ಮೊನ್ನೆ ಮೊನ್ನೆ 16 ಲಕ್ಷ ಮನರೇಗ ಫಲಾನುಭವಿಗಳ ಹೆಸರು ಕೈಬಿಟ್ಟಿದ್ದ ಕೇಂದ್ರ ಸರ್ಕಾರ

Date:

ಸಂಸತ್ತಿನಲ್ಲಿ ಜಿ ರಾಮ್ ಜಿ ಮಸೂದೆ ಮಂಡಿಸುವ ತಿಂಗಳ ಮುನ್ನ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗ) ಯೋಜನೆಯಿಂದ 16 ಲಕ್ಷ ಫಲಾನುಭವಿಗಳ ಹೆಸರನ್ನು ಕೈ ಬಿಟ್ಟಿರುವ ಸಂಗತಿ ಇದೀಗ ಬೆಳಕಿಗೆ ಬಂದಿದೆ.

ಗುರುವಾರ ಲೋಕಸಭೆಯಲ್ಲಿ ಒದಗಿಸಲಾದ ಲಿಖಿತ ಉತ್ತರದಲ್ಲಿ, ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಅವರು ಸಮಾಜವಾದಿ ಪಾರ್ಟಿಯ ಲಾಲ್ ಜಿ ವರ್ಮ ಮತ್ತು ಆನಂದ್ ಬಹಾದೂರಿಯಾ ಅವರಿಗೆ ಈ ಸಂಗತಿಯನ್ನು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮನರೇಗ ರದ್ದು ‘ಐತಿಹಾಸಿಕ ತಪ್ಪು’ – ಅಂತಾರಾಷ್ಟ್ರೀಯ ತಜ್ಞರ ಎಚ್ಚರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಅಕ್ಟೋಬರ್ 10- ನವೆಂಬರ್ 14ರ ನಡುವಣ 36 ದಿನಗಳ ಮನರೇಗ ದತ್ತಾಂಶಕ್ಕೆ ಸಂಬಂಧಿಸಿದ ಸಂಗತಿಯಿದು. ಹೀಗೆ ಹೆಸರುಗಳನ್ನು ಕೈಬಿಟ್ಟಿರುವುದು ಕಾಲ ಕಾಲಕ್ಕೆ ಜರುಗುವ ಮಾಮೂಲು ವಿದ್ಯಮಾನ. ನಕಲಿ ಜಾಬ್ ಕಾರ್ಡ್ ಗಳು, ಕೂಲಿಕಾರರ ಕಾಯಂ ವಲಸೆ, ಪಂಚಾಯಿತಿಗಳ ಮರು ವರ್ಗೀಕರಣ ಹಾಗೂ ಸಾವುಗಳ ಹಿನ್ನೆಲೆಯಲ್ಲಿ ಪರಿಷ್ಕರಣೆ ನಡೆಯುತ್ತಿರುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಆದರೆ ಇದೇ ವರ್ಷಾರಂಭದಲ್ಲಿ ಶುರುವಾದ ಆಧಾರ್ ಆಧರಿತ ಕೆವೈಸಿ ತಾಳೆ ಪ್ರಕ್ರಿಯೆಯೇ ಲಕ್ಷಗಟ್ಟಲೆ ಹೆಸರುಗಳನ್ನು ಕೈಬಿಟ್ಟಿರುವ ಹಿಂದಿನ ಅಸಲು ಕಾರಣ. ಕೆವೈಸಿ ಸಂಖ್ಯೆ ಹೊಂದಿಸುವ ಪ್ರಕ್ರಿಯೆಯ ಅವಧಿಯಲ್ಲಿ 27 ಲಕ್ಷ ಹೆಸರುಗಳನ್ನು ಕೈಬಿಡಲಾಗಿದೆ ಎಂಬುದು ಪ್ರತಿಪಕ್ಷಗಳ ಗಂಭೀರ ಆಪಾದನೆ.

ಮನರೇಗ ಯೋಜನೆಯ ಶೇ.56ಕ್ಕಿಂತ ಹೆಚ್ಚು ಕಾರ್ಮಿಕರು ಇ-ಕೆವೈಸಿ ಅಗತ್ಯಗಳನ್ನು ಪೂರೈಸಿದ್ದಾರೆ. ಶೇ.99.7ರಷ್ಟು ಸಕ್ರಿಯ ದಾಖಲೆಗಳಿಗೆ ಆಧಾರ್ ಸಂಪರ್ಕ ಕಲ್ಪಿಸಲಾಗಿದೆ. ಸಾಚಾ ಕಾರ್ಮಿಕರನ್ನು ಗುರುತಿಸಲು ಕೈವೈಸಿ ಪ್ರಕ್ರಿಯೆ ಸಹಾಯಕವಾಗಿದೆ ಎಂಬುದು ಸಚಿವರ ಹೇಳಿಕೆ.

2019-20ರಿಂದ ಹತ್ತಾರು ಲಕ್ಷ ಕಾರ್ಮಿಕರ ಹೆಸರುಗಳನ್ನು ಕಾಲ ಕಾಲಕ್ಕೆ ಕೈಬಿಡುತ್ತ, ಸೇರಿಸುತ್ತ ಬರಲಾಗಿದೆ. 2024-25ರ ಒಂದೇ ಆರ್ಥಿಕ ವರ್ಷದಲ್ಲಿ 38.50 ಲಕ್ಷ ಕಾರ್ಮಿಕರ ಜಾಬ್ ಕಾರ್ಡ್‌ಗಳನ್ನು ರದ್ದು ಮಾಡಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...