ಕೆಂಪಣ್ಣ ಕಮಿಷನ್‌ ಆರೋಪ | ‘ಪೇ ಸಿದ್ದರಾಮಯ್ಯ’, ‘ಎಟಿಎಂ ಸಿದ್ದರಾಮಯ್ಯ’, ಯಾವ ಪೋಸ್ಟರ್‌ ಅಂಟಿಸಿಕೊಳ್ಳುತ್ತೀರಾ?: ಆರ್‌ ಅಶೋಕ್‌ ಕಿಡಿ

Date:

“ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಸರ್ಕಾರದ ಮೇಲೆ 40% ಕಮಿಷನ್‌ನ ಗುರುತರ ಆರೋಪ ಮಾಡಿದ್ದಾರೆ. ಕಮಿಷನ್‌ ಕೊಡುವವರಿಗೆ ಬಿಲ್‌ ಪಾವತಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ಬಂದ ಆರಂಭದಿಂದಲೇ ಕಮಿಷನ್‌ ದಂಧೆ ಹಾಗೂ ಲೂಟಿ ನಡೆಯುತ್ತಿದೆ ಎಂದು ನಾವು ಕೂಡ ತಿಳಿಸಿದ್ದೆವು. ಲಂಚ ಕೊಡುತ್ತಿರುವವರ ಸಂಘದವರೇ ಹೇಳಿರುವುದರಿಂದ ಇದು ಲೂಟಿಕೋರ ಸರ್ಕಾರ, 75 ಪರ್ಸೆಂಟ್‌ ಸರ್ಕಾರ ಎಂಬುದು ಕಂಡುಬಂದಿದೆ” ಎಂದು ಆರೋಪಿಸಿದರು.

“ತೆರಿಗೆ ಅಧಿಕಾರಿಗಳು ದಾಳಿ ಮಾಡಿದಾಗಲೂ ಕಾಂಗ್ರೆಸ್ ಬೆಂಬಲಿಗರ ಮನೆಗಳಲ್ಲಿ ಎರಡು ಕಡೆ ಐವತ್ತು- ಐವತ್ತು ಕೋಟಿ ಹಣ ಸಿಕ್ಕಿದೆ. ಇದು ಲೂಟಿ ಹೊಡೆದ ಹಣ ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷ್ಯ ಬೇಕು ಎಂದು ಪ್ರಶ್ನಿಸಿದರು. ಈ ಹಿಂದೆ ಐದು ರಾಜ್ಯಗಳ ಚುನಾವಣೆಗಾಗಿ ಲೂಟಿ ನಡೆಯಿತು. ಈಗ ಮುಂದೆ ಬರುವ ಲೋಕಸಭಾ ಚುನಾವಣೆಗೆ ಎತ್ತುವಳಿ ನಡೆಯುತ್ತಿದೆ. ಎಲ್ಲವನ್ನೂ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಮುಂದೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾರ ಮುಖದ ಮೇಲೆ ಅಂಟಿಸಿಕೊಳ್ಳುತ್ತಾರೆ

“ಇದೇ ಕೆಂಪಣ್ಣ ನಮ್ಮ ಸರಕಾರದ ಅವಧಿಯಲ್ಲಿ ಆರೋಪ ಮಾಡಿದಾಗ ಸಿಎಂ ಸಿದ್ದರಾಮಯ್ಯನವರು ಪೇಸಿಎಂ ಎಂಬ ಪೋಸ್ಟರ್‌ ಅಂಟಿಸಿದ್ದರು. ಈಗ ಯಾರ ಮುಖದ ಮೇಲೆ ಯಾವ ಪೋಸ್ಟರ್‌ ಅಂಟಿಸಿಕೊಳ್ಳುತ್ತಾರೆ? ಪೇ ಸಿದ್ದರಾಮಯ್ಯ, ಎಟಿಎಂ ಸಿದ್ದರಾಮಯ್ಯ ಎಂದು ಅಂಟಿಸಿಕೊಳ್ಳುತ್ತಾರಾ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

“ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ ಎನ್ನುವ ಸ್ಥಿತಿ ಸಿಎಂ ಸಿದ್ದರಾಮಯ್ಯನವರದ್ದು. ಅಂದು ರೋಷಾವೇಶದಿಂದ ಮಾತನಾಡುತ್ತಿದ್ದ ಅವರು ಈಗ ಎರಡು ನಾಲಿಗೆಯನ್ನು ತೋರಿಸಿದ್ದಾರೆ. ಲೋಕಸಭಾ ಚುನಾವಣೆಗಾಗಿ ಲೂಟಿ ಮಾಡುತ್ತಿದ್ದು, ಎಂಟೇ ತಿಂಗಳಲ್ಲಿ ಸರ್ಕಾರಕ್ಕೆ ಭ್ರಷ್ಟಾಚಾರದ ಆರೋಪ ಬಂದಿದೆ. ಇನ್ನು ಸಿದ್ದರಾಮಯ್ಯನವರು ಒಂದು ನಿಮಿಷವೂ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರದೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

“ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸಿದರೆ ಕೂಡಲೇ ನಮ್ಮ ಬಳಿ ಇರುವ ದಾಖಲೆಗಳನ್ನು ನೀಡುತ್ತೇವೆ. ಇವರು ಪ್ರಾಮಾಣಿಕರೇ ಆಗಿದ್ದರೆ, ನಯಾ ಪೈಸೆಯೂ ಭ್ರಷ್ಟಾಚಾರ ಆಗಿಲ್ಲ ಎನ್ನುವವರಾದರೆ ಸಿಬಿಐ ತನಿಖೆಗೆ ನೀಡಲಿ. ಕೆಂಪಣ್ಣ ಅವರು ಆರೋಪ ಮಾಡಿದ ಎಲ್ಲವನ್ನೂ ತನಿಖೆಗೆ ನೀಡಲಿ” ಎಂದು ಸವಾಲು ಹಾಕಿದರು.

ಹಕ್ಕುಚ್ಯುತಿ ಮಂಡಿಸಲಿ

“ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶ್ವೇತಪತ್ರವನ್ನು ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಅದರಲ್ಲಿ ತಪ್ಪಿದ್ದರೆ, ಏನಾದರೂ ಅನುಮಾನಗಳಿದ್ದಲ್ಲಿ ಹಕ್ಕುಚ್ಯುತಿ ಮಂಡಿಸಲು ಅವಕಾಶವಿದೆ. ಧಮ್‌ ಇದ್ದರೆ ಕಾಂಗ್ರೆಸ್‌ ನಾಯಕರು ಹಕ್ಕುಚ್ಯುತಿ ಮಂಡಿಸಲಿ” ಎಂದು ಒತ್ತಾಯಿಸಿದರು.

“ಎಸ್‌ಡಿಪಿಐ ಅಧ್ಯಕ್ಷರ ಹೇಳಿಕೆ ದೇಶದ್ರೋಹದ ಹೇಳಿಕೆ. ಪಿಎಫ್‌ಐ, ಕೆಎಫ್‌ಡಿ ಸಂಘಟನೆಗಳ ಅಂಗಸಂಸ್ಥೆಯೇ ಎಸ್‌ಡಿಪಿಐ. ಅಲ್ಲಿ ಇದ್ದವರೇ ಇಲ್ಲಿ ಬಂದು ಸೇರಿಕೊಂಡಿದ್ದಾರೆ. ಕೋರ್ಟ್‌ ಆದೇಶದ ಪ್ರಕಾರ ಜ್ಞಾನವಾಪಿಯಲ್ಲಿ ಶಿವನ ಪೂಜೆಗೆ ಅವಕಾಶ ಸಿಕ್ಕಿದೆ. ಜ್ಞಾನವಾಪಿ ಹಿಂದೂ ಮಂದಿರ ಎನ್ನುವುದು ಜಗತ್ತಿಗೇ ಗೊತ್ತಿದೆ. ಇದು ತಪ್ಪು ಎಂದಾದರೆ ಸುಪ್ರೀಂ ಕೋರ್ಟ್‌ಗೆ ಹೋಗಲಿ. ಪುರಾತತ್ವ ಇಲಾಖೆಯವರು ಎಲ್ಲವನ್ನೂ ಸಮೀಕ್ಷೆ ಮಾಡಲಿ. ಮಂದಿರಗಳನ್ನು ಮರಳಿ ಹಿಂದೂಗಳಿಗೆ ನೀಡಬೇಕೆನ್ನುವುದು ಬಿಜೆಪಿ ನಿಲುವು. ಅದನ್ನು ಕಾನೂನು ಪ್ರಕಾರವೇ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...