ನಮಗೆ ಮಾರ್ಗದರ್ಶನ ಮಾಡೋಕೆ ಅಣ್ಣಾಮಲೈ ದೊಡ್ಡ ಹೀರೋನಾ?: ಎಂ ಪಿ ರೇಣುಕಾಚಾರ್ಯ

Date:

  • ಡಾ. ಕೆ ಸುಧಾಕರ್ ಮನೆಗೆ ಹೋಗಿ ಸಾಂತ್ವನ ಹೇಳಿದಿರಿ, ಬೇರೆ ಯಾರೂ ಕಾಣಲಿಲ್ವಾ?
  • ಶಾಸಕರ ಅಭಿಪ್ರಾಯ ಹಂಚಿಕೊಳ್ಳಲು ಕೂಡ ಶಾಸಕಾಂಗ ಸಭೆ ಕರೆಯಲೇ ಇಲ್ಲ

ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ಗೆಲ್ಲದವರು ನಮಗೆ ಪಾಠ ಮಾಡುತ್ತಾರೆ. ತಮಿಳುನಾಡಿನಿಂದ ಬಂದು ನಮಗೆ ಮಾರ್ಗದರ್ಶನ ಕೊಡೋಕೆ ಅಣ್ಣಾಮಲೈ ಏನು ದೊಡ್ಡ ಹೀರೋನಾ? ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಗ್ರಾಮ ಪಂಚಾಯಿತಿ ಗೆಲ್ಲದವರು ನಮಗೆ ಬಂದು ಪಾಠ ಮಾಡ್ತಾರೆ. ಅಣ್ಣಾಮಲೈ ಏನು ದೊಡ್ಡ ಹೀರೋನಾ? ಸೆಲ್ಯೂಟ್ ಹೊಡೆಯುತ್ತಿದ್ದವರಿಂದ ಬಸವರಾಜ ಬೊಮ್ಮಾಯಿ ಅವರು ಹೇಳಿಸಿಕೊಳ್ಳಬೇಕಾದ ಅನಿವಾರ್ಯತೆ, ಮುಜುಗರ ಸೃಷ್ಟಿಸಿದ್ದರು. ಇವೆಲ್ಲಾ ನನ್ನ ಮಾತುಗಳಲ್ಲ, ಕಾರ್ಯಕರ್ತರ ಭಾವನೆಗಳು. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ಹೋದ ಮೇಲೆ ಅದನ್ನು ಮತಗಳಾಗಿ ಪರಿವರ್ತನೆ ಮಾಡುವ ಮುಖಗಳು ಬೇಕಲ್ವಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಸವರಾಜ ಬೊಮ್ಮಾಯಿ ಅವರೇ ಡಾ. ಕೆ ಸುಧಾಕರ್ ಸೋತಾಗ ಅವರ ಮನೆಗೆ ಹೋಗಿ ಸಾಂತ್ವನ ಹೇಳಿಬಂದ್ರಿ. ಬೇರೆ ಯಾರೂ ಸೋತ ಅಭ್ಯರ್ಥಿಗಳು ಕಾಣಲಿಲ್ವಾ? ಎರಡು ಖಾತೆ ಕೊಡದಿದ್ದರೆ ಬಿಜೆಪಿಯನ್ನೇ ಮುಗಿಸಿಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದವರ ಮನೆಗೆ ಹೋಗಿದ್ರಿ. ನನಗೆ ಒಂದು ಫೋನ್‌ ಕಾಲ್‌ ಆದ್ರೂ ಮಾಡಿದ್ರಾ?” ಎಂದು ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫೆಬ್ರವರಿಯಿಂದಲೇ ಕಾಂಗ್ರೆಸ್‌ನವರು ಗ್ಯಾರಂಟಿಗಳನ್ನು ಕೊಡುತ್ತಾ ಹೋದರು, ನಮ್ಮವರು ಮಲಗಿದ್ದರು. ಬಿಜೆಪಿ ಪ್ರಣಾಳಿಕೆ ಜನರಿಗೆ ತಲುಪಲೇ ಇಲ್ಲ. ಸತಾಯಿಸಿ ಓಡಾಡಿಸಿ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಕೊಟ್ಟರು. ಶಾಸಕರ ಅಭಿಪ್ರಾಯ ಹಂಚಿಕೊಳ್ಳಲು ಕೂಡ ಶಾಸಕಾಂಗ ಸಭೆ ಕರೆಯಲೇ ಇಲ್ಲ. ಬಸವರಾಜ ಬೊಮ್ಮಾಯಿ ಅವರ ಕೈಕಟ್ಟಿ ಹಾಕಿದ್ದರು” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಸಿಐಡಿ, ಸಿಸಿಬಿ ಕುರಿತ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಸಿಎಂ ಸಹಮತವಿದೆಯೇ: ಬಿಜೆಪಿ ಪ್ರಶ್ನೆ

“ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬಗ್ಗೆ ಗೌರವ ಇದೆ. ಅವರು ಪ್ರವಾಸ ಮಾಡಿದ್ದಾರೆ ನಿಜ. ಆದರೆ, ಅದು ಮತಗಳಾಗಿ ಪರಿವರ್ತನೆ ಆಗಲಿಲ್ಲ. ಸೋಲಿನ ಬಳಿಕ ರಾಜ್ಯಾಧ್ಯಕ್ಷರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಿತ್ತು. ವ್ಯವಸ್ಥೆ ಸರಿಪಡಿಸಿಕೊಳ್ಳಿ, ಅವಲೋಕನ ಮಾಡಿಕೊಳ್ಳಿ. ಕಾರ್ಯಕರ್ತರನ್ನು ಬೆದರಿಸುವುದು ಬಿಡಿ” ಎಂದು ಹೇಳಿದರು.

“ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಪರ ಮಾತನಾಡಿದರೆ ಪಕ್ಷ ವಿರೋಧಿ ಚಟುವಟಿಕೆ. ಯಡಿಯೂರಪ್ಪ ವಿರುದ್ಧವಾಗಿ ಮಾತಾಡಿದರೆ ಶಹಬ್ಬಾಸ್‌ಗಿರಿ ಕೊಡ್ತಾರೆ. ಅನಿವಾರ್ಯವಾಗಿ ನಾನು ಈ ರೀತಿ ಮಾತನಾಡ್ತಿದ್ದೇನೆ. ಸೋತವರಿಗೆ ಬಿ ಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಕರೆ ಮಾಡಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಯಾರಿಗಾದ್ರೂ ಫೋನ್‌ ಮಾಡಿದ್ರಾ? ಆತ್ಮಾವಲೋಕನ ಸಭೆ ಎಂದು ಯಾರೋ ಕರೆ ಮಾಡುತ್ತಾರೆ. ಪಕ್ಷದ ಕಚೇರಿಯನ್ನು ಕೆಲವರು ಕಾರ್ಪೊರೇಟ್ ಕಚೇರಿ ಮಾಡಿಕೊಂಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...