ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಪುನರಾರಂಭಿಸಲು ಸಿಎಂ ಸಿದ್ದರಾಮಯ್ಯಗೆ ಆಗ್ರಹ

Date:

  • ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯಿಂದ ಸಿಎಂಗೆ ಪತ್ರ
  • ಡಿಪ್ಲೊಮಾ ಕೋರ್ಸ್‌ ರದ್ದು ಮಾಡಿರುವುದು ರೈತ ವಿರೋಧಿ ನಡೆ ಎಂದು ಟೀಕೆ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಡಿಪ್ಲೊಮಾ ಕೋರ್ಸ್‌ಗಳನ್ನು ರದ್ದು ಪಡಿಸಿರುವ ನಿರ್ಧಾರವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ.

ಈ ಕುರಿತು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, “ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿರುವ ಕೃಷಿ ಡಿಪ್ಲೊಮಾ ಕೋರ್ಸ್‌ಗಳನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ರೈತ ವಿರೋಧಿಯಾಗಿದೆ” ಎಂದು ಟೀಕಿಸಿದ್ದಾರೆ.

“ಧಾರವಾಡ ಮತ್ತು ಬೆಂಗಳೂರಿನಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳು, ಕೃಷಿ ಅರಣ್ಯಕರಣ ಮತ್ತು ರೇಷ್ಮೆ ಸಾಕಾಣಿಕೆಗಳಲ್ಲಿ ಎರಡು ವರ್ಷಗಳ ಕನ್ನಡ ಮಾಧ್ಯಮ ಡಿಪ್ಲೊಮಾ ಕೋರ್ಸ್‌ಗಳ‌ ಪ್ರವೇಶಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೃಷಿ ವಿಶ್ವವಿದ್ಯಾಲಯಗಳು ಅಧಿಸೂಚನೆಯನ್ನು ಹಿಂಪಡೆದಿವೆ. ಇದರಿಂದಾಗಿ ಬಡ ವರ್ಗದ ರೈತಾಪಿ ಮಕ್ಕಳು ಕಡಿಮೆ ವೆಚ್ಚದಲ್ಲಿ ಕೃಷಿ ತರಬೇತಿ ಪಡೆಯುವಲ್ಲಿ ವಂಚಿತರಾಗಲಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈದಿನ ವಿಶೇಷ | ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಸ್ಥಗಿತ, ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಬರೆ ಎಳೆದ ಸರ್ಕಾರ!

“ಸರ್ಕಾರವು ಸಾಕಷ್ಟು ಹಣಕಾಸು ಬೆಂಬಲ ನೀಡದೇ ಇರುವದು ಸಹ ಕೋರ್ಸ್‌ ಸ್ಥಗಿತಕ್ಕೆ ಕಾರಣ ಎನ್ನಲಾಗುತ್ತಿದೆ. ಕೇವಲ 5 ಸಾವಿರ ರೂ.ಗಳ ಶುಲ್ಕದಲ್ಲಿ ರಾಜ್ಯದ ಬಡ ರೈತರ ಮಕ್ಕಳು ಈ ಕೋರ್ಸ್‌ಗೆ ಪ್ರವೇಶ ಪಡೆಯಬಹುದಿತ್ತು. ಅಲ್ಲದೇ ಇಂತಹ ಡಿಪ್ಲೊಮಾ ಕೋರ್ಸ್‌ಗಳನ್ನು ಪಾಸು ಮಾಡಿದ ಯುವಕರಿಗೆ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ದೊರೆಯುತ್ತಿದ್ದವು” ಎಂದು ಮನವರಿಕೆ ಮಾಡಿದ್ದಾರೆ.

“ರಾಜ್ಯ ಸರ್ಕಾರ ಕೂಡಲೇ ಕೃಷಿ ವಿಶ್ವವಿದ್ಯಾಲಯಗಳಿಗೆ ಸೂಕ್ತ ಆದೇಶ ನೀಡುವ ಮೂಲಕ ಕೃಷಿ ವಿಜ್ಞಾನ ಡಿಪ್ಲೊಮಾ ಕೋರ್ಸ್‌ಗಳನ್ನು ಮತ್ತೆ ಆರಂಭಿಸಲು ಸೂಚಿಸಬೇಕು” ಎಂದು ಪತ್ರ ಮೂಲಕ 11 ಸದಸ್ಯರು ಸಹಿಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕೋರಿದ್ದಾರೆ.

ಬಿಜೆಪಿ ಆದೇಶವನ್ನೇ ಮುಂದುವರಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ 2023-24ನೇ ಸಾಲಿನ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರದ ಆದೇಶ‌ಕ್ಕೆ ತಲೆಬಾಗಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ವಿವಿಗಳು ಹಿಂಪಡೆದಿವೆ. ಈ ಕುರಿತು ಈ ದಿನ.ಕಾಮ್‌ ವಿಶೇಷ ವರದಿ ಪ್ರಕಟಿಸಿತ್ತು.

ಕೃಷಿ ವಿಶ್ವವಿದ್ಯಾಲಯಗಳಲ್ಲಿ ದಶಕದ ಹಿಂದೆ ರಾಜ್ಯ ಸರ್ಕಾರ ಆರಂಭಿಸಿದ್ದ ಎರಡು ವರ್ಷದ ಡಿಪ್ಲೊಮಾ ಕೋರ್ಸ್‌ಗಳನ್ನು ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಸ್ಥಗಿತಗೊಳಿಸಿದೆ. ಪರಿಣಾಮ ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಬರೆ ಎಳೆದಂತಾಗಿದೆ. ಕಾಂಗ್ರೆಸ್‌ ಸರ್ಕಾರ ಕೂಡ ಈ ಬಗ್ಗೆ ಪರಿಶೀಲಿಸದೆ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದುವರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...