ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

Date:

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, “ನಾನು ಗೃಹ ಸಚಿವನಾಗಿದ್ದಾಗ ಬಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ” ಎಂದು ನೀಡಿರುವ ಹೇಳಿಕೆಯ ಬಗ್ಗೆ ಮತ್ತಷ್ಟು ಆಕ್ರೋಶ ಹೊರಹಾಕಿರುವ ಬಜರಂಗದಳದ ಮುಖಂಡರು, ವಿಪಕ್ಷ ನಾಯಕ ಸ್ಥಾನದಿಂದ ಆರ್.ಅಶೋಕ್ ಅವರನ್ನು ಕೆಳಗಿಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಮಾಡಿದೆ.

“ಅಶೋಕ್ ಅವರು ವಿಧಾನಸಭೆ ಅಧಿವೇಶನದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎನ್ನುವ ಮೂಲಕ ಸಂಘಟನೆಯ ಕಾರ್ಯಕರ್ತರಿಗೆ ನೋವುಂಟು ಮಾಡಿದ್ದಾರೆ. ಅವರನ್ನು ತತ್ ಕ್ಷಣ ವಿಪಕ್ಷ ನಾಯಕನ ಸ್ಥಾನದಿಂದ ಕೆಳಗಿಳಿಸಬೇಕು. ಅವರು ಕೂಡಲೇ ರಾಜ್ಯದ ಹಿಂದೂ ಕಾರ್ಯಕರ್ತರ ಕ್ಷಮೆ ಕೇಳಬೇಕು” ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

pupmpwl

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮನಗರದ ವಕೀಲರು ಪೊಲೀಸರ ಜಟಾಪಟಿ ಬಗ್ಗೆ ಸದನದಲ್ಲಿ ಕಾವೇರಿದ ಚರ್ಚೆಯ ನಡುವೆ ಆರ್. ಅಶೋಕ್ ಅವರು ನೀಡಿದ್ದ ಹೇಳಿಕೆ ವಿರುದ್ಧ ಬಜರಂಗದಳ ಆಕ್ರೋಶ ಹೊರ ಹಾಕುತ್ತಿದೆ.

“ನಾನು ಗೃಹ ಸಚಿವನಾಗಿದ್ದ ವೇಳೆ ನನ್ನ ಮೇಲೂ ಒತ್ತಡವಿತ್ತು, ನಾನು ಹಿಂದೆ ಮುಂದೆ ನೋಡಲಿಲ್ಲ. ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಆ ತರ ನೀವು ನಿಲುವು ತೆಗೆದುಕೊಳ್ಳಬೇಕು” ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ಅವರಿಗೆ, ವಿಪಕ್ಷ ನಾಯಕ ಆರ್. ಅಶೋಕ್ ಮಾರ್ಗದರ್ಶನ ನೀಡಿದ್ದರು. ಆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಬಗ್ಗೆ ಫೇಸ್‌ಬುಕ್ ಪೋಸ್ಟ್ ಹಾಕಿದ್ದ ಬಜರಂಗದಳದ ಮಂಗಳೂರಿನ ಮುಖಂಡ ಪುನೀತ್ ಅತ್ತಾವರ, “ನೀವು ಆರ್ ಅಶೋಕ್ ಅಲ್ಲ. ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ. ಅಂದರೆ ಅಡ್ಜಸ್ಟ್ ಮೆಂಟ್ ಅಶೋಕ್” ಎಂದು ತಿಳಿಸಿದ್ದರು.

ವಿಡಿಯೋ ತುಣುಕನ್ನು ಹಂಚಿಕೊಂಡಿದ್ದ ಪುನೀತ್ ಅತ್ತಾವರ, “ಅಶೋಕ್ ಅವರೇ, ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜಸ್ಟ್‌ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ” ಎಂದು ಆಕ್ರೋಶ ಹೊರಹಾಕಿದ್ದರಲ್ಲದೇ, “ನೀವು, ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ. ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ” ಎಂಬ ಎಚ್ಚರಿಕೆಯನ್ನೂ ಕೂಡ ನೀಡಿದ್ದರು.

ಇದನ್ನು ಓದಿದ್ದೀರಾ? ಗೂಂಡಾ ಕಾಯಿದೆ ಹೇಳಿಕೆ | ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ತಿರುಗಿಬಿದ್ದ ಬಜರಂಗದಳ!

ಈ ಹೇಳಿಕೆ ವಿವಾದವಾಗುತ್ತಿದ್ದಂತೆ ವಿಪಕ್ಷ ನಾಯಕ ಆರ್. ಅಶೋಕ್ ಕ್ಷಮೆ ಕೇಳಿದ್ದಾರಾದರೂ, ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ ಎಂದು ಲಿಖಿತ ಮನವಿಯ ಮೂಲಕ ಬಿಜೆಪಿಯನ್ನು ಒತ್ತಾಯಿಸಿದೆ.

ಆರ್ ಅಶೋಕ್ ಹೇಳಿದ್ದೇನು?

ಸದನದಲ್ಲಿ ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಎಫ್‌ಐಆರ್ ಹಾಕಿರುವ ವಿಚಾರವಾಗಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿದ್ದರು.

ಈ ವೇಳೆ, “ಮಂಗಳೂರು ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಇದೇ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಧರಣಿ ಕೂಡ ನಡೆದು, ದೊಡ್ಡ ಗಲಾಟೆಯೇ ಆಗಿತ್ತು. ಅವತ್ತು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನನ್ನ ಮೇಲೆ ಭಾರೀ ಒತ್ತಡವಿತ್ತು. ಫೋನ್‌ಗಳು ಕೂಡ ಬಂದಿತ್ತು. ಆದರೂ ಕೂಡ ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ವೇಳೆ ಯುವತಿಯರ ಮೇಲೆ ದೌರ್ಜನ್ಯ ಎಸಗಿ ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಆ ಥರ ನೀವೂ ಕೂಡ ಕ್ರಮ ಕೈಗೊಳ್ಳಿ” ಎಂದು ಈಗಿನ ಗೃಹ ಸಚಿವ ಪರಮೇಶ್ವರ್​ ಅವರಲ್ಲಿ ಆಗ್ರಹಿಸುತ್ತಿದ್ದ ಭರದಲ್ಲಿ ಆರ್.ಅಶೋಕ್ ಈ ಹೇಳಿಕೆ ನೀಡಿದ್ದರು. ಅಶೋಕ್ ಅವರ ಈ ಹೇಳಿಕೆಯ ವಿರುದ್ಧ ಬಜರಂಗದಳ ತಿರುಗಿಬಿದ್ದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...