ಬೆಳಗಾವಿ | ಕಾಂಗ್ರೆಸ್‌ ಕಚೇರಿಗೆ ನುಗ್ಗಿ ದಾಂಧಲೆ; 27 ಮಂದಿ ಬಿಜೆಪಿಗರ ವಿರುದ್ಧ ಎಫ್‌ಐಆರ್

Date:

ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದ ಘಟನೆ ಸಂಬಂಧ 27 ಮಂದಿ ಬಿಜೆಪಿಗರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬೆಳಗಾವಿಯ ಮಾರ್ಕೆಟ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 149,  341, 283 ಹಾಗೂ 448ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾಲು ಉತ್ಪಾದಕರ ಪ್ರೋತ್ಸಾಹ ಧನ ನೀಡಿಲ್ಲ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೂ ಕತ್ತರಿ ಹಾಕಲಾಗಿದೆ. ಶ್ರೀಘ್ರವೇ ಪೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಬುಧವಾರ ಬಿಜೆಪಿ ಪ್ರತಿಭಟನೆ ನಡೆಸಿದೆ. ಬೆಳಗಾವಿಯಲ್ಲಿ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ದಾಂಧಲೆ ನಡೆಸಿದ್ದರು. ಹಲವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಇದೀಗ ಎಫ್‌ಐಆರ್ ದಾಖಲಿಸಿದ್ದಾರೆ.

ಕಾಂಗ್ರೆಸ್ ಭವನಕ್ಕೆ ಅತಿಕ್ರಮಣ ಪ್ರವೇಶ, ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಆರೋಪದ ಮೇಲೆ ಬೆಳಗಾವಿ ನಗರ ಬಿಜೆಪಿ ಅಧ್ಯಕ್ಷೆ ಗೀತಾ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ 27 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...