ಗೂಂಡಾ ಕಾಯ್ದೆ ರದ್ದುಪಡಿಸಿ, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ‘ಬಿಡುಗಡೆ ಭಾಗ್ಯ’

Date:

  • ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದ ಸರ್ಕಾರದ ಸಲಹಾ ಮಂಡಳಿ
  • ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡ ಸ್ವಘೋಷಿತ ಗೋ ರಕ್ಷಕ

ಸ್ವಘೋಷಿತ ಗೋ ರಕ್ಷಕನಾಗಿ ಗುರುತಿಸಿಕೊಂಡು ರಾಷ್ಟ್ರ ರಕ್ಷಣಾ ಪಡೆ ಎಂಬ ಕಟ್ಟಿಕೊಂಡಿದ್ದ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ಪ್ರಕರಣವನ್ನು ಸರ್ಕಾರ ರದ್ದುಪಡಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಕಳೆದ ಆಗಸ್ಟ್‌ನಲ್ಲ ಕರ್ನಾಟಕ ಸರ್ಕಾರವು ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಲ್ಲದೇ, ಕೂಡಲೇ ಸಿಸಿಬಿ ಪೊಲೀಸರು ಬಂಧಿಸಿ, ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.

ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದರು. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
puneet kerehalli order copy

ಆದೇಶ ಪ್ರತಿ

ವಿಚಾರಣೆ ನಡೆಸಿದ್ದ ಸಮಿತಿ, ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟಿದೆ ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದು, ವರದಿಯನ್ನು ಸೆ.13ರಂದು ಸರ್ಕಾರಕ್ಕೆ ಸಲ್ಲಿಸಿತ್ತು.

ಈ ವರದಿಯ ಅನ್ವಯ ಸೆ.16ರಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಆದೇಶ ಹೊರಡಿಸಿರುವ ಒಳಾಡಳಿತ ಇಲಾಖೆಯ(ಕಾನೂನು & ಸುವ್ಯವಸ್ಥೆ) ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್, ಪುನೀತ್ ಕೆರೆಹಳ್ಳಿಯನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದೆ.

ಈ ಆದೇಶದ ಬೆನ್ನಲ್ಲೇ ಪುನೀತ್ ಕೆರೆಹಳ್ಳಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸೆ.17ರ ಭಾನುವಾರದಂದು ಬಿಡುಗಡೆ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಗೂಂಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಮೊದಲ ಪ್ರಕರಣ ಇದಾಗಿದೆ.

ಹಾಸನ ಮೂಲದ ಸದ್ಯ ಬೆಂಗಳೂರಿನ ಜೆಪಿ ನಗರದಲ್ಲಿ ನೆಲೆಸಿರುವ ಪುನೀತ್‌ ಕೆರೆಹಳ್ಳಿ(32) ಮೇಲೆ 2013 ರಿಂದ 2023 ರವರೆಗೆ 10 ಪ್ರಕರಣಗಳು ದಾಖಲಾಗಿದೆ. ಸಮಾಜ ವಿರೋಧಿ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಕರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಸಾತನೂರಿನ ಬಳಿ ಗೋ ಸಾಗಣೆ ಮಾಡುತ್ತಿದ್ದ ಜಾನುವಾರು ವ್ಯಾಪಾರಿ ಮಂಡ್ಯದ ಇದ್ರೀಸ್ ಪಾಷಾ ಎಂಬಾತನ ಮೇಲೆ ಹಲ್ಲೆ ನಡೆಸಿ, ಹತ್ಯೆಗೈದ ಆರೋಪ ಪುನೀತ್‌ ಮೇಲೆ ಬಂದಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿದ್ದರು, ಆ ಬಳಿಕ ನ್ಯಾಯಾಲಯ ಜಾಮೀನು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...