ಕೃಷಿ ಕಾನೂನುಗಳ ಮರು ಜಾರಿ ಹೇಳಿಕೆ; ಬಿಜೆಪಿ ಸಂಸದೆ ಕಂಗನಾ ಉಚ್ಛಾಟನೆಗೆ ಕಾಂಗ್ರೆಸ್‌ ಆಗ್ರಹ

Date:

2021ರಲ್ಲಿ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಮರಳಿ ಜಾರಿಗೊಳಿಸಬೇಕೆಂದು ಹೇಳಿರುವ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಣಾವತ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ರದ್ದಾದ ಕೃಷಿ ಕಾನೂನುಗಳನ್ನು ಮರಳಿ ತರುವ ಯಾವುದೇ ಪ್ರಯತ್ನಗಳಿಗೆ ಕಾಂಗ್ರೆಸ್‌ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ನಾಚನ್ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ ಸ್ಥಳೀಯ ಜಾತ್ರೆಯಲ್ಲಿ ಕಂಗನಾ ಭಾವಹಿಸಿ ಮಾತನಾಡಿದ್ದಾರೆ. “ಕಂಗನಾ ಹೇಳಿಕೆ ವಿವಾದಕ್ಕೆ ಸಿಲುಕಬಹುದು ಎಂದು ನನಗೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ಮರಳಿ ತರಬೇಕು. ಆ ಕಾನೂನುಗಳು ರೈತರ ಕಲ್ಯಾಣ-ಆಧಾರಿತ ಕಾನೂನುಗಳೆಂದು ನಾನು ನಂಬುತ್ತೇನೆ. ರೈತರು ಈ ಕಾನೂನುಗಳ ಜಾರಿಗೆ ಒತ್ತಾಯಿಸಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂಗನಾ ಹೇಳಿಕೆ ಖಂಡಿಸಿ ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ. “ಕಂಗನಾ ಅವರು ಕೃಷಿ ಕಾನೂನುಗಳನ್ನು ಮರಳಿ ತರಬೇಕೆಂದು ಪ್ರತಿಪಾದಿಸಿದ್ದಾರೆ. ಒಂದು ವರ್ಷದ ಸುದೀರ್ಘ ರೈತ ಹೋರಾಟದ ವೇಳೆ, 750ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದರೂ ಬಿಜೆಪಿ ರೈತ ವಿರೋಧಿ ನಿಲುವು ಅನುಸರಿಸುತ್ತಿದೆ. 750 ರೈತರು ಹುತಾತ್ಮರಾದ ನಂತರವೂ ಬಿಜೆಪಿ ಮತ್ತು ಮೋದಿ ಸರ್ಕಾರ ಪಾಠ ಕಲಿತಿಲ್ಲ. ಅವರು ರೈತ ವಿರೋಧಿ ಕರಾಳ ಕಾನೂನುಗಳ ಮರು-ಅನುಷ್ಠಾನಕ್ಕೆ ಯತ್ನಿಸುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ಸೇರಿದಂತೆ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಕ್ತಾರ ಶಕ್ತಿಸಿನ್ಹ್ ಗೋಹಿಲ್ ಅವರು ಕಂಗನಾ ಹೇಳಿಕೆಯನ್ನು ಖಂಡಿಸದ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. “ಪ್ರಧಾನಿ ಮೋದಿಯವರು ಆಕೆಯ ಹೇಳಿಕೆಯನ್ನು ಯಾಕೆ ಖಂಡಿಸಿಲ್ಲ? ಆಕೆಯ ಹೇಳಿಕೆಯನ್ನು ಬಿಜೆಪಿ ಒಪ್ಪದಿದ್ದರೆ, ಆಕೆಯನ್ನು ಪಕ್ಷದಿಂದ ಯಾಕೆ ಉಚ್ಚಾಟಿಸಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ಕಂಗನಾ ಹೇಳಿಕೆ ವಿಚಾರದಲ್ಲಿ ಬಿಜೆಪಿಯ ಮೌನವು, ತನ್ನ ಪಕ್ಷದ ಕಾಲಾಳುಗಳ ಮೂಲಕ ಕೃಷಿ ಕಾನೂನುಗಳನ್ನು ಮರು ಪರಿಚಯಿಸುವ ಉದ್ದೇಶವನ್ನು ಸೂಚಿಸುತ್ತದೆ. ಕಂಗನಾ ನಿಲುವನ್ನು ಬಿಜೆಪಿ ಖಂಡಿಸುವುದಾದರೆ, ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಗೋಹಿಲ್ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...