳಿದ್ದರು. “ನಾನು ಕೇಳಿದ್ದು ಗೌರವ ಮಾತ್ರ. ನನಗೆ ಸಿಕ್ಕಿದ್ದು ಅವಮಾನ ಮಾತ್ರ” ಎಂದು ಠಾಕ್ರೆ ಹೇಳಿದ್ದರು. ಇದೀಗ ಮತ್ತೆ ರಾಜ್, ಉದ್ಧವ್ ಜೊತೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...