ಕನ್ನಡದ ಬೇರೆ ಬೇರೆ ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದ ರೇಣುಕಸ್ವಾಮಿ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ದಾಖಲಿಸಿರುವ ಸ್ವ-ಇಚ್ಛಾ ಹೇಳಿಕೆಯಲ್ಲಿ ನಕಲಿ ಇನ್​ಸ್ಟಾಗ್ರಾಂ ಖಾತೆಯಿಂದ ಕನ್ನಡದ ಬೇರೆ ಬೇರೆ ನಟಿಯರಿಗೆ ರೇಣುಕಸ್ವಾಮಿ ಅಶ್ಲೀಲ ಸಂದೇಶ ಕಳಿಸಿರುವುದು ಪತ್ತೆಯಾಗಿದೆ.

ರೇಣುಲಸ್ವಾಮಿಯನ್ನು ಶೆಡ್​ಗೆ ಕರೆತಂದು ಹಲ್ಲೆ ಮಾಡುವ ಸಂದರ್ಭದಲ್ಲಿ 14ನೇ ಆರೋಪಿ ಪ್ರದೋಶ್ ರೇಣುಕಸ್ವಾಮಿಯ ಮೊಬೈಲ್ ಕಸಿದು ಅದರಲ್ಲಿ ಆತ ಮಾಡಿರುವ ಸಂದೇಶಗಳನ್ನು ಪರಿಶೀಲನೆ ಮಾಡಿದಾಗ ಗೌತಮ್ ಕೆ ಎಸ್ ಹೆಸರಿನ ನಕಲಿ ಖಾತೆಯಿಂದ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಶುಭ ಪೂಂಜಾ ಅವರಿಗೂ ಸಹ ಅಶ್ಲೀಲ ಸಂದೇಶ ಕಳಿಸಿರುವುದು ಬಯಲಾಗಿದೆ.

ಅಸಲಿಗೆ ರೇಣುಕಸ್ವಾಮಿ ಕೊಲೆ ನಡೆದು ಪ್ರಕರಣ ಹೊರಬಿದ್ದಾದ ಬಳಿಕ ಕೆಲವು ನಟಿಯರು ತಮಗೆ ‘ಗೌತಮ್’ ಹೆಸರಿನ ಖಾತೆಯಿಂದ ಇನ್​ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಬಂದಿದ್ದಾಗಿ ಹೇಳಿಕೊಂಡಿದ್ದರು. ತಾವು ಆ ಖಾತೆಯನ್ನು ಬ್ಲಾಕ್ ಮಾಡಿದ್ದಾಗಿಯೂ ಹೇಳಿಕೊಂಡಿದ್ದರು. ರೇಣುಕಸ್ವಾಮಿ ತನ್ನ ನಕಲಿ ಖಾತೆಯಿಂದ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ, ಅದೇ ಕಾರಣಕ್ಕೆ ಆತನನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ 17 ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ ರಾಗಿಣಿ ದ್ವಿವೇದಿ, “ನನ್ನ ಸಾಮಾಜಿಕ ಜಾಲತಾಣ ಖಾತೆಗಳನ್ನು ಏಜೆನ್ಸಿಯವರು ಹ್ಯಾಂಡಲ್ ಮಾಡುತ್ತಾರೆ. ಹಾಗಾಗಿ ನನಗೆ ಯಾರು ಸಂದೇಶ ಕಳಿಸಿದ್ದಾರೆ, ಇಲ್ಲ ಎಂಬ ವಿಷಯ ನನಗೆ ತಿಳಿದು ಬಂದಿಲ್ಲ” ಎಂದಿದ್ದಾರೆ.

ಇನ್ನು ನಟಿ ಶುಭಾ ಪೂಂಜಾ ಸಹ ಪ್ರತಿಕ್ರಿಯೆ ನೀಡಿದ್ದು, “ನನಗೆ ಗೌತಮ್ ಅನ್ನುವ ಹೆಸರಿನಲ್ಲಿ ಯಾವುದೇ ರೀತಿಯ ಮೇಸೆಜ್ ಬಂದಿಲ್ಲ, ಸುಖಾ ಸುಮ್ಮನೆ ನನ್ನ ಹೆಸರು ಯಾಕೆ ಪ್ರದೋಷ್ ಹೇಳಿದ್ದಾರೆ ನನಗೆ ಗೊತ್ತಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...