ನಿಗಮ, ಮಂಡಳಿ ಹುದ್ದೆಗಳು ಹರಾಜು | ಕಾಂಗ್ರೆಸ್ ವಿರುದ್ಧ ದರಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Date:

ನಿಗಮ ಮಂಡಳಿ ಹುದ್ದೆಗಳ ಹರಾಜಿಗೆ ಕಾಂಗ್ರೆಸ್‌ ಮುಂದಾಗಿದ್ದು, ಒಂದೊಂದು ಹುದ್ದೆಗೂ ದರ ನಿಗದಿ ಮಾಡಿದೆ ಎಂದು ಬಿಜೆಪಿ ಆರೋಪಿಸಿ, ರೇಟ್‌ ಕಾರ್ಡ್‌ ಬಿಡುಗಡೆ ಮಾಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಈಗಾಗಲೇ ವರ್ಗಾವಣೆಯನ್ನು ಫೋನ್‌ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ ಸಿದ್ದರಾಮಯ್ಯ ಅವರ ಸರ್ಕಾರ ನಿಗಮ ಮಂಡಳಿ ಹರಾಜಿಗೆ ಇಷ್ಟು ದಿನ ಕಾಯುತ್ತಿತ್ತು” ಎಂದು ಬಿಜೆಪಿ ಟೀಕಿಸಿದೆ.

“ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ ನಿಗಮ ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ ಸುರ್ಜೇವಾಲ ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ. ಪರಿಣಾಮವಾಗಿ ನಿಗಮ ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್‌ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ” ಎಂದು ವಾಗ್ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಬಂದಿದೆ, ಕ್ರೈಂ ರೇಟ್‌ ಹೆಚ್ಚಿದೆ

“ಸರ್ಕಾರವೇ ಕಲೆಕ್ಷನ್‌ ದಂಧೆ ಮಾಡಿಕೊಳ್ಳುತ್ತಾ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿರುವಾಗ ವೃತ್ತಿಪರ ಖದೀಮರು ಸುಮ್ಮನಿರುತ್ತಾರಾ? ಕೊಲೆ, ದರೋಡೆ, ಸುಲಿಗೆ, ಕಳ್ಳತನ ಸೇರಿದಂತೆ ಎಲ್ಲಾ ರೀತಿಯ ಅಪರಾಧ ಪ್ರಕರಣಗಳೂ
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹೆಚ್ಚಾಗಿದೆ” ಎಂದು ಆರೋಪಿಸಿದೆ.

“ನಾಲ್ಕೇ ತಿಂಗಳಲ್ಲಿ 43,412 ಪ್ರಕರಣ ದಾಖಲಾಗುವ ಮೂಲಕ ಕರ್ನಾಟಕ ಕ್ರಿಮಿನಲ್‌ಗಳ ಬೀಡಾಗಿದೆ” ಎಂದು ಮಾಧ್ಯಮ ವರದಿಯನ್ನು ಹಂಚಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...