ಸಿದ್ದರಾಮಯ್ಯ ಸರ್ಕಾರದಿಂದ ವಿರೋಧಿಗಳ ಮೇಲೆ ದಮನಕಾರಿ ಕ್ರಮ: ಕುಮಾರಸ್ವಾಮಿ ಆಕ್ರೋಶ

Date:

“ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಮ್ಮ ವಿರೋಧಿಗಳ ವಿರುದ್ಧ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ” ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಇಂದು ಪಕ್ಷದ ವರಿಷ್ಠ ದೇವೇಗೌಡರೊಂದಿಗೆ ಕರೆಯಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಧಿಕಾರವನ್ನು ದುರುಪಯೋಗಪಡಿಸುತ್ತಿದೆ. ಇವತ್ತು ನಮ್ಮ ಎನ್‌ಡಿಎ ಮಿತ್ರಕೂಟದ ಬಿಜೆಪಿ ಹಾಗೂ ಸಂಘಟನೆಗಳ ಕಾರ್ಯಕರ್ತರ ಹಲವಾರು ವರ್ಷಗಳ ಹಿಂದಿನ ಪ್ರಕರಣಗಳನ್ನು ಕೆದಕುತ್ತಿದೆ. ನಾನಾ ಕಾರಣ ನೀಡಿ ಅಧಿಕಾರವನ್ನು ದುರುಪಯೋಗ ಪಡಿಸುತ್ತಿದೆ” ಎಂದು ಕಿಡಿಕಾರಿದರು.

“ಒಂದು ಕಡೆ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವು ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದಲ್ಲಿ ಹಲವಾರು ಸಮಸ್ಯೆಗಳನ್ನು ನಾವು ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಕರಸೇವಕರ ಬಂಧನ ಮಾಡಿ, ಆ ಮೂಲಕ ಇಂತಹ ವಿಷಯಗಳನ್ನು ಮುನ್ನೆಲೆಗೆ ತಂದು ನೈಜ ವಿಷಯಗಳು ಚರ್ಚೆಯಾಗದಂತೆ ದಾರಿತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣ ದೊಡ್ಡದು ಮಾಡಿದ್ದಾರೆ. ಎಲ್ಲ ಕೇಸ್ ಖುಲಾಸೆ ಆಗಿದೆ ಎಂಬುದನ್ನು ಮಾಧ್ಯಮಗಳೇ ತೋರಿಸಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಇ ಡಿ ಅಧಿಕಾರಿಗಳ ಮೇಲೆ ಗುಂಪಿನಿಂದ ದಾಳಿ; ವಾಹನಗಳ ಮೇಲೆ ಕಲ್ಲು ತೂರಾಟ

“ಕರ ಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಹುಬ್ಬಳ್ಳಿ ಈದ್ಗಾ ಮೈದಾನದ ವಿಚಾರದಲ್ಲಿ ಗಲಾಟೆ ಆದಾಗ ದೇವೇಗೌಡರು ಹೇಗೆ ನಿಭಾಯಿಸಿದರು ಅಂತ ಎಲ್ಲರಿಗೂ ಗೊತ್ತಿದೆ. ಈ ಸರ್ಕಾರ ವಿರೋಧಿಗಳ ಮೇಲೆ ದಬ್ಬಾಳಿಕೆ ಮಾಡುವ ಕೆಲಸ ಮಾಡುತ್ತಿದೆ” ಎಂದು ಟೀಕಿಸಿದರು.

“ಮರಕಡಿದ ಪ್ರಕರಣದಲ್ಲಿ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಎಂಬುವವರ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಂಸದ ಪ್ರತಾಪ್ ಸಿಂಹರನ್ನು ಕೇಸಿನಲ್ಲಿ ಸಿಕ್ಕಿಸಿಹಾಕಲು ಯತ್ನಿಸಲಾಗಿದೆ. ಇದು ನಾಚಿಕೆಗೇಡು” ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...