ಅತ್ಯಾಚಾರ ಪ್ರಕರಣ | ಪತ್ರಿಕಾಗೋಷ್ಠಿ ನಡೆಯುತ್ತಿದ್ದಾಗಲೇ ಕಾಂಗ್ರೆಸ್​ ಸಂಸದನ ಬಂಧನ

Date:

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್‌ ಸಂಸದ ರಾಕೇಶ್‌ ರಾಥೋಡ್‌ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಸಂಸದ ರಾಕೇಶ್‌ ರಾಥೋಡ್‌ ಲೋಹರ್‌ಬಾಗ್‌ನಲ್ಲಿರುವ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಈ ವೇಳೆ, ಮಧ್ಯಪ್ರವೇಶಿಸಿದ ಕೊತ್ವಾಲಿ ಪೊಲೀಸರು, ಅವರನ್ನು ಬಂಧಿಸಿದ್ದಾರೆ. ಬಳಿಕ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ.

ಸಂಸದ ರಾಕೇಶ್‌ ರಾಥೋಡ್‌ ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ, ನಾಲ್ಕು ವರ್ಷಗಳಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಜನವರಿ 17ರಂದು ಕೊತ್ವಾಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾದ ಬಳಿಕ ನಿರೀಕ್ಷಣಾ ಜಾಮೀನು ಪಡೆಯಲು ರಾಥೋಡ್ ಯತ್ನಿಸಿದ್ದರು. ಆದರೆ, ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದ್ದ ಬಗ್ಗೆ ರಾಥೋಡ್ ಪ್ರತಿಕಾಗೋಷ್ಠಿ ನಡೆಸುತ್ತಿದ್ದರು.ಈ ವೇಳೆ, ಅವರ ಮನೆಗೆ ಧಾವಿಸಿದ ಪೊಲೀಸರು, ಅವರನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...