ರನ್ನ ಸಕ್ಕರೆ ಕಾರ್ಖಾನೆ ಪುನರಾರಂಭ, ಲೀಸ್ ಜೊತೆ 40 ಕೋಟಿ ಸಾಲಕ್ಕೆ ಸರ್ಕಾರದ ಶ್ಯೂರಿಟಿ: ಆರ್ ಬಿ ತಿಮ್ಮಾಪೂರ

Date:

  • ‘ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ನೀಡಿದೆ’
  • ‘ರೈತರ ಬಗ್ಗೆ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಇದು’

ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ರನ್ನ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭ ಮಾಡುತ್ತಿದ್ದೇವೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ.

“ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನಲ್ಲಿರುವ ರನ್ನ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ನೀಡಿ 2023-24ನೇ ಸಾಲಿನಲ್ಲಿ ಕಬ್ಬು ಅರೆಯಲು ಅನುಮತಿ ನೀಡಲಾಗಿದೆ” ಎಂದಿದ್ದಾರೆ.

“ಅಪೆಕ್ಸ್ ಅಥವಾ ಬಿಡಿಸಿಸಿ ಬ್ಯಾಂಕ್‌ನಿಂದ 40 ಕೋಟಿ ರೂ. ಸಾಲ ಪಡೆಯಲು ಸರ್ಕಾರದ ಖಾತರಿ ನೀಡಲು ಸರ್ಕಾರ ಒಪ್ಪಿದೆ. ಜೊತೆಗೆ ಗುತ್ತಿಗೆ ನೀಡಲು ಸಿದ್ದಪಡಿಸಿರುವ ಟೆಂಡರ್ ಡ್ಯಾಕುಮೆಂಟ್‌ಗೂ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೆಟಿಪಿಪಿ ಆ್ಯಕ್ಟ್ 1999 ನಿಯಮ 2000 ಪ್ರಕಾರ ಟೆಂಡರ್ ಕರೆಯಲು ಅನುಮತಿ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 100 ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ 100 ಎಂಜನಿಯರಿಂಗ್‌ ಕಾಲೇಜು ದತ್ತು: ಪ್ರಿಯಾಂಕ್‌ ಖರ್ಗೆ

“ರೈತರ ಹಿತ ಕಾಯುವಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ. ಕೊಟ್ಟ ಮಾತಿನಂತೆ ನಿರಂತರವಾಗಿ ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಶ್ರಮಿಸಿದ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಸಭೆಯಲ್ಲಿ ಅನುಮತಿ ಸಿಗುವ ಮೂಲಕ ಫಲ ಸಿಕ್ಕಿದೆ. ಲೀಸ್ ಜೊತೆಗೆ ರೂ 40 ಕೋಟಿ ಸಾಲಕ್ಕೆ ಶ್ಯೂರಿಟಿ ನೀಡಿರುವುದು ರೈತರ ಬಗ್ಗೆ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ತೋರಿಸುತ್ತದೆ. ಶೀಘ್ರದಲ್ಲೇ ಟೆಂಡರ್ ಕರೆದು ಉತ್ತಮ ಬಿಡ್ ದಾರರಿಗೆ ಗುತ್ತಿಗೆ ನೀಡುವ ಮೂಲಕ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...