ತಾಕತ್ತಿದ್ರೆ ಒಕ್ಕೂಟ ವ್ಯವಸ್ಥೆಯಿಂದ ತೆಗೆದು ಹಾಕಿ: ಬಿಜೆಪಿಗೆ ಸವಾಲು ಹಾಕಿದ ಶಾಸಕ ಶಿವಲಿಂಗೇಗೌಡ

Date:

  • ನಮಗೆ ಅಕ್ಕಿ ಕೊಡುವುದಿಲ್ಲ ಎಂದಾದರೆ ನಿಮಗೆ ತೆರಿಗೆ ಕೊಡುವುದಿಲ್ಲ
  • ಕೇಂದ್ರ ಸರ್ಕಾರ ತೋರುತ್ತಿರುವ ಮಲತಾಯಿ ಧೋರಣೆ ಸರಿಯಲ್ಲ

ನಿಮಗೆ ತಾಕತ್ ಇದ್ದರೆ ದೇಶದ ಒಕ್ಕೂಟ ವ್ಯವಸ್ಥೆಯಿಂದ ನಮ್ಮನ್ನ ತೆಗೆದು ಹಾಕಿ ನೋಡೋಣ ಎಂದು ಕಾಂಗ್ರೆಸ್ ನ ಶಾಸಕ ಶಿವಲಿಂಗೇಗೌಡ ಬಿಜೆಪಿಯವರನ್ನು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಕ್ಕಿ ಖರೀದಿ ವಿಚಾರದಲ್ಲಿ ರಾಜ್ಯ-ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯಿಸಿ, ನಮ್ಮ ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಜನಪರ ಕಾರ್ಯಕ್ರಮ. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ, ಬಡವರ ಹೊಟ್ಟೆ ಮೇಲೆ ಹೊಡೆಯುವುದರಿಂದ ನಿಮಗೇನು ಸಿಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಶಿವಲಿಂಗೇಗೌಡ ಪ್ರಶ್ನಿಸಿದರು.

ಇದೇ ರೀತಿ ಬಿಜೆಪಿಯವರು ತಮ್ಮ ಚಾಳಿ ಮುಂದುವರೆಸಿಕೊಂಡು ಹೋದರೆ ಲೋಕಸಭಾ ಚುನಾವಣೆಯಲ್ಲಿ ಅವರು ಅನುಭವಿಸಬೇಕಾಗುತ್ತದೆ ಎಂದು ಶಿವಲಿಂಗೇಗೌಡ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾದವರೇ ನಾವು ಅಕ್ಕಿ ಕೊಡುತ್ತೇವೆ ಎಂದಿದ್ದರು. ನಾವು ಅವರ ಮಾತಿನಂತೆಯೇ ಅಕ್ಕಿ ಕೊಡುವ ಘೋಷಣೆ ಮಾಡಿದ್ದೆವು. ಈ ಹಿನ್ನೆಲೆಯಲ್ಲಿ ಸಂಸ್ಥೆ ನಿಗದಿ ಮಾಡಿದ ದರದಲ್ಲೇ ಅಕ್ಕಿ ಕೊಡಿ ಅಂತ ಕೇಳಿದ್ದೇವೆ. ಪುಕ್ಕಟ್ಟೆ ನಾವೇನು ಕೊಡಿ ಅಂತ ಕೇಳಿಲ್ಲಎಂದು ಶಿವಲಿಂಗೇಗೌಡರು ಹೇಳಿದರು.

ಕೆಲವೊಂದು ತಾಂತ್ರಿಕ ಸಮಸ್ಯೆ ಇದ್ದರೆ ಒಪ್ಪಿಕೊಳ್ಳುತ್ತೇವೆ. ಹಾಗೆಂದ ಮಾತ್ರಕ್ಕೆ ನೀವು ಅಕ್ಕಿ ಕೊಡುವುದೇ ಇಲ್ಲ ಎಂದರೆ ಹೇಗೆ? ಹಾಗಾದರೆ ನಿಮ್ಮ ಒಕ್ಕೂಟ ವ್ಯವಸ್ಥೆಯಿಂದ ಕರ್ನಾಟಕ ರಾಜ್ಯವನ್ನು ತೆಗೆದು ಹಾಕಿ ನೋಡೋಣ ಎಂದು ಶಿವಲಿಂಗೇಗೌಡ ಸವಾಲು ಹಾಕಿದರು.

ಕೇಂದ್ರ ಸರ್ಕಾರ ರಾಜ್ಯಗಳ ಕ್ಷೇಮಾಭಿವೃದ್ಧಿಗೆ ಸ್ಪಂದಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಅದನ್ನು ಬಿಟ್ಟು ಯೋಜನೆಗೆ ಅಗತ್ಯ ಅಕ್ಕಿಯನ್ನು ಕೊಡುವುದೇ ಇಲ್ಲ ಎಂದರೆ ಹೇಗೆ ಎಂದ ಶಿವಲಿಂಗೇಗೌಡರು, ಹಾಗಿದ್ದ ಮೇಲೆ ನಮ್ಮಿಂದ ನೀವು ತೆಗೆದುಕೊಳ್ಳುವ ತೆರಿಗೆಯನ್ನು ವಾಪಸ್ ಕೊಡಿ ನೋಡೋಣ ಎಂದರು.

ಈ ಸುದ್ದಿ ಓದಿದ್ದೀರಾ?:ಸಿ ಟಿ ರವಿ ಅವರೇ ಇಲ್ಲಿದೆ ನೋಡಿ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ: ಸಿದ್ದರಾಮಯ್ಯ ಟ್ವೀಟ್

ಫುಡ್ ಸೆಕ್ಯೂರಿಟಿ ಆ್ಯಕ್ಟ್ ತಂದಿದ್ದು ನಮ್ಮ ಮನಮೋಹನ್ ಸಿಂಗ್, ಯಾರೂ ಹಸಿವಿನಿಂದ ಇರಬಾರದು ಎಂದು ತಂದಿರುವ ಫುಡ್ ಆ್ಯಕ್ಟ್ ಇದು. ಎಫ್‌ಸಿಐನಲ್ಲಿ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ, ಆದರೂ ಈಗ ಅಕ್ಕಿ ಇಲ್ಲ ಎನ್ನುತ್ತಿದ್ದೀರಾ? ಹಾಗಿದ್ದ ಮೇಲೆ ಈ ಬಗ್ಗೆ ತನಿಖೆ ಮಾಡಿಸಿ ನೋಡೋಣ ಎಂದು ಶಿವಲಿಂಗೇಗೌಡರು ಕೇಳಿದರು.

ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಸರಿಯಲ್ಲ. ರಾತ್ರಿ ಅಕ್ಕಿ ಕೊಡುತ್ತೇವೆ ಎಂದವರು, ಬೆಳಗ್ಗೆ ಅಕ್ಕಿ ಇಲ್ಲ ಅಂದ್ರೆ ಹೇಗೆ? ಪುಡ್ ಸೆಕ್ಯುರಿಟಿ ಆ್ಯಕ್ಟ್ ತಂದಿದ್ದು ಯಾಕೆ? ಎಂದು ಪ್ರಶ್ನಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...