ಕೆಇಎ ಪರೀಕ್ಷೆ ಅಕ್ರಮದ ಕಿಂಗ್ ಪಿನ್​ ಆರ್ ​ಡಿ ಪಾಟೀಲ್ ಎಂಟು ದಿನ ಸಿಐಡಿ ಕಸ್ಟಡಿಗೆ

Date:

  • ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿ ಆದೇಶ 
  • ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಸಿಐಡಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಬಂಧನವಾಗಿರುವ ಪ್ರಕರಣದ ಕಿಂಗ್ ಪಿನ್​ ಆರ್ ​ಡಿ ಪಾಟೀಲ್​ನನ್ನು ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿ ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರ್‌ ಡಿ ಪಾಟೀಲನ ನ್ಯಾಯಾಂಗ ಬಂಧನ ಅವಧಿ ಬುಧವಾರ ಮುಗಿದಿದ್ದು, ತಮ್ಮ ವಶಕ್ಕೆ ನೀಡುವಂತೆ ಸಿಐಡಿ, ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆರೋಪಿ ಆರ್​ಡಿ ಪಾಟೀಲ್​ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾಗಿರುವ ಪರೀಕ್ಷೆ ಅಕ್ರಮದ ಕೇಸ್​ಗಳನ್ನು ಪೊಲೀಸ್ ತನಿಖಾಧಿಕಾರಿಗಳು ಈಗಾಗಲೇ ಪ್ರಕರಣ ಫೈಲ್‌ ಗಳನ್ನು ಸಿಐಡಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ‌. ಕೆಇಎ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣ ಪೊಲೀಸರಿಂದ ಹಸ್ತಾಂತರ ಆಗುತ್ತಿದ್ದಂತೆಯೇ ಸಿಐಡಿ ಬೇಟೆ ಶುರು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?

ಸಿಐಡಿ ಡಿವೈಎಸ್‌ಪಿ ತನ್ವೀರ್ ಮತ್ತು ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ವಶಕ್ಕೆ ಪಡೆದಿದೆ. ಪ್ರಮುಖ ಆರೋಪಿ ಆರ್‌ ಡಿ ಪಾಟೀಲ್​ ಸೂಚನೆಯಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿರುವ ಆರೋಪದಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿ ಮೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣ ಸೇರಿ ಒಟ್ಟು ಎಂಟು ಪ್ರಕರಣಗಳ ದಾಖಲೆಗಳು ಸಿಐಡಿ ಕೈಗೆ ತಲುಪಿದ್ದು, ಸಿಐಡಿ ತನಿಖಾಧಿಕಾರಿಗಳು ಕೇಸ್ ಸ್ಟಡಿ ಶುರು ಮಾಡಿದ್ದಾರೆ. ಖುದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ತನಿಖಾಧಿಕಾರಿ ಡಿವೈಎಸ್ ಪಿ ತನ್ವೀರ್ ಒಳಗೊಂಡ ಸಿಐಡಿ ತನಿಖಾ ತಂಡ ಪರೀಕ್ಷೆ ಅಕ್ರಮದ ಜಾಡು ಹಿಡಿದು ಭೇದಿಸಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...