ಗಣರಾಜ್ಯೋತ್ಸವ | ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರ ನಿರಾಕರಣೆ; ನಾಡಿನ ಅಸ್ಮಿತೆಯ ಮೇಲೆ ದಾಳಿ ಎಂದ ಸಿದ್ದರಾಮಯ್ಯ

Date:

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ” ಎಂದು ಆರೋಪಿಸಿದ್ದಾರೆ.

“ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ, ಕಿತ್ತೂರು ಚೆನ್ನಮ್ಮ, ಬ್ರಾಂಡ್ ಬೆಂಗಳೂರು ಹಾಗೂ ಕರ್ನಾಟಕದ ನೈಸರ್ಗಿಕ ವ್ಯವಸ್ಥೆ ಕುರಿತು ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಡುದ್ವೇಷದ ಕತ್ತಲ ಯುಗದಲ್ಲಿ ಬೆಳ್ಳಂಬೆಳಕಿನ ತೀರ್ಪು

“ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ” ಎಂದು ದೂರಿದ್ದಾರೆ.

“ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು” ಎಂದು ಒಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...