ಚನ್ನಪಟ್ಟಣ ಟಿಕೆಟ್‌ ಸಿ ಪಿ ಯೋಗೇಶ್ವರ್‌ಗೆ ಕೊಡಲು ಹೈಕಮಾಂಡ್​ ಬಳಿ ಮನವಿ : ಆರ್‌ ಅಶೋಕ್

Date:

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್​​ ಅನ್ನು ನಮ್ಮ ಪಕ್ಷದ ನಾಯಕ ಸಿ ಪಿ ಯೋಗೇಶ್ವರ್ ಅವರಿಗೆ ನೀಡುವಂತೆ ಹೈಕಮಾಂಡ್​ ಬಳಿ ಮನವಿ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್​. ಅಶೋಕ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು, ಅಶ್ವತ್ಥನಾರಾಯಣ ಸೇರಿ ಸಿ ಪಿ ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಹೆಚ್ ಡಿ.ಕುಮಾರಸ್ವಾಮಿ ಅವರ ಜೊತೆಗೂ ಚರ್ಚೆ ಮಾಡಿದ್ದೇವೆ. ಸಿ ಪಿ ಯೋಗೇಶ್ವರ್‌ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ‌ ಕೇಳುತ್ತೇವೆ” ಎಂದರು.

ಸರ್ಕಾರದ ವಿರು‌ದ್ಧ ಬಿಜೆಪಿ ಹೋರಾಟ ದೆಹಲಿ ಮಟ್ಟಕ್ಕೆ ತೆಗೆದುಕೊಂಡು ಹೋಗುವ ವಿಚಾರವಾಗಿ ಮಾತನಾಡಿ, “ಜೆಡಿಎಸ್‌ ನಾಯಕರ ಜೊತೆ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಪ್ರಾಥಮಿಕ ಹಂತದಲ್ಲಿದೆ. ಗುರುವಾರ ಕೋರ್ಟ್​ನಲ್ಲಿ ಕೇಸ್ ಕೂಡ ಬರಲಿದೆ. ಮುಂದೆ ಚರ್ಚೆ ಮಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಕಾಂಗ್ರೆಸ್​ ನಾಯಕರ ಆರೋಪದ ವಿಚಾರವಾಗಿ ಮಾತನಾಡಿ, “ಸಿದ್ದರಾಮಯ್ಯ ಸರ್ಕಾರ ಹಗರಣದಲ್ಲಿ ಸಿಲುಕಿದೆ. ಹೀಗಾಗಿ ಜನರ ಮನಸ್ಸಿನ ವಿಷಯ ಡೈವರ್ಟ್ ಮಾಡುತ್ತಿದ್ದಾರೆ ಅಷ್ಟೇ. ಡಿಕೆ ಶಿವಕುಮಾರ್​ ದೆಹಲಿಗೆ ಹೋಗಿ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಸರ್ಕಾರ ಇರುತ್ತದೋ, ಬೀಳುತ್ತದೋ ಎಂಬ ಆತಂಕದಲ್ಲಿದ್ದಾರೆ. ನಾವ್ಯಾರು ಕೂಡ ರಾಜ್ಯ ಕಾಂಗ್ರೆಸ್​ ಸರ್ಕಾರವನ್ನು ಬೀಳಿಸುವುದಿಲ್ಲ. ಯಾವ ಲೀಡರ್ ನಿಮ್ಮ ಬಳಿ ಬಂದು ಮಾತಾಡಿದ್ದಾರೆ ಹೆಸರು ಹೇಳಿ” ಎಂದು ಪ್ರಶ್ನಿಸಿದರು.

ಕೊಲೆ ಆರೋಪಿ ದರ್ಶನ್​ಗೆ ಜೈಲಿನಲ್ಲಿ ರಾಜಾತಿಥ್ಯ ವಿಚಾರವಾಗಿ ಪ್ರತಿಕ್ರಿಯಿಸಿ, “ಫೋಟೋ ತೆಗೆಯಲು ಮೊಬೈಲ್ ಎಲ್ಲಿಂದ ಬಂತು. ಇದೆಲ್ಲ ನುಣುಚಿಕೊಳ್ಳುವ ವಿಚಾರ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ. ಇಷ್ಟೆಲ್ಲ ಅಪರಾಧ ಪ್ರಕರಣಗಳು ನಡೆಯುತ್ತಿದ್ದರೂ, ಕೆಲವು ಮಂತ್ರಿಗಳು ನಮಗೆ ಯಾವ ಖಾತೆ ಸಿಗುತ್ತದೆ, ಯಾವ ಖಾತೆ ಹೋಗುತ್ತದೆ ಅಂತ ಭೀತಿಯಲ್ಲಿದ್ದಾರೆ. ಜೈಲಿನಲ್ಲಿ ನಡೆದ ಘಟನೆ ಬಗ್ಗೆ ಸರ್ಕಾರ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...