2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

Date:

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಹೆಸರು ತೆಗೆಯುವವರು ಸರ್ವನಾಶ ಆಗುತ್ತಾರೆ. 2028ರ ಒಳಗಾಗಿ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ. ಅದನ್ನು ತಡೆಯಲು ಯಾರಿದಂಲೂ ಸಾಧ್ಯವಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಗಣಿಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, “ಯಾವುದೇ ಕಾರಣಕ್ಕೂ ರಾಮನಗರದಿಂದ ರಾಮನ ಹೆಸರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಹಿಂದೆ, ರಾಮನಗರ ಜಿಲ್ಲೆಯನ್ನು ರಚನೆ ಮಾಡಿ, ಹೆಸರಿಟ್ಟಾಗ ಯಾರೂ ತಕರಾರು ಮಾಡಲಿಲ್ಲ. ಈಗ, ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಿಸುವ ರಾಜಕಾರಣ ಮಾಡುತ್ತಿದ್ದಾರೆ” ಎಂದು ಹೆಸರು ಹೇಳದೆಯೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

“ರಾಜ್ಯದಲ್ಲಿರುವ ಸರ್ಕಾರ ಮೊದಲು ಕಾನೂನು-ಸುವ್ಯವಸ್ಥೆಯಲ್ಲಿ ಸರಿ ಮಾಡಬೇಕು. ರಾಮನಗರ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಮೊದಲು ನೋಡಬೇಕು. ಹೆಸರು ಬದಲಾವಣೆಯಿಂದ ಭೂಮಿಗೆ ಬೆಲೆ ಬರುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...