ರಾಮನಗರ | ಮೈತ್ರಿ ಸರ್ಕಾರ ಪತನಕ್ಕೆ ಡಿಕೆ ಶಿವಕುಮಾರ್​​​ ಕಾರಣ: ಎಚ್‌ಡಿಕೆ ಆರೋಪ

Date:

ಮೈತ್ರಿ ಸರ್ಕಾರ ಪತನವಾಗಿದ್ದೇ ಡಿ.ಕೆ ಶಿವಕುಮಾರ್ ಅವರಿಂದ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಮನಗರದಲ್ಲಿ ನಡೆದ ಜೆಡಿಎಸ್‌ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು,. “ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗುತ್ತದೆ. 2024ರಲ್ಲಿ ಮತ್ತೆ ವಿಧಾನಸಭಾ ಚುನಾವಣೆ ನಡೆಯುತ್ತದೆ” ಎಂದು ರಾಜ್ಯದ ಜನರಲ್ಲಿ ಗೊಂದಲ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.

“ಡಿ.ಕೆ ಶಿವಕುಮಾರ್‌ ತಿಹಾರ್ ಜೈಲಿಗೆ ಹೋಗುವುದು ಗ್ಯಾರಂಟಿ. ಅವರು ಶಾಶ್ವತವಾಗಿ ತಿಹಾರ್ ಜೈಲಿಗೆ ಹೋದರೂ ಅಚ್ಚರಿ ಇಲ್ಲ. 2024ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಆ ವ್ಯಕ್ತಿ (ಡಿ.ಕೆ ಶಿವಕುಮಾರ್) ಅಭ್ಯರ್ಥಿ ಆಗುವುದೇ ಅನುಮಾನ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಕೈಹಿಡಿದು ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು. ಅವರ ಮಾತುಗಳನ್ನು ನಂಬಿ ನಾನು ಮೋಸ ಹೋದೆ. 2019ರಲ್ಲಿ ಸರ್ಕಾರ ಹೋಗಿದ್ದು ಡಿ.ಕೆ.ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ” ಎಂದು ಆರೋಪಿಸಿದ್ದಾರೆ.

“ಮಂಡ್ಯ ಚುನಾವಣೆಯಲ್ಲಿ ನಿಖಿಲ್‌ಗೆ ಮೋಸ ಮಾಡಿದ ಹಾಗೆ, ಇಲ್ಲಿಯೂ (ರಾಮನಗರ) ನಾವು ಮಾಡಿದ್ದರೆ ಆ ವ್ಯಕ್ತಿ (ಡಿ.ಕೆ.ಸುರೇಶ್) ಕಥೆ ಅಂದೇ ಮುಗಿದು ಹೋಗುತ್ತಿತ್ತು. ಆದರೆ, ನಾವು ಮೈತ್ರಿ ಧರ್ಮ ಪಾಲಿಸಿದೆವು. ಅವರು ನಮಗೆ ಕೇಡು ಬಗೆದರು” ಎಂದು ಡಿಕೆ ಸಹೋದರರ ವಿರುದ್ಧ ಕಡಿಕಾರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...