ರಾಜಸ್ಥಾನ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಕಚೇರಿ ಸಾಮಗ್ರಿಗಳಿಗೆ ಬೆಂಕಿ ಹಚ್ಚಿದ ಕಾರ್ಯಕರ್ತರು

Date:

ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಲವು ಆಕಾಂಕ್ಷಿಗಳಿಗೆ ಟಿಕೆಟ್ ಸಿಗದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ. ಹಲವಡೆ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಜ್‌ಸಮಂದ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಹಲವು ವಸ್ತುಗಳಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.

ಈ ಹಿಂದೆ, 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಭಾನುವಾರ 83 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ಸಿಗದೇ ಇರುವ ಆಕಾಂಕ್ಷಿಗಳು ಮತ್ತು ಅವರ ಬೆಂಬಲಿಗರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಚಿತ್ತೋರ್‌ಗಢ, ರಾಜ್‌ಸಮಂದ್, ಬುಂದಿ, ಅಲ್ವಾರ್ ಮತ್ತು ಜೈಪುರದಲ್ಲಿ ಭಾಗದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಈ ಭಾಗದಲ್ಲಿ ಚುನಾವಣೆಯಲ್ಲ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಚಿತ್ತೋರ್‌ಗಢದಲ್ಲಿ ಹಾಲಿ ಶಾಸಕ ಚಂದ್ರಭನ್ ಸಿಂಗ್ ಆಕ್ಯಾ ಅವರನ್ನು ಪಕ್ಷವು ಕೈಬಿಟ್ಟಿದ್ದು, ನರ್ಪತ್ ಸಿಂಗ್ ರಾಜ್ವಿಗೆ ಟಿಕೆಟ್ ನೀಡಿದೆ. ಸತತ ಎರಡು ಅವಧಿಗೆ ಚಿತ್ತೋರ್‌ಗಢದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಚಂದ್ರಭಾನ್ ಸಿಂಗ್ ಆಕ್ಯಾ ಅವರ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಪಿ ಜೋಶಿ ವಿರುದ್ಧ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೋಶಿ ಅವರು ಕಾಂಗ್ರೆಸ್‌ನ ಎನ್‌ಎಸ್‌ಯುಐ ಭಾಗವಾಗಿದ್ದಾಗ ನಾನು ಎಬಿವಿಪಿಯಲ್ಲಿದ್ದೆ. ಆಗಿನಿಂದಲೂ ಜೋಶಿ ಅವರು ನನ್ನ ಮೇಲೆ ದ್ವೇಷ ಹೊಂದಿದ್ದಾರೆ. ಪರಿಣಾಮವಾಗಿ, ನನ್ನ ಟಿಕೆಟ್ ಹಿಂಪಡೆಯಲಾಗಿದೆ” ಎಂದು ಚಂದ್ರಭಾನ್ ಸಿಂಗ್ ಕಿಡಿಕಾರಿದ್ದಾರೆ.

ರಾಜ್‌ಸಮಂದ್‌ನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ದಿನೇಶ್ ಬಡಾಲಾ, ಗಣೇಶ್ ಪಲಿವಾಲ್ ಮತ್ತು ಮಹೇಂದ್ರ ಕೊಠಾರಿ ಬೆಂಬಲಿಗರು ಹಾಲಿ ಶಾಸಕಿ ದೀಪ್ತಿ ಮಹೇಶ್ವರಿ ಅವರನ್ನು ಕಣಕ್ಕಿಳಿಸಿರುವುದನ್ನು ವಿರೋಧಿಸಿ ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಸಿಟ್ಟಿಗೆದ್ದ ಕಾರ್ಯಕರ್ತರು ಚುನಾವಣಾ ಸಾಮಗ್ರಿಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಟಿಕೆಟ್ ನಿರ್ಧಾರ ವಿರೋಧಿಸಿ ಹಲವು ಮುಖಂಡರು ಮತ್ತು ಬೂತ್ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಉದಯಪುರದಲ್ಲಿ ಉಪಮೇಯರ್ ಪರಸ್ ಸಿಂಘ್ವಿ ತಾರಾ ಚಂದ್ ಜೈನ್ ಅವರಿಗೆ ಟಿಕೆಟ್ ನೀಡಲಾಗಿಲ್ಲ. ಹೀಗಾಗಿ, ಅವರು ಕಾರ್ಯಕರ್ತರ ಮುಂದೆ ಭಾವುಕರಾಗಿ ಮಾತನಾಡಿದ್ದು, “ಪಕ್ಷದ ವರಿಷ್ಠರು ಮರುಪರಿಶೀಲಿಸಬೇಕು” ಎಂದು ಒತ್ತಾಯಿಸಿದರು.

ಜೈಪುರದ ಪಕ್ಷದ ಕಚೇರಿಯಲ್ಲಿ ಪ್ರತಿಭಟನೆಗಳು ನಡೆದಿವೆ. ಅಲ್ಲಿ ಹಾಲಿ ಶಾಸಕ ಅಶೋಕ್ ಲಾಹೋಟಿ ಬದಲಿಗೆ ಭಜನ್ ಲಾಲ್ ಶರ್ಮಾ ಅವರಿಗೆ ಟಿಕೆಟ್ ನೀಡಲಾಗಿದೆ. ಇದನ್ನು ಖಂಡಿಸಿ ಲಾಹೋಟಿ ಬೆಂಬಲಿಗರು ವಿರೋಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...