ಭ್ರಷ್ಟಾಚಾರದ ವಿರುದ್ಧ ಆರೋಪ ಮಾಡುತ್ತಿದ್ದ ನಾವೇ ಭ್ರಷ್ಟಾಚಾರ ಮಾಡಲು ಸಾಧ್ಯವೆ: ರಾಮಲಿಂಗಾರೆಡ್ಡಿ ಪ್ರಶ್ನೆ

Date:

ಕಾಂಗ್ರೆಸ್‌ನಲ್ಲಿ ನೇತೃತ್ವದ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಮಲಿಂಗಾರೆಡ್ಡಿ, “ನಾವು ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದೆವು. ಅವರ ವಿರುದ್ಧ ಆರೋಪ ಮಾಡುತ್ತಿದ್ದ ನಾವು ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ಮಾಡಲು ಸಾಧ್ಯವೆ” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರದಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ನಡೆದಿಲ್ಲ. ರಾಜಕೀಯ ಕಾರಣಗಳಿಗೆ ವಿರೋಧ ಪಕ್ಷದವರು ಹೇಳಿಕೆ ಕೊಡುತ್ತಾರೆ ಅಷ್ಟೇ” ಎಂದು ಎಚ್‌ ಡಿ ಕುಮಾರಸ್ವಾಮಿ ಆರೋಪವನ್ನು ತಳ್ಳಿಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸರ್ಕಾರದಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಹುಡುಕಿ ಹುಡುಕಿ ಪೋಸ್ಟಿಂಗ್‌ ಮಾಡುತ್ತಿದ್ದೇವೆ. ಯಾವ ಭ್ರಷ್ಟಾಚಾರನೂ ಇಲ್ಲ” ಎಂದು ಹೇಳಿದರು.

ಎಚ್‌ ಡಿ ಕುಮಾರಸ್ವಾಮಿ ಆರೋಪವೇನು?

ಕಾಂಗ್ರೆಸ್‌ ವಿರುದ್ಧ ಟ್ವೀಟ್‌ ಮಾಡಿರುವ ಎಚ್‌ ಡಿ ಕುಮಾರಸ್ವಾಮಿ, “ಪಂಚಗ್ಯಾರಂಟಿಗಳ ಕಾಂಗ್ರೆಸ್‌ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ” ಎಂದು ಆರೋಪಿಸಿದ್ದರು.

ಈ ಸುದ್ದಿ ಓದಿದ್ದೀರಾ? ವರ್ಗಾವರ್ಗಿ ದಂಧೆಗೆ ಮುಖ್ಯಮಂತ್ರಿ ಕಚೇರಿಯಲ್ಲೇ ʼಹುಂಡಿʼ ಇದೆ; ಎಚ್‌ ಡಿ ಕುಮಾರಸ್ವಾಮಿ ಆರೋಪ

“ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? ಸಿಎಂಒ ಎಂದರೆ ಸಿಎಂ ಆಫ್‌ ಕರ್ನಾಟಕವೋ ಅಥವಾ ಕರಪ್ಷನ್‌ ಆಫ್‌ ಕರ್ನಾಟಕವೋ” ಎಂದು ಪ್ರಶ್ನಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...