ರಾಜ್ಯಸಭಾ ಚುನಾವಣೆ | ನಾವು ಹೋಟೆಲ್‌ಗೆ ಹೋಗಲು ಕಾರಣ ಜೆಡಿಎಸ್‌ ಅಭ್ಯರ್ಥಿ ಹಾಕಿದ್ದು: ಸಿಎಂ ಸಿದ್ದರಾಮಯ್ಯ

Date:

ಜೆಡಿಎಸ್‌ಗೆ ಇರುವುದೇ 19 ಶಾಸಕರು. ಹೀಗಿರುವಾಗ ಅವರು ಅಭ್ಯರ್ಥಿ ಕಣಕ್ಕಿಳಿಸಬಾರದಿತ್ತು. ಆದರೂ, ಉದ್ದೇಶಪೂರ್ವಕವಾಗಿ ಕಣಕ್ಕಿಳಿಸಿದ್ದಾರೆ. ಹೀಗಾಗಿ ನಾವು ಹೋಟೆಲ್‌ಗೆ ಹೋಗಿ ಒಟ್ಟಾಗಿ ಮತದಾನಕ್ಕೆ ಬಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ರಾಜ್ಯಸಭಾ ಚುನಾವಣೆ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, “ರಾಜ್ಯಸಭಾ ಚುನಾವಣೆಯಲ್ಲಿ ಬೇರೆ ಪಕ್ಷದ ಶಾಸಕರೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ನಿರೀಕ್ಷೆ ಇದೆ”‌ ಎಂದರು.

“ಸುಲಭವಾಗಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ನಮ್ಮ ಪಕ್ಷದ 134 ಶಾಸಕರ ಜತೆಗೆ ಪಕ್ಷೇತರರಾದ ಲತಾ ಮಲ್ಲಿಕಾರ್ಜುನ, ಕೆ.ಎಚ್. ಪುಟ್ಟಸ್ವಾಮಿ ಗೌಡ, ಸರ್ವೋದಯ ಕರ್ನಾಟಕದ ದರ್ಶನ್ ಪುಟ್ಟಣ್ಣಯ್ಯ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ ಕೂಡ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಲಿದ್ದಾರೆ. ಮೂರೂ ಮಂದಿಯ ಗೆಲುವಿಗೆ ಬೇಕಾಗುವಷ್ಟು ಮತಗಳು ನಮ್ಮ‌ ಬಳಿ ಇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಆತ್ಮಸಾಕ್ಷಿಯ ಮತಗಳು ಬರಲಿವೆ ಎಂಬ ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಜೆಡಿಎಸ್ ಪಕ್ಷದವರಿಗೆ ಆತ್ಮವೂ ಇಲ್ಲ, ಸಾಕ್ಷಿಯೂ ಇಲ್ಲ. ನಾವು ಯಾವುದೇ ಆಸೆ, ಆಮಿಷ ಒಡ್ಡಿಲ್ಲ. ಆ ರೀತಿ ಮಾಡುವುದು‌ ಜೆಡಿಎಸ್ ಪಕ್ಷದವರು” ಎಂದು ವಾಗ್ದಾಳಿ ನಡೆಸಿದರು.

ಶಾಸಕರಿಗೆ ಆಮಿಷ

ಅಡ್ಡಮತ ವಿಚಾರವಾಗಿ ಕಾನೂನು ತಿದ್ದಿ ಎಫ್.ಐ.ಆರ್. ಹಾಕಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, “ಅವರಿಗೆ ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ , ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ ಎಂದರು. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...