18 ವರ್ಷಗಳ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

Date:

ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಸೋತ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸ್ಥಾನ ಸಿಕ್ಕಿಲ್ಲ. ಹೀಗಾಗಿ, ತಮ್ಮ 18 ವರ್ಷಗಳ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಮೋದಿ ಸಂಪುಟದಲ್ಲಿ ಸ್ಥಾನ ಸಿಗದಿರುವ ಬಗ್ಗೆ ರಾಜೀವ್ ಚಂದ್ರಶೇಖರ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. “ನನ್ನ ರಾಜಕೀಯ ಜೀವನವು ಕಾರ್ಯಕರ್ತನಾಗಿ ಮುಂದುವರಿಯುತ್ತದೆ” ಎಂದು ಬರೆದುಕೊಂಡಿದ್ದಾರೆ.

“18 ವರ್ಷಗಳ ನಂತರ ಸಂಸದ, ಸಚಿವನಾಗಿ ನನ್ನ ವೃತ್ತಿಜೀವನವು ಕೊನೆಗೊಂಡಿದೆ. ಅನೇಕ ಜನರು ನನ್ನ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಈ ಪೋಸ್ಟ್ ಮೂಲಕ ನಾನು ಸ್ಪಷ್ಟೀಕರಣವನ್ನು ನೀಡುತ್ತಿದ್ದೇನೆ. ಇಂದು ನನ್ನ 18 ವರ್ಷಗಳ ಸಾರ್ವಜನಿಕ ಸೇವೆ ಕೊನೆಗೊಂಡಿದೆ. ನಾನು ಮೋದಿ ಸರ್ಕಾರ 2.0 ನಲ್ಲಿ 3 ವರ್ಷಗಳ ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ನನ್ನ 18 ವರ್ಷಗಳ ಸಾರ್ವಜನಿಕ ಸೇವೆಯನ್ನು ಖಂಡಿತವಾಗಿಯೂ ಕೊನೆಗೊಳಿಸಲು ನಾನು ಬಯಸಲಿಲ್ಲ, ಆದರೆ ಅದು ಸಂಭವಿಸಿದೆ. ಇದಕ್ಕೆ ನಾನು ತುಂಬಾ ವಿಷಾದಿಸುತ್ತೇನೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಮತ್ತು ವಿಶೇಷವಾಗಿ ಕಳೆದ 3 ವರ್ಷಗಳಲ್ಲಿ ನನಗೆ ಸ್ಫೂರ್ತಿ ಮತ್ತು ಶಕ್ತಿ ತುಂಬಿದ ನನ್ನ ಸಹೋದ್ಯೋಗಿಗಳಿಗೆ ನಾನು ತುಂಬಾ ಧನ್ಯವಾದಗಳು” ಎಂದು ರಾಜೀವ್ ಚಂದ್ರಶೇಖರ್ ಬರೆದಿದ್ದಾರೆ.

ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಮಂತ ಉದ್ಯಮಿ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ನ ಶಶಿ ತರೂರ್ ವಿರುದ್ಧ 16,077 ಮತಗಳ ಅಂತರದಿಂದ ಸೋತಿದ್ದರು. ಆ ಮೂಲಕ ಶಶಿ ತರೂರ್ ಸತತ ನಾಲ್ಕನೇ ಗೆಲುವು ದಾಖಲಿಸಿದ್ದರು.

Rajeev and shahsi

ರಾಜೀವ್ ಚಂದ್ರಶೇಖರ್ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ರಾಜೀವ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದು, “ನಿಮ್ಮ ಸರ್ಕಾರದ ಅವಧಿಯಲ್ಲಿ ನಿಮ್ಮೊಂದಿಗೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ವ್ಯಕ್ತಿಯಾಗಿ, ನೀವು ಸಾರ್ವಜನಿಕ ಸೇವೆಯ ಮೂಲಕ ನಮ್ಮ ದೇಶಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದೀರಿ ಎಂಬುದರಲ್ಲಿ ನನಗೆ ಸಂದೇಹವಿಲ್ಲ. ಚಂದ್ರಶೇಖರ್ ಅವರೇ, ಚುನಾಯಿತ ಕಛೇರಿಯು ಒಂದೇ ಒಂದು ಮಾರ್ಗವಾಗಿದೆ ಅಷ್ಟೇ. ನಿಮ್ಮ ಭವಿಷ್ಯಕ್ಕಾಗಿ ನನ್ನ ಶುಭಾಶಯಗಳು” ಎಂದು ಶುಭ ಹಾರೈಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...