ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ; ಅನುಮತಿಗಾಗಿ ಯುಪಿ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ

Date:

ರಾಮಮಂದಿರ ಉದ್ಘಾಟನೆ ಹಿನ್ನೆಲೆ, ಅಯೋಧ್ಯೆಯಲ್ಲಿ‌ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶದ ಯೋಗಿ ಸರ್ಕಾರಕ್ಕೆ ಪತ್ರ ಬರೆದಿದೆ.

ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, “ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು, ರಾಮಭಕ್ತರು ಅಯೋಧ್ಯೆಗೆ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅವರಿಗೆ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಪತ್ರದ ಮೂಲಕ ಮನವಿ” ಮಾಡಿದೆ.

5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಾಣ ಮಾಡಲು ಸಿದ್ಧವಿದೆ ಅನುಮತಿ ನೀಡಿ ಎಂದು ಮನವಿಯಲ್ಲಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...