ರನ್ಯಾ ರಾವ್ ಕೇಸ್‌ | ಇ.ಡಿ ಅಧಿಕಾರಿಗಳಿಂದ ಹಲವೆಡೆ ದಾಳಿ

Date:

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟಿ ರನ್ಯಾ ರಾವ್ ಅವರ ಐಷಾರಾಮಿ ಫ್ಲಾಟ್ ಹಾಗೂ ಅವರ ಆಪ್ತರ ಮನೆ, ಕಚೇರಿಗಳು ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

ಈಗಾಗಲೇ ಪ್ರಕರಣದ ಅಂತಾರಾಷ್ಟ್ರೀಯ ಜಾಲದ ಬಗ್ಗೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಮಧ್ಯೆಯೇ ಇ.ಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಈ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ರನ್ಯಾ ರಾವ್ ವಾಸಿಸುತ್ತಿದ್ದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ಅಪಾರ್ಟ್‌ಮೆಂಟ್, ಕೋರಮಂಗಲ, ಜಯನಗರ, ಬಸವನಗುಡಿ ಮುಂತಾದ ಪ್ರದೇಶಗಳಲ್ಲಿನ ಅವರ ಆಪ್ತರ ನಿವಾಸ ಹಾಗೂ ಕಚೇರಿಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರನ್ಯಾ ರಾವ್ ಅವರಿಗೆ ವಿಮಾನದ ಟಿಕೆಟ್ ಬುಕ್ ಮಾಡಿದವರು ಮತ್ತು ಪ್ರವಾಸಕ್ಕೆ ನೆರವು ನೀಡಿದವರು ಹಾಗೂ ವ್ಯವಹಾರದಲ್ಲಿ ಪಾಲುದಾರರಾಗಿರುವವರನ್ನು ಇ.ಡಿ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ನಟಿ ರನ್ಯಾ ರಾವ್ ಮನೆ, ಉದ್ಯಮಿ ತರುಣ್ ರಾಜ್, ಆರ್.ಟಿ.ನಗರದಲ್ಲಿ ಜ್ಯೋತಿಷ್ಯ ಕೇಂದ್ರ ನಡೆಸುತ್ತಿರುವ ಸ್ವಾಮೀಜಿ ಮತ್ತು ಕೆಲ ಪೊಲೀಸ್ ಅಧಿಕಾರಿಗಳ ಮನೆಗಳಲ್ಲಿ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ.

ಈಗಾಗಲೇ ರನ್ಯಾ ರಾವ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸಿರುವ ಡಿಆರ್‌ಐ ಕೆಲವು ಮಾಹಿತಿಯನ್ನು ಕಲೆ ಹಾಕಿತ್ತು. ನಂತರ ಸಿಬಿಐ ಕೂಡ ಪ್ರತ್ಯೇಕವಾಗಿ ತನಿಖೆ ಕೈಗೊಂಡಿದೆ. ಈಗ ಇ.ಡಿ ಪ್ರವೇಶದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದಾಳಿ ಸಂದರ್ಭದಲ್ಲಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...